ಕೆರಳಿದ ಇರಾನ್: ಹಾರ್ಮುಜ್ ಜಲಸಂಧಿ ಬಂದ್, 24 ಗಂಟೆಗಳಲ್ಲಿ 2ನೇ ನೌಕೆ ಮೇಲೆ ದಾಳಿ

Date:

ಹಾರ್ಮುಜ್ ಜಲಸಂಧಿಯಲ್ಲಿ ಕಳೆದ 24 ಗಂಟೆಗಳಲ್ಲಿ ಎರಡನೇ ವಾಣಿಜ್ಯ ನೌಕೆಯ ಮೇಲೆ ದಾಳಿ ನಡೆದಿದ್ದು, ಇರಾನ್ ಈ ಆಯಕಟ್ಟಿನ ಜಲಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿದೆ. ಇದರಿಂದಾಗಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿದ್ದು, ಇಡೀ ಪಶ್ಚಿಮ ಏಷ್ಯಾ ವಲಯದಲ್ಲಿ ಯುದ್ಧದ ಭೀತಿ ಆವರಿಸಿದೆ. ಸೈಪ್ರಸ್ ಧ್ವಜದ ಕಂಟೈನರ್ ನೌಕೆ ಸೇರಿ ಎರಡು ಹಡಗುಗಳು ದಾಳಿಗೆ ಒಳಗಾಗಿದ್ದು, ಜಲಮಾರ್ಗದ ಭದ್ರತೆ ಕೈತಪ್ಪಿದೆ.

- Advertisement -

ಇರಾನ್‌ನ ಈ ಕ್ರಮಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟಕಾಮ್), ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ದಕ್ಷಿಣ ಇರಾನ್‌ನ ಇಂಧನ ಮೂಲಸೌಕರ್ಯಗಳು ಮತ್ತು ಸೇನಾ ನೆಲೆಗಳ ಮೇಲೆ ಭಾರಿ ವೈಮಾನಿಕ ದಾಳಿ ನಡೆಸಿದೆ. ಕಳೆದ ಮೂರು ದಿನಗಳಲ್ಲಿ ಇರಾನ್‌ನ 300ಕ್ಕೂ ಹೆಚ್ಚು ಸೇನಾ ಗುರಿಗಳನ್ನು ಧ್ವಂಸಗೊಳಿಸಲಾಗಿದ್ದು, ಭಾನುವಾರ ಮುಂಜಾನೆಯೊಂದರಲ್ಲೇ ಬುಶೆಹರ್ ಮತ್ತು ಬಂದರ್ ಅಬ್ಬಾಸ್ ಸೇರಿದಂತೆ 140ಕ್ಕೂ ಹೆಚ್ಚು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ ಎಂದು ಅಮೆರಿಕ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಮತ್ತೊಂದೆಡೆ, ಜಲಸಂಧಿಯ ಮೂಲಕ ಅಮೆರಿಕ ನಿಯಮಬಾಹಿರ ಮಾರ್ಗವನ್ನು ಸೃಷ್ಟಿಸುತ್ತಿದೆ ಎಂದು ಇರಾನ್ ಆರೋಪಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ), ಒಮಾನ್‌ನ ಡುಕ್ಮ್ ಬಂದರಿನಲ್ಲಿರುವ ಅಮೆರಿಕದ ನೌಕಾಪಡೆಗೆ ಪೂರಕ ಬೆಂಬಲ ನೀಡುವ ಕೇಂದ್ರಗಳ ಮೇಲೆ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕದ 5ನೇ ಫ್ಲೀಟ್ ಪ್ರಧಾನ ಕಚೇರಿಯ ಸಮೀಪ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿ ಪ್ರತಿಕಾರ ತೀರಿಸಿಕೊಂಡಿರುವುದಾಗಿ ವಿಡಿಯೋ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಜಂಟಿ ದಾಳಿಯಲ್ಲಿ ಇರಾನ್‌ನ ಪರಮೋಚ್ಛ ನಾಯಕ ಹತ್ಯೆಗೀಡಾಗಿದ್ದು, ಬಿಕ್ಕಟ್ಟು ಮತ್ತಷ್ಟು ಜಟಿಲಗೊಳ್ಳಲು ಕಾರಣವಾಗಿದೆ. ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮಗ ಮೊಜ್ತಬಾ ಖಮೇನಿ, ತಂದೆಯ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವುದು ನಮ್ಮ ಖಚಿತ ಕರ್ತವ್ಯ ಎಂದು ಘೋಷಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, “ಇರಾನ್ ತಪ್ಪು ನಿರ್ಧಾರ ಕೈಗೊಂಡಿದೆ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಈ ಭೀಕರ ರಣರಂಗದ ಪರಿಸ್ಥಿತಿಗೆ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ತೀವ್ರ ಕಳವಳ ವ್ಯಕ್ತಪಡಿಸಿವೆ. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಮತ್ತು ಸೌದಿ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಅವರು ದೂರವಾಣಿ ಮೂಲಕ ಚರ್ಚಿಸಿ, ಈ ಸಂಘರ್ಷವು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ದೊಡ್ಡ ಗಂಡಾಂತರ ತಂದೊಡ್ಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಕತಾರ್ ಸಹಕಾರದೊಂದಿಗೆ ಮಾತುಕತೆಯ ಪ್ರಯತ್ನಗಳೂ ನಡೆದಿವೆ.

ಇದೇ ಆತಂಕಕಾರಿ ಬೆಳವಣಿಗೆಗಳ ನಡುವೆ, ಕತಾರ್ ದೇಶವನ್ನು ಜಾಗತಿಕ ರಾಜತಾಂತ್ರಿಕ ಮತ್ತು ಆರ್ಥಿಕ ಶಕ್ತಿಯನ್ನಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಲ್ಲಿನ ಮಾಜಿ ಅಮೀರ್ ಶೇಕ್ ಹಮದ್ ಬಿನ್ ಖಲೀಫಾ ಅಲ್ ಥಾನಿ (74) ಅವರು ಭಾನುವಾರ ನಿಧನರಾಗಿದ್ದಾರೆ. ಇರಾನ್ ಜೊತೆಗೂ ಉತ್ತಮ ಸಂಬಂಧ ಹೊಂದಿದ್ದ ಅವರ ನಿಧನಕ್ಕೆ ಕತಾರ್ ಸರ್ಕಾರ ಶೋಕ ಪ್ರಕಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...