ದುಬೈ ಬಂದರಿನಲ್ಲಿ ಕುವೈತ್ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಇಂಧನ ಸೋರಿಕೆಯ ಆತಂಕ

Date:

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಯುದ್ಧದಿಂದ ಹಿಂದೆ ಸರಿಯುವುದಾಗಿ ಅಮೆರಿಕ ಹೇಳುತ್ತಲೇ ಇದ್ದರೂ, ಅಮೆರಿಕ-ಇಸ್ರೇಲ್ ಮತ್ತು ಇರಾನ್‌ ನಡುವೆ ದಾಳಿಗಳು ಮುಂದುವರೆದಿವೆ. ದಾಳಿ-ಪ್ರತಿದಾಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ದುಬೈ ಬಂದರಿನಲ್ಲಿ ಲಂಗರು ಹಾಕಿದ್ದ ಕುವೈತ್‌ನ ಬೃಹತ್ ತೈಲ ಟ್ಯಾಂಕರ್ ಮೇಲೆ ಇರಾನ್ ನೇರ ದಾಳಿ ನಡೆಸಿದೆ. ದಾಳಿಯಿಂದಾಗಿ ತೈಲ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಮುದ್ರಕ್ಕೆ ತೈಲ ಸೋರಿಕೆಯಾಗುವ ಭೀತಿ ಎದುರಾಗಿದೆ ಎಂದು ವರದಿಯಾಗಿದೆ.

- Advertisement -

ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (KPC)ಗೆ ಸೇರಿದ ‘ಅಲ್-ಸಲ್ಮಿ’ ಎಂಬ ತೈಲ ಟ್ಯಾಂಕರ್ ಮೇಲೆ ಈ ದಾಳಿ ನಡೆದಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. ದಾಳಿ ಸಂಭವಿಸಿದ ಸಮಯದಲ್ಲಿ ಟ್ಯಾಂಕರ್ ಸಂಪೂರ್ಣವಾಗಿ ತೈಲದಿಂದ ಭರ್ತಿಯಾಗಿತ್ತು. ಕ್ಷಿಪಣಿ ಅಥವಾ ಡ್ರೋನ್ ದಾಳಿಯ ಪರಿಣಾಮವಾಗಿ ಹಡಗಿನ ಹೊರಭಾಗಕ್ಕೆ ತೀವ್ರ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೆ, ಹಡಗಿಗೆ ಆಗಿರುವ ಹಾನಿಯಿಂದಾಗಿ ಸುತ್ತಮುತ್ತಲಿನ ಸಮುದ್ರದ ನೀರಿನಲ್ಲಿ ತೈಲ ಸೋರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಇದು ಸಮುದ್ರದ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವಿದೆ ಎಂದು ಕೆಪಿಸಿ ಹೇಳಿದೆ. ಪ್ರಸ್ತುತ ಹಾನಿಯ ನಿಖರ ಮೌಲ್ಯಮಾಪನ ಮತ್ತು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗೆ ಸೇರಿದ ಹಡಗಿನ ಮೇಲೆ ನಡೆದ ದಾಳಿ ನಡೆದಿರುವುದರಿಂದ, ಕುವೈತ್ ಇದನ್ನು ಗಂಭೀರವಾಗಿ ಪರಿಗಣಿಸಿದೆ. “ಶತ್ರುದೇಶದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಎದುರಿಸಲು ಕುವೈತ್‌ನ ವಾಯು ರಕ್ಷಣಾ ವ್ಯವಸ್ಥೆಯು ಸನ್ನದ್ಧವಾಗಿದ್ದು, ಸೂಕ್ತವಾಗಿ ಪ್ರತಿಕ್ರಿಯಿಸುತ್ತಿದೆ” ಎಂದು ಕುವೈತ್ ಸೇನೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...