ಸೊಮಾಲಿಯಾದಲ್ಲಿ 15 ಮಂದಿ ಭಾರತೀಯ ಸಿಬ್ಬಂದಿಗಳಿದ್ದ ಹಡಗು ಹೈಜಾಕ್

Date:

ಸೊಮಾಲಿಯಾದ ಕರಾವಳಿ ಬಳಿ ನಿನ್ನೆ ಸಂಜೆ ಲೈಬೀರಿಯನ್ ಧ್ವಜವನ್ನು ಹೊಂದಿದ್ದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ. ಇದೀಗ ಈ ಹಡಗಿನ ಚಲನವಲನಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಭಾರತೀಯ ನೌಕಾಪಡೆಯು ಹೇಳಿದೆ.

- Advertisement -

ಹಡಗನ್ನು ಅಪಹರಣ ಮಾಡಿರುವ ಬಗ್ಗೆ ಭಾರತೀಯ ನೌಕಾಪಡೆ ನಿನ್ನೆ (ಗುರುವಾರ ಜ.4) ಸಂಜೆ ಮಾಹಿತಿ ನೀಡಲಾಗಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲಿಲಾ ನಾರ್ಫೋಕ್(MV LILA NORFOLK)’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಧಿಕಾರಿಗಳ ಪ್ರಕಾರ, “ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಸದಾ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಇನ್ನು ಹೈಜಾಕ್ ಆಗಿರುವ ಹಡಗಿನ ಸಿಬ್ಬಂದಿಯೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್‌ ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್‌ನನ್ನು ನಾನೇ ಕೊಲೆ ಮಾಡುತ್ತೇನೆ: ಅಯೋಧ್ಯ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆ 

ಹಡಗಿನ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆಯಲು ಸಂಪರ್ಕಿಸಲಾಗಿದೆ. ಗುರುವಾರ ಸಂಜೆ ಸುಮಾರು ಐದರಿಂದ ಆರು ಅಪರಿಚಿತ ಶಸ್ತ್ರಧಾರಿಗಳು ಹಡಗಿನೊಳಗೆ ನುಗ್ಗಿ ಹೈಜಾಕ್ ಮಾಡಿರುವುದಾಗಿ ಸೂಚಿಸುವ ಸಂದೇಶವನ್ನು ಕಳುಹಿಸಿದ್ದರು. ಹಡಗಿನಲ್ಲಿ ಒಟ್ಟು ಎಷ್ಟು ಮಂದಿ ಸಿಬ್ಬಂದಿ ಇದ್ದರು ಎಂಬ ಬಗ್ಗೆ ಪೂರ್ಣ ಮಾಹಿತಿ ಇನ್ನೂ ವರದಿಯಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...