ಸಿಂಧು ಜಲ ಒಪ್ಪಂದ: ಭಾರತಕ್ಕೆ ‘ಕೈ ಕತ್ತರಿಸುವ’ ಬೆದರಿಕೆ ಹಾಕಿದ ಪಾಕ್ ಸಚಿವ

Date:

ಸಿಂಧು ಜಲ ಒಪ್ಪಂದದ (Indus Waters Treaty) ಕುರಿತಾಗಿ ಭಾರತದ ವಿರುದ್ಧ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸೇನಾ ದಾಳಿಯ ಬೆದರಿಕೆ ಹಾಕಿದ ಬೆನ್ನಲ್ಲೇ, ಇದೀಗ ಮತ್ತೋರ್ವ ಪಾಕ್ ಸಚಿವ ಹತಾಶೆಯಿಂದ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದ ಪಾಲಿನ ನೀರಿನ ಹಕ್ಕನ್ನು ಕಸಿದುಕೊಳ್ಳಲು ಬರುವವರ “ಕೈಗಳನ್ನು ಕತ್ತರಿಸುತ್ತೇವೆ” ಎಂದು ಪಾಕ್‌ನ ಹವಾಮಾನ ಬದಲಾವಣೆ ಖಾತೆ ಸಚಿವ ಮುಸಾದಿಕ್ ಮಲಿಕ್ ಭಾರತಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಮುಸಾದಿಕ್ ಮಲಿಕ್, ಭಾರತವು ಪಾಕಿಸ್ತಾನದ ಪಾಲಿನ ನೀರನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯುತ್ತಿದೆ ಎಂದು ಆರೋಪಿಸಿದರು. “ನೆರೆ ರಾಷ್ಟ್ರದ ಪ್ರಧಾನಿಯೊಬ್ಬರು ನೀರಿನ ನಲ್ಲಿಯನ್ನು (Tap) ನಿಯಂತ್ರಿಸುತ್ತಿದ್ದಾರೆ. ಆ ಮೂಲಕ ಬೇರೊಬ್ಬರು ನಮ್ಮ ದೇಶದ ಆಹಾರ ಭದ್ರತೆ, ಶೇ. 50ರಷ್ಟು ಉದ್ಯೋಗ ಹಾಗೂ ಶೇ. 25ರಷ್ಟು ಆರ್ಥಿಕತೆಯ ಮೇಲೆ ಏಕಾಏಕಿ ನಿಯಂತ್ರಣ ಸಾಧಿಸಲು ಯತ್ನಿಸುತ್ತಿದ್ದಾರೆ. ನ್ಯಾಯದ ಪ್ರಶ್ನೆ ಬಂದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳುತ್ತೇವೆ. ನಮ್ಮ ಪಾಲಿನ ನೀರಿನತ್ತ ಯಾರಾದರೂ ಕೈ ಹಾಕಿದರೆ, ಆ ಕೈಯನ್ನು ನಾವು ಕತ್ತರಿಸುತ್ತೇವೆ ಎಂಬುದನ್ನು ಬರೀ ಬಾಯಲ್ಲಿ ಹೇಳುವುದಿಲ್ಲ, ಈಗಾಗಲೇ ಸಾಬೀತುಪಡಿಸಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನು ಓದಿದ್ದೀರಾ? ದೇಶದ ರಿಯಲ್ ಎಸ್ಟೇಟ್ ಮೇಲೆ ಯುದ್ಧದ ಕಾರ್ಮೋಡ: 7 ನಗರಗಳಲ್ಲಿ ವಸತಿ ಮಾರಾಟ ಕುಸಿತ

ಇದೇ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಮಾತನಾಡಿ, “1960ರ ಸಿಂಧು ಜಲ ಒಪ್ಪಂದವು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾನೂನಾತ್ಮಕವಾಗಿ ಬದ್ಧವಾಗಿದೆ. ಇದನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು, ಅಮಾನತು ಮಾಡಲು ಅಥವಾ ತಿದ್ದುಪಡಿ ಮಾಡಲು ಯಾರಿಗೂ ಸಾಧ್ಯವಿಲ್ಲ. ಈ ವಿಚಾರದಲ್ಲಿ ಪಾಕಿಸ್ತಾನದ ನಿಲುವಿಗೆ ಜಾಗತಿಕ ಬೆಂಬಲವಿದೆ” ಎಂದು ಪ್ರತಿಪಾದಿಸಿದರು. ಅಲ್ಲದೆ, ‘ನೀರು ನಮ್ಮ ಜೀವನಾಡಿ ಮಾತ್ರವಲ್ಲ, ಅದು ನಮ್ಮ ಪಾಲಿನ ಲಕ್ಷ್ಮಣ ರೇಖೆ’ ಎಂದು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರು ಹೇಳಿದ್ದ ಮಾತನ್ನು ಅವರು ಇದೇ ವೇಳೆ ಪುನರುಚ್ಚರಿಸಿದರು.

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಕಠಿಣ ನಿಲುವು ತಳೆದಿದೆ. ಪಾಕಿಸ್ತಾನವು ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಗಡಿಯಾಚೆಗಿನ ಉಗ್ರ ನೆಲೆಗಳನ್ನು ನಾಶಪಡಿಸುವವರೆಗೆ ಸಿಂಧು ಜಲ ಒಪ್ಪಂದವನ್ನು ಅಮಾನತಿನಲ್ಲಿಡುವುದಾಗಿ ಭಾರತ ಸ್ಪಷ್ಟಪಡಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...