ಇಸ್ರೇಲ್ ದಾಳಿಗೆ ಇರಾನ್ ಪ್ರತ್ಯುತ್ತರ, ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ

Date:

Advertisements

ಶುಕ್ರವಾರ ಇಸ್ರೇಲ್‌ ನಡೆಸಿದ ಮಾರಣಾಂತಿಕ ದಾಳಿಗೆ ಇರಾನ್‌ ಪ್ರತ್ಯುತ್ತರ ನೀಡಿದೆ. ಶನಿವಾರ ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಹೊಸದಾಗಿ ಕ್ಷಿಪಣಿ ದಾಳಿಯನ್ನು ಆರಂಭಿಸಿದೆ. ‌

ವಿಶೇಷವಾಗಿ, ಯಹೂದಿ ರಾಷ್ಟ್ರದ ಉತ್ತರ ಭಾಗವನ್ನು ಗುರಿಯಾಗಿಸಿಕೊಂಡು ಇರಾನ್‌ ಈ ದಾಳಿ ನಡೆಸುತ್ತಿದೆ. ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ನಲ್ಲಿ ನಡೆದ ಡ್ರೋನ್‌ ಹಾಗೂ ಕ್ಷಿಪಣಿ ದಾಳಿಯಲ್ಲಿ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ದಾಳಿ ಕುರಿತು ಮಾಹಿತಿ ನೀಡಿರುವ ಇರಾನ್‌ ಸೇನೆ, ‘ಇಸ್ರೇಲ್ ತನ್ನ ಪರಮಾಣು ನೆಲೆಗಳ ಮೇಲೆ ನೇರ ದಾಳಿ ನಡೆಸಿದೆ. ಇದರಲ್ಲಿ ಪರಮಾಣು ತಜ್ಞರು ಸೇರಿದಂತೆ ಪ್ರಮುಖರು ಹತ್ಯೆಗೆ ಈಡಾಗಿದ್ದಾರೆ. ಇದು ನಮಗೆ ಆಘಾತ ಉಂಟುಮಾಡಿದೆ. ಇದಕ್ಕೆ ನಾವು ಪ್ರತಿಕಾರ ತೀರಿಸಿಕೊಳ್ಳುತ್ತೇವೆ. ಈಗಾಗಲೇ ಇಸ್ರೇಲ್‌ನ ಹಲವು ನಗರಗಳ ಮೇಲೆ ನೂರಾರು ಕ್ಷಿಪಣಿಗಳನ್ನು ಹಾರಿಸಲಾಗಿದೆ’ ಎಂದು ಹೇಳಿದೆ.

Advertisements

ಇರಾನ್ ವಿರುದ್ಧ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ನಂತರ ಪಶ್ಚಿಮ ಏಷ್ಯಾ ಸಂಘರ್ಷದತ್ತ ಸಾಗಿದೆ. ಶುಕ್ರವಾರ ಇರಾನ್‌ನ ಪರಮಾಣು ಘಟಕ ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿ 78 ಜನ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇರಾನ್ ರಾಯಭಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯ: ಜಗತ್ತನ್ನು ಮೂರನೇ ಮಹಾಯುದ್ಧದತ್ತ ದೂಡುವ ಅಪಾಯ

ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್‌ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಸಹ ಇಸ್ರೇಲ್ ಸೇನೆ ಹೇಳಿದೆ.

ಹಾಗೆಯೇ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ. ರೆವಲ್ಯೂಷನರಿ ಗಾರ್ಡ್ಸ್, ಇರಾನ್ ದೇಶದ ಶಕ್ತಿಕೇಂದ್ರ ಎಂದು ಬಿಂಬಿತವಾಗಿದೆ. ಹಾಗಾಗಿ, ಇದನ್ನೇ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸಿದ್ದು, ಇರಾನ್ ದೇಶದ ಸ್ವಾಭಿಮಾನಕ್ಕೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X