ಇರಾನ್-ಅಮೆರಿಕ ಸಂಘರ್ಷ | ಹಾರ್ಮುಜ್ ಜಲಸಂಧಿ ಬಳಿ ಭೀಕರ ದಾಳಿ; ಇಂಧನ ಮಾರುಕಟ್ಟೆಯಲ್ಲಿ ಕಾರ್ಮೋಡ!

Date:

ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ನಿಯಂತ್ರಣ ವಿಚಾರದಲ್ಲಿ ಇರಾ‌ನ್ ಮೇಲೆ ಅಮೆರಿಕ ಒತ್ತಡ ಹೇರುತ್ತಿದೆ. ಟ್ರಂಪ್ ಧೋರಣೆಗೆ ಇರಾನ್ ಮಣೆಹಾಕುತ್ತಿಲ್ಲ. ಇರಾನ್ಅನ್ನು ಮಣಿಸಲೇಬೇಕು ಎಂಬ ಜಿದ್ದಿಗೆ ಬಿದ್ದಿರುವ ಅಮೆರಿಕ, ಇರಾನ್ ವಿರುದ್ಧ ಭೀಕರ ವೈಮಾನಿಕ ದಾಳಿಯನ್ನು ನಡೆಸಿದೆ. ಪರಿಣಾಮ, ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

- Advertisement -

ಕಳೆದ ಮೂರು ದಿನಗಳಲ್ಲಿ ಇರಾನ್‌ನ 300ಕ್ಕೂ ಹೆಚ್ಚು ಗುರಿಗಳ ಮೇಲೆ ಅಮೆರಿಕವು ಯುದ್ಧವಿಮಾನಗಳು, ಯುದ್ಧನೌಕೆಗಳು ಮತ್ತು ಅತ್ಯಾಧುನಿಕ ಡ್ರೋನ್‌ಗಳ
ದಾಳಿ ನಡೆಸಿದೆ. ಇದರಲ್ಲಿ 140ಕ್ಕೂ ಹೆಚ್ಚು ಪ್ರಮುಖ ಮಿಲಿಟರಿ ತಾಣಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇರಾನ್‌ನ ದಕ್ಷಿಣ ಬಂದರು ನಗರಗಳಾದ ಬಂದರ್ ಅಬ್ಬಾಸ್, ಜಾಸ್ಕ್, ಸಿರಿಕ್ ಮತ್ತು ಕೇಶ್ಮ್ ದ್ವೀಪಗಳಲ್ಲಿರುವ ಸೇನಾ ನೆಲೆಗಳು ಹಾಗೂ ಕಡಲ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಅಮೆರಿಕ ದಾಳಿ ನಡೆಸಿದೆ. ಇರಾನ್‌ನ ಕರಾವಳಿ ರಾಡಾರ್‌ಗಳು, ರಹಸ್ಯ ಸಂವಹನ ಜಾಲಗಳು, ಯುದ್ಧಸಾಮಗ್ರಿ ಡಿಪೋಗಳು, ಹಡಗು ವಿರೋಧಿ ಕ್ಷಿಪಣಿ ಉಡಾವಣಾ ಕೇಂದ್ರಗಳು ಮತ್ತು IRGC ನೌಕಾಪಡೆಯ ಯುದ್ಧ ಬೋಟ್‌ಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಪ್ರಕಟಿಸಿದೆ.

ಅಮೆರಿಕದ ಭೀಕರ ದಾಳಿಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್, ಯುಎಸ್ ಮಿಲಿಟರಿ ನೆಲೆಗಳನ್ನು ಹೊಂದಿರುವ ನೆರೆಯ ಗಲ್ಫ್ ರಾಷ್ಟ್ರಗಳ ಮೇಲೆ ಏಕಕಾಲದಲ್ಲಿ ಕ್ಷಿಪಣಿ ಮತ್ತು ಸರಣಿ ಡ್ರೋನ್ ದಾಳಿಗಳನ್ನು ಆರಂಭಿಸಿದೆ.
ಜೋರ್ಡಾನ್: ಪ್ರಿನ್ಸ್ ಹಸನ್ ಏರ್ ಬೇಸ್ ಮೇಲಿನ ಇರಾನ್ ದಾಳಿಯಲ್ಲಿ ಕಮಾಂಡ್ ಸೆಂಟರ್‌ಗಳು ಮತ್ತು ಡ್ರೋನ್ ಹ್ಯಾಂಗರ್‌ಗಳು ಹಾನಿಗೊಳಗಾಗಿವೆ. ಕುವೈತ್: ಕುವೈತ್‌ನ ಉತ್ತರ ಭೂ ಗಡಿ ಪೋಸ್ಟ್‌ಗಳು ಹಾಗೂ ಕುವೈತ್ ಆಯಿಲ್ ಕಂಪನಿಯ ಕಡಲಾಚೆಯ ತೈಲ ಬಾವಿ (Drilling Platform) ಮೇಲೂ ದಾಳಿ ನಡೆದಿದೆ.
ಖತಾರ್ ಮತ್ತು ಬಹ್ರೇನ್: ಈ ರಾಷ್ಟ್ರಗಳಲ್ಲಿ ಕ್ಷಿಪಣಿ ಮುನ್ನೆಚ್ಚರಿಕೆ ಸೈರನ್‌ಗಳು ಮೊಳಗಿದ್ದು, ಖತಾರ್ ಕೆಲವು ಇರಾನಿ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.
ಒಮಾನ್: ತನ್ನ ಭೂಪ್ರದೇಶದ ಮೇಲಿನ ಡ್ರೋನ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಒಮಾನ್ ಸರ್ಕಾರ, ಇರಾನ್ ರಾಯಭಾರಿಗೆ ಸಮನ್ಸ್ ಜಾರಿ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಘರ್ಷದ ಬೆನ್ನಲ್ಲೇ ಇರಾನ್‌ನ ತೈಲ ಮಾರಾಟಕ್ಕೆ ನೀಡಲಾಗಿದ್ದ ಸಾಮಾನ್ಯ ಪರವಾನಗಿಗಳನ್ನು ಅಮೆರಿಕ ತಕ್ಷಣದಿಂದಲೇ ರದ್ದುಗೊಳಿಸಿದ್ದು, ಭಾರೀ ಆರ್ಥಿಕ ನಿರ್ಬಂಧಗಳನ್ನು ಮರು ಹೇರಿದೆ. ಮತ್ತೊಂದೆಡೆ, ಜಲಸಂಧಿಯನ್ನು ಮುಚ್ಚಲಾಗಿದೆ ಎಂದು ಇರಾನ್ ಹೇಳಿಕೊಂಡಿದ್ದರೂ, ಒಮಾನ್ ಸಮೀಪದ ದಕ್ಷಿಣದ ಸುರಕ್ಷಿತ ಮಾರ್ಗದ ಮೂಲಕ ಹಾರ್ಮುಜ್ ಜಲಸಂಧಿ ಮುಕ್ತವಾಗಿದೆ ಎಂದು ಯುಎಸ್ ಮಿಲಿಟರಿ ಸ್ಪಷ್ಟಪಡಿಸಿದೆ.

ಕದನ ವಿರಾಮ ಮುರಿದುಬಿದ್ದಿರುವುದು ಇಡೀ ಮಧ್ಯಪ್ರಾಚ್ಯವನ್ನು ಪೂರ್ಣ ಪ್ರಮಾಣದ ಯುದ್ಧಕ್ಕೆ ತಳ್ಳುವ ಭೀತಿ ಮೂಡಿಸಿದೆ. ಈ ಸಂಘರ್ಷವು ಜಾಗತಿಕ ವ್ಯಾಪಾರ ಮತ್ತು ಇಂಧನ (ಕಚ್ಚಾ ತೈಲ) ಪೂರೈಕೆಗೆ ಮಾರಕವಾಗಬಹುದು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇರಾನ್ ಹಾಗೂ ಅಮೆರಿಕಾ ನಾಯಕರು ತಕ್ಷಣವೇ ಮಾತುಕತೆಗೆ ಮರಳಬೇಕೆಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...