ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ

Date:

ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ ಪ್ರದೇಶದಲ್ಲಿ 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಈ ದಾಳಿಯ ಹಿಂದೆ ಜನಾಂಗೀಯ ದ್ವೇಷವೇ ಕಾರಣವಾಗಿದೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ಪತ್ತೆಗೆ ಸಿಸಿಟಿವಿ ದೃಶ್ಯ ಬಿಡುಗಡೆ ಮಾಡಿದ್ದಾರೆ. ಶನಿವಾರ (ಅಕ್ಟೋಬರ್ 26) ರಾತ್ರಿ ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶದಲ್ಲಿ ಸಂತ್ರಸ್ತ ಮಹಿಳೆ ರಸ್ತೆಯ ಮಧ್ಯೆ ಅಳುತ್ತಾ ಕುಳಿತಿದ್ದುದನ್ನು ಕಂಡು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪ್ರಾಥಮಿಕ ವಿಚಾರಣೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಇದು ಯುವತಿಯ ಮೇಲಿನ ಅತ್ಯಂತ ಭಯಾನಕ ದಾಳಿ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲು ನಾವು ಎಲ್ಲ ಕ್ರಮಗಳನ್ನೂ ಕೈಗೊಂಡಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯದಲ್ಲಿ ಸಿಕ್ಕಿರುವ ಆರೋಪಿಯ ಚಿತ್ರವನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದು, ಆತನ ಕುರಿತು ಯಾವುದೇ ಮಾಹಿತಿ ಇರುವವರು ಪೊಲೀಸರಿಗೆ ಸಹಕಾರ ನೀಡುವಂತೆ ವಿನಂತಿಸಿದ್ದಾರೆ. “ಯಾರಾದರೂ ಆ ಸಮಯದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನು ನೋಡಿದ್ದರೆ ಅಥವಾ ಡ್ಯಾಶ್‌ಕ್ಯಾಮ್ ದೃಶ್ಯಗಳಿದ್ದರೆ ನಮ್ಮ ತನಿಖೆಗೆ ಅದು ಬಹಳ ಸಹಾಯಕವಾಗುತ್ತದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಈ ಘಟನೆಗೆ ರಾಜಕೀಯ ವಲಯದಲ್ಲಿಯೂ ಖಂಡನೆ ವ್ಯಕ್ತವಾಗಿದೆ. ಕಾವೆಂಟ್ರಿ ಸೌತ್ ಸಂಸದೆಯಾದ ಝರಾ ಸುಲ್ತಾನಾ “ಪಂಜಾಬಿ ಮೂಲದ ಮಹಿಳೆಯ ಮೇಲಿನ ಈ ದಾಳಿ ಭಯಾನಕವಾಗಿದೆ. ಇತ್ತೀಚೆಗೆ ಓಲ್ಡ್‌ಬರಿಯಲ್ಲಿ ಸಿಖ್ ಮಹಿಳೆಯ ಮೇಲೂ ಇದೇ ರೀತಿಯ ಘಟನೆ ನಡೆದಿದೆ. ಜನಾಂಗೀಯತೆ ಮತ್ತು ಸ್ತ್ರೀದ್ವೇಷವು ಒಟ್ಟಾಗಿ ಕೆಲಸ ಮಾಡುತ್ತಿರುವುದನ್ನು ಈ ಘಟನೆ ತೋರಿಸುತ್ತದೆ. ನಾವು ಒಗ್ಗಟ್ಟಾಗಿ ಜನಾಂಗೀಯತೆ, ಫಾಸಿಸಂ ಮತ್ತು ಸ್ತ್ರೀದ್ವೇಷದ ವಿರುದ್ಧ ಹೋರಾಡಬೇಕು” ಎಂದು ತಿಳಿಸಿದ್ದಾರೆ.

ಲೇಬರ್ ಪಕ್ಷದ ಸಂಸದೆಯಾದ ಪ್ರೀತ್ ಕೌರ್ ಗಿಲ್ ಕೂಡ ಈ ಘಟನೆಯನ್ನು “ಅತ್ಯಂತ ದುಃಖದ ಹಾಗೂ ಆತಂಕಕಾರಿ” ಎಂದು ಹೇಳಿದ್ದಾರೆ.

ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಆರೋಪಿ ಶೀಘ್ರದಲ್ಲೇ ಬಂಧನಕ್ಕೆ ಒಳಗಾಗುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...