ಇರಾನ್ ಪ್ರತಿಭಟನೆ : ಭದ್ರತಾ ಸಿಬ್ಬಂದಿ ಸೇರಿದಂತೆ 2000 ಜನರ ಸಾವು

Date:

ಕಳೆದ ಎರಡು ವಾರಗಳಿಂದ ಇರಾನ್ ನಲ್ಲಿ ನಡೆಯುತ್ತಿರುವ ದೇಶವ್ಯಾಪಿ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಮಂಗಳವಾರ (ಜ.13) ತಿಳಿಸಿದ್ದಾರೆ.

- Advertisement -

“ಎರಡು ವಾರಗಳ ಕಾಲ ಇರಾನ್ ನಲ್ಲಿ ನಡೆದ ಗಲಭೆಯ ಪರಿಣಾಮ ಹೆಚ್ಚಿನ ಸಾವು-ನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿದೆ. ಯಾರು ಕೊಲ್ಲಲ್ಪಟ್ಟರು ಎಂಬುದರ ಕುರಿತು ಮಾಹಿತಿ ನೀಡಿಲ್ಲ. ಆದರೆ ಭದ್ರತಾ ಸಿಬ್ಬಂದಿಗಳ ಸಾವಿನ ಹಿಂದೆ ‘ಭಯೋತ್ಪಾದಕ’ರಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇರಾನ್ ನ ಪರಮೊಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಆಂದೋಲನದ ಸ್ವರೂಪ ಪಡೆದುಕೊಂಡಿವೆ. ಪ್ರತಿಭಟನೆಗಳನ್ನು ತಡೆಯಲು ವಿದ್ಯುತ್ ಕಡಿತ, ಇಂಟರ್ನೆಟ್ ಕಡಿತ ಸೇರಿದಂತೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ರಾಜಧಾನಿ ಟೆಹ್ರಾನ್, ಮಶಾದ್ ಸೇರಿದಂತೆ ದೇಶದ ಎಲ್ಲಾ 31 ಪ್ರಾಂತ್ಯದಲ್ಲೂ ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿವೆ.

ಇದನ್ನು ಓದಿ : ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ

ರಾಜಕೀಯ ಸ್ವಾತಂತ್ರ್ಯದ ಕೊರತೆ, ಆರ್ಥಿಕತೆಯ ಕುಸಿತ, ಭ್ರಷ್ಟಾಚಾರವು ಪ್ರತಿಭಟನೆಗೆ ಕಾರಣಗಳು ಎನ್ನಲಾಗುತ್ತಿದ್ದು, ಸರ್ವೋಚ್ಚ ನಾಯಕ ಖಮೇನಿ ಅವರ ಸರ್ಕಾರವನ್ನು ಕಿತ್ತೊಗೆಯಲು ಪ್ರತಿಭಟನಕಾರರು ತೀರ್ಮಾನಿಸಿದ್ದಾರೆ. ಇರಾನ್ ದೇಶದ ಜನರು ಸ್ವಾತಂತ್ರ್ಯವನ್ನು ಬಯಸಿದರೆ, ಅವರ ಬಂಬಲಕ್ಕೆ ಸಂಪೂರ್ಣ ಸಿದ್ಧ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇರಾನ್ ದೇಶವನ್ನು ರಕ್ಷಿಸಲು ಮಿಲಿಟರಿ ಕ್ರಮಕ್ಕೆ ಅಮೆರಿಕ ಸಿದ್ಧ ಎಂದ ಟ್ರಂಪ್, ತೈಲ ರಫ್ತುದಾರ ರಾಷ್ಟ್ರವಾದ ಇರಾನ್‌ನೊಂದಿಗೆ ವ್ಯವಹಾರ ನಡೆಸುವ ಯಾವುದೇ ದೇಶದ ಉತ್ಪನ್ನಗಳ ಮೇಲೆ ಶೇ.25 ರಷ್ಟು ಆಮದು ಸುಂಕವನ್ನು ಘೋಷಿಸಿದ್ದಾರೆ.

“ಇರಾನ್ ನಲ್ಲಿರುವ ಸರ್ಕಾರ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ. ಖಮೇನಿ ಆಡಳಿತದ ಅಂತಿಮ ದಿನಗಳನ್ನು ನಾವು ಕಾಣುತ್ತಿದ್ದೇವೆ” ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...