ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಟ್ಲಾಂಟ ಚಾಪ್ಟರ್ ಉದ್ಘಾಟನೆ: ಅನಿಲ್ ಬೊಡ್ಡಿರೆಡ್ಡಿ ಅಧ್ಯಕ್ಷರಾಗಿ ಆಯ್ಕೆ

Date:

ಅಮೆರಿಕದ ಅಟ್ಲಾಂಟ ನಗರದಲ್ಲಿ ‘ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್’ (ಐಒಸಿ) ತನ್ನ ನೂತನ ಶಾಖೆಯನ್ನು (ಚಾಪ್ಟರ್) ಔಪಚಾರಿಕವಾಗಿ ಪ್ರಾರಂಭಿಸಿದೆ. ನೂತನ ಅಧ್ಯಕ್ಷರಾಗಿ ಅನಿಲ್ ಬೊಡ್ಡಿರೆಡ್ಡಿ ಆಯ್ಕೆಯಾಗಿದ್ದಾರೆ.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಐಒಸಿ ಅಮೆರಿಕ ಘಟಕದ ಅಧ್ಯಕ್ಷ ಮೊಹಿಂದರ್ ಸಿಂಗ್ ಗಿಲ್ಜಿಯನ್, “ಅನಿವಾಸಿ ಭಾರತೀಯರು ತಮ್ಮ ಮಾತೃಭೂಮಿಯ ಸಾಮಾಜಿಕ ಜವಾಬ್ದಾರಿಯನ್ನು ಮರೆಯಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಮಾದಕ ದ್ರವ್ಯ ಸಾಗಾಟ ಆರೋಪ : ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

ವಿಶೇಷವಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಎನ್ಆರ್‌ಐಗಳು ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಜತೆಗೆ, ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ಮೌಲ್ಯಗಳನ್ನು ಶಕ್ತಿಯುತವಾಗಿ ಬೇರೂರಿಸಲು ಕಾಂಗ್ರೆಸ್ ಪಕ್ಷ ಕೈಗೊಂಡ ನಿರ್ಧಾರಗಳ ಕುರಿತು ವಿವರಿಸಿದರು.

ಅಂತರ್ಜಾಲದ (ಝೂಮ್) ಮುಖೇನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐಒಸಿ ಚೇರ್ಮನ್ ಸ್ಯಾಮ್ ಪಿತ್ರೋಡ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿಗಳ ಪಾತ್ರವನ್ನು ಸ್ಮರಿಸಿದರು. “ಮಹಾತ್ಮ ಗಾಂಧಿ, ಪಂಡಿತ್ ನೆಹರೂ, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಾಯಿ ಪಟೇಲ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ನಾಯಕರು ವಿದೇಶಗಳಿಂದ ಭಾರತಕ್ಕೆ ಮರಳಿ ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನ ರಚನೆಗಾಗಿ ಮಹತ್ತರ ತ್ಯಾಗ ಮಾಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

ಪ್ರಸ್ತುತ ಭಾರತದಲ್ಲಿ ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಗೆ ಧಕ್ಕೆ ಬಂದಾಗಲೆಲ್ಲ ಅನಿವಾಸಿಗಳು ಒಕ್ಕೊರಲಿನಿಂದ ಧ್ವನಿ ಎತ್ತಬೇಕು ಎಂದು ವಿನಂತಿಸಿದರು. ದೇಶದಲ್ಲಿ ಯುವಜನತೆ (ಝೆನ್-ಜಿ) ಶಿಕ್ಷಣ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಆಂದೋಳನ ರೂಪಿಸಿದೆ. ಈ ನ್ಯಾಯಯುತ ಹೋರಾಟಕ್ಕೆ ಅನಿವಾಸಿಗಳು ಪೂರ್ಣ ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದರು.

ಅಟ್ಲಾಂಟ ಚಾಪ್ಟರ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅನಿಲ್ ಬೊಡ್ಡಿರೆಡ್ಡಿ ಮಾತನಾಡಿ, ಉದ್ಯಮ ಹಾಗೂ ಪ್ರವಾಸೋದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿರುವ ಅಟ್ಲಾಂಟದಲ್ಲಿ ಅಪಾರ ಸಂಖ್ಯೆಯ ಕನ್ನಡಿಗರು ಮತ್ತು ಭಾರತೀಯರು ನೆಲೆಸಿದ್ದಾರೆ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇಂದಿನವರೆಗೆ ಕಾಂಗ್ರೆಸ್ ಪಕ್ಷ ಭಾರತಕ್ಕೆ ನೀಡಿರುವ ಕೊಡುಗೆಗಳನ್ನು ಇಲ್ಲಿನ ಅನಿವಾಸಿಗಳಿಗೆ ಮನದಟ್ಟು ಮಾಡಿ, ಈ ಪ್ರದೇಶದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದಾಗಿ ವಚನ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ...

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು...