ಸಿಂಗಾಪುರದಲ್ಲಿ ಭಯವಿಲ್ಲದ ತಡರಾತ್ರಿ ನಡಿಗೆ; ಭಾರತೀಯ ಮಹಿಳೆಯ ವಿಡಿಯೋ ವೈರಲ್

Date:

ಸಿಂಗಾಪುರದಲ್ಲಿ ವಾಸಿಸುವ ಭಾರತೀಯ ಮಹಿಳೆಯೊಬ್ಬರು, ತಡರಾತ್ರಿಯಲ್ಲಿ ತಾವು ಮನೆಗೆ ಹಿಂತಿರುಗುವಾಗ ಚಿತ್ರೀರಿಸಿದ ಹಂಚಿಕೊಂಡ ವಿಡಿಯೋ ಚರ್ಚೆಗೆ ನಾಂದಿ ಹಾಡಿದೆ. ಅವರು ಸಿಂಗಾಪುರದಲ್ಲಿ ನಡುರಾತ್ರಿಯಲ್ಲೂ ಭಯವಿಲ್ಲದೆ ರಸ್ತೆಯಲ್ಲಿ ಓಡಾಡಬಹುದಾದ ಮತ್ತು ಮಹಿಳೆಯರಿಗೆ ಇರುವ ಸುರಕ್ಷತೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾತ್ರಿಯಲ್ಲಿ ಮಹಿಳೆಯರು ಒಂಟಿಯಾಗಿ ನಡೆಯುವುದು ಅಸಮಾನ್ಯವಾದುದ್ದಲ್ಲ ಎಂದು ಹೇಳಿದ್ದಾರೆ.

- Advertisement -

ಭಾರತದ ಮೂಲದ ಮಹಿಳೆ ಕೃತಿಕಾ ಜೈನ್ ಅವರು ತಾವು ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ ಖಾಲಿ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ; ಶಾಂತ ಮತ್ತು ನಿರ್ಜನ ಬೀದಿಗಳು, ಶಾಂತಿಯುತ ವಾತಾವರಣ ಹಾಗೂ ಜೈನ್‌ ಅವರು ಯಾವುದೇ ಭಯದ ಗೋಚರತೆ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಸಿಂಗಾಪುರದಲ್ಲಿ, ತಾನು ಬೆಳಗಿನ ಜಾವ 3 ಗಂಟೆಗೆ ಒಂಟಿಯಾಗಿ ನಡೆದುಕೊಂಡು ಮನೆಗೆ ಬರಲು ಸಾಧ್ಯವಾಯಿತು. ಭಯ ಅಥವಾ ಹಿಂಜರಿಕೆಯಿಲ್ಲದೆ ಆರಾಮದಾಯವಾಗಿ ನಡೆದುಕೊಂಡು ಬಂದಿದ್ದೇನೆ. ಭಯದಿಂದ ಹಿಂತಿರುಗಿ ನೋಡುವ ಅಗತ್ಯವಿರಲಿಲ್ಲ. ಆದರೆ, ಭಾರತದಲ್ಲಿ ಇಷ್ಟು ತಡರಾತ್ರಿಯಲ್ಲಿ ಒಂಟಿಯಾಗಿ ಹೊರಗೆ ಹೋಗುವುದನ್ನು ಊಹಿಸಲೂ ಸಾಧ್ಯವಿಲ್ಲ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಜೈನ್ ಪ್ರಕಾರ, ರಾತ್ರಿಯಲ್ಲಿ ಒಂಟಿಯಾಗಿ ನಡೆಯುವುದು ಸಿಂಗಾಪುರದಲ್ಲಿ ಸಾಮಾನ್ಯ. ಅದನ್ನು ಒಂದು ಸವಲತ್ತು ಎಂದು ನೋಡಲಾಗುವುದಿಲ್ಲ. ಬದಲಿಗೆ, ಇದು ದೈನಂದಿನ ಜೀವನದ ನೈಸರ್ಗಿಕ ಭಾಗವಾಗಿದೆ. ಈ ಭದ್ರತಾ ಪ್ರಜ್ಞೆಯು ಮಹಿಳೆಯರಿಗೆ ತುಂಬಾ ಮುಖ್ಯ. ಇದನ್ನು ಎಂದಿಗೂ ಹಗುರವಾಗಿ ಪರಿಗಣಿಸಲಾಗದು. ಸಿಂಗಾಪುರದ ಮೇಲಿನ ಪ್ರೀತಿಯು ಅದರ ಎತ್ತರದ ಕಟ್ಟಡಗಳ ಕಾರಣಕ್ಕಾಗಿಯಲ್ಲ, ಅಲ್ಲಿನ ಸುರಕ್ಷಿತ ಪರಿಸರದಿಂದ ಕಾರಣಕ್ಕಾಗಿ ಬೆಳೆಯುತ್ತದೆ.

ಅವರ ಪೋಸ್ಟ್‌ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ಅಲ್ಲಿ 1 ತಿಂಗಳು ವಾಸಿಸುತ್ತಿದ್ದೇನೆ. ಇದು ಅದ್ಭುತವಾದ ಸ್ಥಳವಾಗಿದ್ದರೂ ದುಬಾರಿಯೂ ಆಗಿದೆ. ಆದರೆ, ಅಲ್ಲಿನ ಜನರ ನಾಗರಿಕ ಪ್ರಜ್ಞೆ ಅದ್ಭುತವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಇದು ನಿಜ. ನಾನು ಮಧ್ಯರಾತ್ರಿಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಆಸ್ಪತ್ರೆಗೆ ಹೋಗುತ್ತಿದ್ದೆ… ಸಿಂಗಾಪುರ ರಾತ್ರಿಯಲ್ಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂಬ ಅನುಭವ ನನಗೂ ಆಯಿತು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...