ಮಾಲ್ಡೀವ್ಸ್‌| ಸೇತುವೆ ದುರಸ್ತಿ ವೇಳೆ ಭಾರತೀಯ ಕಾರ್ಮಿಕ ಸಾವು; ಎರಡು ತಿಂಗಳಲ್ಲಿ 2ನೇ ಪ್ರಕರಣ

Date:

ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

- Advertisement -

ಮೇ ಮತ್ತು ಜೂನ್ ತಿಂಗಳಲ್ಲಿ ಭಾರತೀಯ ಕಾರ್ಮಿಕ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಪೊಲೀಸರು ಮೃತರನ್ನು ಭಾರತೀಯ ಪ್ರಜೆ ಎಂದು ಗುರುತಿಸಿದ್ದಾರೆ. ಆದರೆ ಅಧಿಕ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುದ್ದಿ ಪೋರ್ಟಲ್ ಸನ್‌.ಎಂವಿ ಪ್ರಕಾರ, ಸೋಮವಾರ ರಾತ್ರಿ ಸಿನಮಲೆ ಸೇತುವೆಯ ಮೇಲೆ ದುರಸ್ತಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನಿಗೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾನೆ. ಕಾರ್ಮಿಕನನ್ನು ಹುಲ್‌ಹುಮಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದುವಷ್ಟರಲ್ಲಿ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಸಿನಮಲೆ ಸೇತುವೆಯು ಮಲೆ ನಗರವನ್ನು ಹುಲ್ಹುಲೆಗೆ ಸಂಪರ್ಕಿಸುತ್ತದೆ. ಹುಲ್ಹುಲೆಯಲ್ಲಿ ವೆಲನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇನ್ನು ಈ ಸೇತುವೆಯ ಕೆಲಸವನ್ನು ಚೀನಾ ಕಮ್ಯುನಿಕೇಶನ್ಸ್ ಕನ್ಸ್ಟ್ರಕ್ಷನ್ ಕಂಪನಿ (ಸಿಸಿಸಿಸಿ) ನಡೆಸುತ್ತಿದೆ ಎಂದು ಸನ್‌.ಎಂವಿ ವರದಿ ಮಾಡಿದೆ.

ಇದಕ್ಕೂ ಮುನ್ನ ಮೇ 3ರಂದು 30 ವರ್ಷದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದರು. ಹುಲ್ಹುಮಲೆ ಆವೃತದಲ್ಲಿ ಅಗೆಯುವ ಕೆಲಸ ಮಾಡುವಾಗ ಭಾರತೀಯ ಯುವಕ ಗಾಯಗೊಂಡಿದ್ದು ಬಳಿಕ ಸಾವನ್ನಪ್ಪಿದ್ದಾನೆ. ಈ ಪ್ರಕರಣದಲ್ಲಿಯೂ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಇದನ್ನು ಓದಿದ್ದೀರಾ?  ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ: ಚೀನಾಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮನವಿ

ಸ್ಥಳೀಯ ಮಾಧ್ಯಮ ವರದಿಗಳು ಘಟನೆಯ ಹೆಚ್ಚಿನ ತನಿಖೆ ಪೊಲೀಸರು ನಡೆಸುತ್ತಿದ್ದಾರೆ. ಸರಿಯಾದ ಸುರಕ್ಷತಾ ಮಾನದಂಡಗಳು ಇಲ್ಲದ ಕಾರಣ ಈ ಘಟನೆ ನಡೆದಿದೆ ಎಂದು ಉಲ್ಲೇಖಿಸಿದೆ.

ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಪ್ರಕಾರ, ಮಾಲ್ಡೀವ್ಸ್‌ನಲ್ಲಿ 27,000 ಭಾರತೀಯ ವಲಸಿಗರು ಇದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನವರು ಸೇವೆ ಸಲ್ಲಿಸುತ್ತಿದ್ದಾರೆ. ಹೆಚ್ಚಿನ ಜನರು ನಿರ್ಮಾಣ ಕ್ಷೇತ್ರದಲ್ಲಿಯೂ ತೊಡಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...