ಅಮೆರಿಕ, ಇಸ್ರೇಲ್ ದಾಳಿ: ಇರಾನ್‌ನಲ್ಲಿ ಮೃತರ ಸಂಖ್ಯೆ 555ಕ್ಕೆ ಏರಿಕೆ

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಇರಾನ್‌ನಾದ್ಯಂತ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ. ಸುಮಾರು 131 ನಗರಗಳು ಈ ದಾಳಿಗಳಿಗೆ ಒಳಗಾಗಿವೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿ ಸೋಮವಾರ ತಿಳಿಸಿದೆ.

- Advertisement -

ಇನ್ನು ರಕ್ಷಣಾ ತಂಡಗಳು ಪೀಡಿತ ಪ್ರದೇಶಗಳಲ್ಲಿವೆ. 100,000ಕ್ಕೂ ಹೆಚ್ಚು ಮಂದಿ ದೇಶಾದ್ಯಂತ ರಕ್ಷಣೆಯಲ್ಲಿ ತೊಡಗಿದ್ದಾರೆ. ನೆರವು ಮತ್ತು ಮಾನಸಿಕ ಬೆಂಬಲವನ್ನು ಒದಗಿಸಲು ಸುಮಾರು ನಾಲ್ಕು ಮಿಲಿಯನ್ ಸ್ವಯಂಸೇವಕರ ಜಾಲವು ಸಿದ್ಧವಾಗಿದೆ ಎಂದು ರೆಡ್ ಕ್ರೆಸೆಂಟ್ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇರಾನ್ – ಇಸ್ರೇಲ್ ಯುದ್ಧ | ಭಾರತಕ್ಕೇನು ನಷ್ಟ?

ಈ ನಡುವೆ ಇರಾನ್ ಕೂಡಾ ಪ್ರತಿದಾಳಿ ನಡೆಸುತ್ತಿದೆ. ಇಸ್ರೇಲ್ ಮತ್ತು ಅಮೆರಿಕದ ಸೇನಾ ನೆಲೆಗಳು ಇರುವ ಹಲವಾರು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿವೆ. ಸದ್ಯ ದಾಳಿ, ಪ್ರತಿದಾಳಿಗಳು ಮುಂದುವರೆದಿದೆ. ಇನ್ನು ಇರಾನ್ ನಡೆಸಿದ ದಾಳಿಯಿಂದ ಇಸ್ರೇಲ್‌ನಲ್ಲಿ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನು ಕುವೈತ್ ನಗರದಲ್ಲಿ, ಯುಎಸ್ ರಾಯಭಾರ ಕಚೇರಿಯ ಆವರಣಕ್ಕೆ ಕ್ಷಿಪಣಿ ದಾಳಿ ನಡೆಸಲಾಗಿದೆ. ಹಲವು ಅಮೆರಿಕದ ಯುದ್ಧವಿಮಾನಗಳು ದೇಶದಲ್ಲಿ ಅಪಘಾತಕ್ಕೀಡಾಗಿವೆ. ಪೈಲಟ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್‌ನ ರಕ್ಷಣಾ ಸಚಿವಾಲಯ ಹೇಳಿದೆ. ಆದರೆ

ವೈಮಾನಿಕ ದಾಳಿಗಳು ಮುಂದುವರಿದಂತೆ, ಹಿರಿಯ ಇರಾನಿನ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಎಕ್ಸ್‌ನಲ್ಲಿ ಇರಾನ್ ಅಮೆರಿಕದೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...