ಅಮೆರಿಕದೊಂದಿಗೆ ಮಾತುಕತೆ ನಿರಾಕರಿಸಿದ ಇರಾನ್

Date:

ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂಚಿಸಿದ್ದರೂ, ಅದನ್ನು ಇರಾನ್ ಸರ್ಕಾರ ತಳ್ಳಿಹಾಕಿದೆ ಎಂದು aljazeera ವರದಿ ಮಾಡಿದೆ.

- Advertisement -

ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಈ ಕುರಿತು ಪ್ರತಿಕ್ರಿಯಿಸಿ, ಇರಾನ್ ಅಮೆರಿಕದೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. ದೇಶವು ಪ್ರಸ್ತುತ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಂತದಲ್ಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಈ ಯುದ್ಧವನ್ನು ಇರಾನ್‌ನ ಸಶಸ್ತ್ರ ಪಡೆಗಳು ಆರಂಭಿಸಿಲ್ಲ ಎಂಬುದನ್ನೂ ಅವರು ಒತ್ತಿ ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ಕೆಲವು ದಿನಗಳಿಂದ ಇರಾನ್ ಸರ್ಕಾರ ಇದೇ ನಿಲುವು ಪ್ರತಿಧ್ವನಿಸುತ್ತಿದೆ. ರಾಷ್ಟ್ರದ ಭದ್ರತೆ ಮತ್ತು ಸ್ವಾಯತ್ತತೆಯನ್ನು ಕಾಪಾಡಿಕೊಳ್ಳುವುದೇ ಈಗಿನ ಪ್ರಮುಖ ಆದ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಶ್ಮೀರ, ಉತ್ತರ ಪ್ರದೇಶದಿಂದ ಕರ್ನಾಟಕದವರೆಗೆ: ಇರಾನ್ ನಾಯಕ ಖಮೇನಿಗಿದ್ದ ಭಾರತದ ನಂಟು

ಇರಾನ್ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರರು, ದೇಶವು ಈಗಾಗಲೇ ಎರಡು ಬಾರಿ ರಾಜತಾಂತ್ರಿಕ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. 2025ರಲ್ಲಿ ಯುಎಸ್–ಇಸ್ರೇಲಿ ದಾಳಿಯಿಂದ ಮಾತುಕತೆಗಳಿಗೆ ಹಿನ್ನಡೆಯಾಯಿತು ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಅಮೆರಿಕ ಮತ್ತು ಅಂತಾರಾಷ್ಟ್ರೀಯ ಅಣುಶಕ್ತಿ ಸಂಸ್ಥೆ ಜೊತೆ ಎರಡು ಹೊಸ ಸುತ್ತಿನ ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಅದೇ ವೇಳೆಯಲ್ಲಿ ಮತ್ತೆ ದಾಳಿಗಳು ನಡೆದಿವೆ ಎಂದು ವಕ್ತಾರರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...