ಇಸ್ರೇಲ್ ಮೇಲೆ ದಾಳಿ ನಡೆಸಿ ‘ಈಗ ಕದನ ವಿರಾಮ’ ಜಾರಿಯಾಗಿದೆ ಎಂದ ಇರಾನ್

Date:

ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ದಾಳಿಯಲ್ಲಿ ಇಸ್ರೇಲ್‌ನ ಮೂವರು ಪ್ರಜೆಗಳು ಸಾವನ್ನಪ್ಪಿದ್ದಾರೆ. ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ, ‘ಈಗ ಕದನ ವಿರಾಮ ಜಾರಿಯಾಗಿದೆ’ ಎಂದು ಇರಾನ್ ಹೇಳಿದೆ.

- Advertisement -

ಮಂಗಳವಾರ ಮುಂಜಾನೆಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಟ್ರಂಪ್, “ಇಸ್ರೇಲ್-ಇರಾನ್ ನಡುವಿನ ಯುದ್ಧ ಮುಗಿದಿದೆ. ಎರಡೂ ದೇಶಗಳ ನಡುವೆ ಕದನ ವಿರಾಮ ಜಾರಿಗೊಳಿಸಲಾಗಿದೆ” ಎಂದು ಘೋಷಿಸಿದ್ದರು. ಆದರೆ, ಅದಕ್ಕೂ ಮುನ್ನ ನಡುರಾತ್ರಿಯಲ್ಲಿ ಇರಾನ್‌ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದವು. ದಾಳಿ ಬಳಿಕವಷ್ಟೇ ಟ್ರಂಪ್ ಕದನ ವಿರಾಮ ಘೋಷಿಸಿದ್ದರು. ಇರಾನ್ ಪ್ರತಿದಾಳಿ ನಡೆಸದಂತೆ ತಡೆಯಲು ಕದನ ವಿರಾಮವನ್ನು ಮುಂದೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆದರೆ, ಕದನ ವಿರಾಮ ಘೋಷಣೆಯನ್ನು ಅಲ್ಲಗಳೆದಿದ್ದ ಇರಾನ್, ‘ಕದನ ವಿರಾಮದ ಬಗ್ಗೆ ನಮ್ಮೊಂದಿಗೆ ಯಾವುದೇ ಮಾತುಕತೆ ಅಥವಾ ಒಪ್ಪಂದಗಳು ನಡೆದಿಲ್ಲ’ ಎಂದು ಹೇಳಿತ್ತು. ಬಳಿಕ, ಇಸ್ರೇಲ್ ಮೇಲೆ ದಾಳಿ ನಡೆಸಿತು.

ಇಸ್ರೇಲ್‌ನ ಬೀರ್ ಶೀವಾ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದೆ. ಸೀಮಿತ ಸಂಖ್ಯೆಯ ಕ್ಷಿಪಣಿಗಳನ್ನು ಬಳಸಿ ಇರಾನ್ ದಾಳಿ ಮಾಡಿದೆ. ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ದಾಳಿಯ ಬಳಿಕ ಕದನ ವಿರಾಮಕ್ಕೆ ಇರಾನ್ ಸಮ್ಮತಿಸಿದೆ. ಇದೀಗ, ಉಭಯ ರಾಷ್ಟ್ರಗಳು ಕದನ ವಿರಾಮವನ್ನು ಅನುಸರಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...