ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿ: ಯುದ್ಧ ವಿರಾಮ ವಿಸ್ತರಿಸಿದ ಅಮೆರಿಕ

Date:

ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಇರಾನ್‌ನ ಅರೆಸೇನಾ ಕ್ರಾಂತಿಕಾರಿ ಪಡೆ ಮೂರು ಹಡಗುಗಳ ಮೇಲೆ ದಾಳಿ ನಡೆಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗಿನ ಯುದ್ಧ ವಿರಾಮವನ್ನು ಅನಿರ್ದಿಷ್ಟಾವಧಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

- Advertisement -

ಇಂದು (ಏ.22) ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಕ್ರಾಂತಿಕಾರಿ ಪಡೆ ಮೂರನೇ ಹಡಗಿನ ಮೇಲೆ ದಾಳಿ ನಡೆಸಿದೆ ಎಂದು ಇರಾನ್‌ನ ಅರೆ-ಸರ್ಕಾರಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈಗಾಗಲೇ ಎರಡು ಹಡಗುಗಳನ್ನು ಇರಾನ್ ವಶಪಡಿಸಿಕೊಂಡಿದೆ ಎಂದು ಅಲ್ಲಿನ ಸರ್ಕಾರಿ ದೂರದರ್ಶನ ಖಚಿತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಹೊಸ ಸುತ್ತಿನ ಶಾಂತಿ ಮಾತುಕತೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಅಮೆರಿಕವು ಇರಾನ್ ವಿರುದ್ಧದ ಕದನ ವಿರಾಮವನ್ನು ವಿಸ್ತರಿಸಿದೆ. ಇರಾನ್ ಈ ವಿಸ್ತರಣೆಯನ್ನು ಒಪ್ಪಿಕೊಂಡಿದೆಯಾದರೂ, ಯುದ್ಧ ಅಂತ್ಯಗೊಳಿಸುವ ಕುರಿತಾದ ಹೊಸ ಸುತ್ತಿನ ಮಾತುಕತೆಗೆ ತಾನು ಸಿದ್ಧವಿರುವುದಾಗಿ ಅಧಿಕೃತವಾಗಿ ತಿಳಿಸಿಲ್ಲ.

ವಾಷಿಂಗ್ಟನ್‌ನಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಹೊಸ ಸುತ್ತಿನ ಸಂಧಾನ ಸಭೆ ನಡೆಯಲಿದೆ. ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿರುವ ಕದನ ವಿರಾಮವನ್ನು ಒಂದು ತಿಂಗಳು ವಿಸ್ತರಿಸುವಂತೆ ಬೇರೂತ್ (ಲೆಬನಾನ್ ಸರ್ಕಾರ) ಮನವಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: IPL | ದಿಗ್ಗಜರ ದಾಖಲೆ ಧೂಳೀಪಟ ಮಾಡಿದ 15ರ ಪೋರ ವೈಭವ್ ಸೂರ್ಯವಂಶಿ

ಇರಾನ್ ಬೆಂಬಲಿತ ‘ಹೆಜ್ಬುಲ್ಲಾ’ ಸಂಘಟನೆಯು ಈ ಶಾಂತಿ ಮಾತುಕತೆಯನ್ನು ವಿರೋಧಿಸಿದೆ. ಈ ನಡುವೆ, ಲೆಬನಾನ್ ಜೊತೆ ತಮಗೆ ಯಾವುದೇ ಗಂಭೀರ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿರುವ ಇಸ್ರೇಲ್, ಹೆಜ್ಬುಲ್ಲಾ ವಿರುದ್ಧ ಹೋರಾಡಲು ನಮ್ಮೊಂದಿಗೆ ಕೈಜೋಡಿಸಿ ಎಂದು ಲೆಬನಾನ್‌ಗೆ ಕರೆ ನೀಡಿದೆ.

ಒಂದು ಕಡೆ ಶಾಂತಿ ಮಾತುಕತೆಗಳ ಪ್ರಯತ್ನ ನಡೆಯುತ್ತಿದ್ದರೆ, ಇನ್ನೊಂದೆಡೆ ಇರಾನ್ ಹಡಗುಗಳ ಮೇಲೆ ದಾಳಿ ಮಾಡುತ್ತಿರುವುದು ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...