ಕುವೈತ್, ಬಹ್ರೇನ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ

Date:

ಅಮೆರಿಕವು ವೈಮಾನಿಕ ದಾಳಿಗಳನ್ನು ನಡೆಸಿದ ಬೆನ್ನಲ್ಲೇ, ಅದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಇರಾನ್, ಕುವೈತ್ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ, ಅಮೆರಿಕವು ತನ್ನ ಆಕ್ರಮಣವನ್ನು ನಿಲ್ಲಿಸದಿದ್ದರೆ, ಈ ದಾಳಿಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವುದಾಗಿ ಇರಾನ್ ಕಟುವಾಗಿ ಎಚ್ಚರಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದ್ದು, ಪರಿಸ್ಥಿತಿ ಕೈಮೀರುವ ಆತಂಕ ಸೃಷ್ಟಿಯಾಗಿದೆ.

- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಪ್ರವೇಶದಿಂದ ಘೋಷಣೆಯಾಗಿದ್ದ ಕದನ ವಿರಾಮ ಇದೀಗ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ. ಈ ಹೊಸ ಬೆಳವಣಿಗೆಗಳಿಗೂ ಮುನ್ನ, ಇರಾನ್ ನಾಲ್ಕು ಹಂತಗಳಲ್ಲಿ ಇಸ್ರೇಲ್ ಮೇಲೆ ಭಾರಿ ಕ್ಷಿಪಣಿ ದಾಳಿಗಳನ್ನು ನಡೆಸಿತ್ತು. ಈ ದಾಳಿಯಲ್ಲಿ ಇಸ್ರೇಲ್‌ನ ನಾಲ್ವರು ಮೃತಪಟ್ಟಿದ್ದರು. ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ‘ಕಠಿಣ ತಿರುಗೇಟು’ ನೀಡುವುದಾಗಿ ಎಚ್ಚರಿಸಿದ್ದರು. ಅದರ ಮುಂದುವರಿದ ಭಾಗವಾಗಿಯೇ ಇದೀಗ ಕುವೈತ್ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯುದ್ಧದ ಭೀತಿಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಬಹುದಾದ ಬಿಕ್ಕಟ್ಟನ್ನು ತಪ್ಪಿಸಲು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಮೆರಿಕ ಮಹತ್ವದ ನಿರ್ಧಾರ ಕೈಗೊಂಡಿದೆ. ಇರಾನ್‌ನ ತೈಲ ರಫ್ತಿನ ಮೇಲಿನ ನಿರ್ಬಂಧಗಳನ್ನು ಡೊನಾಲ್ಡ್ ಟ್ರಂಪ್ ತಾತ್ಕಾಲಿಕವಾಗಿ ಸಡಿಲಿಸಿದ್ದಾರೆ. ಇದರಿಂದಾಗಿ ಸಮುದ್ರದಲ್ಲಿ ಸಿಲುಕಿರುವ ಇರಾನ್ ತೈಲವನ್ನು 30 ರಿಂದ 60 ದಿನಗಳವರೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಸಿಕ್ಕಂತಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸುರಕ್ಷತೆಗೆ ನೆರವಾಗಲು ಮತ್ತು ಜಲಮಾರ್ಗವನ್ನು ಮುಕ್ತಗೊಳಿಸಲು ಹಿಂದೇಟು ಹಾಕಿದ ನ್ಯಾಟೋ (NATO) ಮಿತ್ರರಾಷ್ಟ್ರಗಳ ವಿರುದ್ಧ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನ್ಯಾಟೋ ರಾಷ್ಟ್ರಗಳನ್ನು ಅವರು ‘ಹೇಡಿಗಳು’ ಮತ್ತು ಕೇವಲ ‘ಪೇಪರ್ ಟೈಗರ್’ (ಕಾಗದದ ಹುಲಿ) ಎಂದು ಜರಿದಿದ್ದಾರೆ. ಮತ್ತೊಂದೆಡೆ, ಕತಾರ್ ಎನರ್ಜಿ ಸಂಸ್ಥೆಯು, ಇರಾನ್‌ನ ಇಂಧನ ನೆಲೆಗಳ ಮೇಲೆ ಯಾವುದೇ ಕಾರಣಕ್ಕೂ ದಾಳಿ ಮಾಡದಂತೆ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...