ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.
ಹಾರ್ಮುಜ್ ಜಲಸಂಧಿ ಬಳಿ ಇರಾನ್ ಮಿಲಿಟರಿ ವಶಪಡಿಸಿಕೊಂಡ ಸರಕು ಹಡಗಿನ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಟೆಹ್ರಾನ್ ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.
#NEW: Video of the hijacking of the MSC Aries by the IRGC pic.twitter.com/AlANlpbAYM
— Michael A. Horowitz (@michaelh992) April 13, 2024
ಅಮೀರ್-ಅಬ್ದುಲ್ಲಾಹಿಯಾನ್ ಅವರು ಭಾನುವಾರ ದೂರವಾಣಿ ಮಾತುಕತೆ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಈ ಮಾಹಿತಿ ನೀಡಿದ್ದಾರೆ ಎಂದು ಇರಾನ್ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? 17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್
ಮಾತುಕತೆ ವೇಳೆ ಜೈಶಂಕರ್ ಅವರು ಹಡಗು ಎಂಎಸ್‌ಸಿ ಏರೀಸ್‌ನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
“ನಾವು ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನೀಡಲಾಗುತ್ತದೆ. ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಹೇಳಿದ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತದೆ” ಎಂದು ಅಮೀರ್-ಅಬ್ದುಲ್ಲಾಹಿಯಾನ್ ಅವರು ತಿಳಿಸಿರುವುದಾಗಿ ಇರಾನ್ ಮಾಧ್ಯಮ ವರದಿ ಮಾಡಿದೆ.
Spoke to Iranian FM @Amirabdolahian this evening.
Took up the release of 17 Indian crew members of MSC Aries.
Discussed the current situation in the region. Stressed the importance of avoiding escalation, exercising restraint and returning to diplomacy.
Agreed to remain…
— Dr. S. Jaishankar (Modi Ka Parivar) (@DrSJaishankar) April 14, 2024
ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಇರಾನ್‌ನಿಂದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ
ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ತಿಂಗಳ ಆರಂಭದಲ್ಲಿ ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಮಾಜಿ ಕಾನ್ಸುಲೇಟ್ ಮೇಲೆ ದಾಳಿ ನಡೆದ ಬಳಿಕ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯನ್ನು ಇಸ್ರೇಲ್ ನಡೆಸಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿತ್ತು. ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಇಸ್ರೇಲ್ ಮೇಲೆ ಡ್ರೋನ್ ದಾಳಿಯನ್ನು ಆರಂಭಿಸಿದೆ. ಈಗ ಸರಕು ಸಾಗಣೆ ಹಡಗನ್ನು ವಶಕ್ಕೆ ಪಡೆದಿದೆ.