ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.
ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
#NEW: Video of the hijacking of the MSC Aries by the IRGC pic.twitter.com/AlANlpbAYM
— Michael A. Horowitz (@michaelh992) April 13, 2024
ಈ ತಿಂಗಳ ಆರಂಭದಲ್ಲಿ ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಮಾಜಿ ಕಾನ್ಸುಲೇಟ್ ಮೇಲೆ ದಾಳಿ ನಡೆದ ಬಳಿಕ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯನ್ನು ಇಸ್ರೇಲ್ ನಡೆಸಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ
ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿತ್ತು. ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಇಸ್ರೇಲ್ ಮೇಲೆ ಡ್ರೋನ್ ದಾಳಿಯನ್ನು ಆರಂಭಿಸಿದೆ. ಈಗ ಸರಕು ಸಾಗಣೆ ಹಡಗನ್ನು ವಶಕ್ಕೆ ಪಡೆದಿದೆ.
We strongly condemn the Iranian seizure of the Portuguese flagged, British-owned MSC AIRES in international waters. The crew is comprised of Indian, Filipino, Pakistani, Russian & Estonian nationals. We call on Iran to release the vessel & its international crew immediately.
— Adrienne Watson (@NSC_Spox) April 13, 2024
ಹಡಗು ಲಂಡನ್ ಮೂಲದ ಝೋಡಿಯಾಕ್ ಮ್ಯಾರಿಟೈಮ್ ಸಂಸ್ಥೆಗೆ ಸೇರಿದ್ದಾಗಿದೆ. ಝೋಡಿಯಾಕ್ ಮ್ಯಾರಿಟೈಮ್ ಇಸ್ರೇಲಿ ಬಿಲಿಯನೇರ್ ಇಯಾಲ್ ಆಫರ್‌ನ ಝೋಡಿಯಾ ಗ್ರೂಪ್‌ನ ಭಾಗವಾಗಿದೆ. ಹಗಡು ಇರಾನ್ ವಶದಲ್ಲಿರುವುದನ್ನು ಎಂಎಸ್‌ಸಿ ಒಪ್ಪಿಕೊಂಡಿದ್ದು ಈ ಹಡಗಲ್ಲಿ 25 ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ಹೇಳಿದೆ.
ಇದನ್ನು ಓದಿದ್ದೀರಾ? ಇಸ್ರೇಲ್ ಮೇಲೆ ಶೀಘ್ರ ಇರಾನ್ ದಾಳಿ ಸಾಧ್ಯತೆ: ಬೈಡನ್ ಎಚ್ಚರಿಕೆ
ವಿಮಾನದಲ್ಲಿ 17 ಭಾರತೀಯ ಪ್ರಜೆಗಳಿದ್ದಾರೆ ಮತ್ತು ಭಾರತೀಯರ ಭದ್ರತೆ ಮತ್ತು ಶೀಘ್ರ ಬಿಡುಗಡೆಗಾಗಿ ಅಧಿಕಾರಿಗಳು ಇರಾನ್‌ನೊಂದಿಗೆ ಮತ್ತು ಇರಾನ್ ರಾಯಭಾರಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಇರಾನ್ ಮತ್ತು ಇಸ್ರೇಲ್ ದೇಶಕ್ಕೆ ಪ್ರಯಾಣಿಸದಂತೆ ಭಾರತವು ಇತ್ತೀಚೆಗೆ ಸಲಹೆಯನ್ನು ನೀಡಿತ್ತು.