ಅಂತಿಮವಾಗಿಲ್ಲ ಇರಾನ್ ಒಪ್ಪಂದ, ತಿದ್ದಿಕೊಳ್ಳದಿದ್ದರೆ ಮತ್ತೆ ಬಾಂಬ್ ದಾಳಿ: ಟ್ರಂಪ್

Date:

ಇರಾನ್ ಜೊತೆಗಿನ ಬಹುನಿರೀಕ್ಷಿತ ಶಾಂತಿ ಒಪ್ಪಂದದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಿಶ್ಚಿತತೆ ಸೃಷ್ಟಿಸಿದ್ದಾರೆ. “ಈ ಒಪ್ಪಂದವು ಇನ್ನೂ ಅಂತಿಮವಾಗಿಲ್ಲ, ಅದೊಂದು ಕೇವಲ ತಿಳುವಳಿಕಾ ಒಪ್ಪಂದ (MoU) ಮಾತ್ರ. ಒಂದು ವೇಳೆ ಇರಾನ್ ತನ್ನ ನಡವಳಿಕೆ ತಿದ್ದಿಕೊಳ್ಳದಿದ್ದರೆ, ನಾವು ಮತ್ತೆ ಅವರ ಮೇಲೆ ಬಾಂಬ್ ದಾಳಿ ನಡೆಸಲಿದ್ದೇವೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯ ವೇಳೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಸ್ವಿಟ್ಜರ್ಲೆಂಡ್‌ನಲ್ಲಿ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲು ಕೇವಲ ಎರಡು ದಿನಗಳು ಬಾಕಿ ಇರುವಾಗಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಕಳೆದ 47 ವರ್ಷಗಳಿಂದ ಇರಾನ್ ಕೆಟ್ಟದಾಗಿ ನಡೆದುಕೊಂಡಿದೆ. ಈಗಿನ ಒಪ್ಪಂದದ ಷರತ್ತುಗಳು ನನಗೆ ಒಪ್ಪಿಗೆಯಾಗದಿದ್ದರೆ ಅಥವಾ ಅವರು ನಿಯಮ ಮೀರಿದರೆ, ನಾವು ಮತ್ತೆ ನೇರವಾಗಿ ಅವರ ತಲೆಯ ಮೇಲೆಯೇ ಬಾಂಬ್ ಹಾಕಲು ಶುರು ಮಾಡುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಿ7 ಶೃಂಗಸಭೆ: 16 ತಿಂಗಳ ಬಳಿಕ ಮುಖಾಮುಖಿಯಾದ ಮೋದಿ- ಟ್ರಂಪ್‌

ಇರಾನ್ ಎಂದಿಗೂ ಪರಮಾಣು ಅಸ್ತ್ರ ಹೊಂದುವುದನ್ನು ತಡೆಯುವುದೇ ಈ ಒಪ್ಪಂದದ ಶೇ 99.9 ರಷ್ಟು ಪ್ರಮುಖ ಉದ್ದೇಶ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಯುದ್ಧದ ಬಳಿಕ ಇರಾನ್ ಮರುನಿರ್ಮಾಣಕ್ಕೆ ಅಮೆರಿಕ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲಿದೆ ಎಂಬ ವರದಿಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ ಅವರು, “ಅಮೆರಿಕದ ತೆರಿಗೆದಾರರ ಹತ್ತು ಸೆಂಟ್ಸ್ (10 Cents) ಹಣವನ್ನೂ ನಾವು ಅಲ್ಲಿ ಹೂಡಿಕೆ ಮಾಡುತ್ತಿಲ್ಲ” ಎಂದು ಖಚಿತಪಡಿಸಿದ್ದಾರೆ.

ಈ ನಡುವೆ, ಇರಾನ್ ಮೇಲಿನ ಕಡಲ ದಿಗ್ಬಂಧನವನ್ನು ಭಾಗಶಃ ಸಡಿಲಿಸಲಾಗಿದ್ದು, ಜಾಗತಿಕ ತೈಲ ಸಾಗಾಟದ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ ಮುಂದಿನ ಒಂದೆರಡು ದಿನಗಳಲ್ಲಿ ಸಂಪೂರ್ಣವಾಗಿ ತೆರೆಯಲಿದೆ. ಈ ಒಪ್ಪಂದ ಅಂತಿಮ ರೂಪ ಪಡೆಯಲು 60 ದಿನಗಳ ಮಾತುಕತೆಯ ಕಾಲಾವಕಾಶವಿದ್ದು, ಟ್ರಂಪ್ ಅವರ ಈ ದಿಢೀರ್ ಎಚ್ಚರಿಕೆ ಜಾಗತಿಕ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...