ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

Date:

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ಕವಚ ‘ಇಂಟರ್‌ಸೆಪ್ಟರ್’ಅನ್ನು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದೆ. ದಾಳಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

- Advertisement -

ಡಿಮೋನಾದ ನೆಗೆವ್ ಮರುಭೂಮಿಯಲ್ಲಿರುವ ಇಸ್ರೇಲ್‌ನ ಆಯಕಟ್ಟಿನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ನಗರದ ಹಲವು ಭಾಗಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಸಾವಿನ ಸಂಖ್ಯೆ 50 ದಾಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ದಾಳಿಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

“ಇರಾನ್‌ನ ‘ನಟಾಂಜ್’ ಪರಮಾಣು ಸೌಲಭ್ಯದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದಕ್ಕೆ, ಪ್ರತಿಕಾರವಾಗಿ ಈ ದಾಳಿ ನಡೆದಿದೆ” ಎಂದು ಇರಾನ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದರೆ, ನಟಾಂಜ್ ಮೇಲಿನ ದಾಳಿಯಲ್ಲಿ ತನ್ನ ಪಾತ್ರವಿಲ್ಲ, ಅದು ಅಮೆರಿಕ ನಡೆಸಿದ ಕಾರ್ಯಾಚರಣೆ ಎಂದು ಇಸ್ರೇಲ್ ವಾದಿಸಿದೆ.

ಆದಾಗ್ಯೂ, ಇತ್ತೀಚೆಗೆ ಟೆಹ್ರಾನ್ ವಿಶ್ವವಿದ್ಯಾಲಯದ ಪರಮಾಣು ಶಸ್ತ್ರಾಸ್ತ್ರ ಸಂಶೋಧನಾ ಕೇಂದ್ರದ ಮೇಲೆ ನಡೆದ ದಾಳಿಯನ್ನು ಇಸ್ರೇಲ್ ಒಪ್ಪಿಕೊಂಡಿರುವುದು ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...