ಟ್ರಂಪ್ ಆದೇಶ: ಇರಾನ್ ಮೇಲೆ ಅಮೆರಿಕ ಭಾರೀ ವೈಮಾನಿಕ ದಾಳಿ

Date:

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದೆ. ಇತ್ತೀಚೆಗಷ್ಟೇ ಜಾರಿಯಾಗಿದ್ದ ಮಧ್ಯಂತರ ಕದನ ವಿರಾಮ ಒಪ್ಪಂದವನ್ನು ಬದಿಗೊತ್ತಿ ಎರಡೂ ರಾಷ್ಟ್ರಗಳು ಮತ್ತೆ ಸೇನಾ ಸಂಘರ್ಷಕ್ಕೆ ಇಳಿದಿವೆ. ಅಮೆರಿಕ ಸೇನೆಯು ಹಾರ್ಮುಜ್ ಜಲಸಂಧಿಯ ಸುತ್ತಮುತ್ತಲಿರುವ ಇರಾನ್‌ನ 10 ಪ್ರಮುಖ ಸೇನಾ ನೆಲೆಗಳ ಮೇಲೆ ಶನಿವಾರ ಭಾರೀ ವೈಮಾನಿಕ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಅಧಿಕೃತವಾಗಿ ಪ್ರಕಟಿಸಿದೆ.

- Advertisement -

ಹಾರ್ಮುಜ್ ಜಲಸಂಧಿಯಲ್ಲಿ 20 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಹೊತ್ತು ಕತಾರ್‌ನಿಂದ ಯುಎಇ ಕಡೆಗೆ ಸಾಗುತ್ತಿದ್ದ ಪನಾಮಾ ಧ್ವಜದ ‘ಕಿಕು’ ಎಂಬ ವಾಣಿಜ್ಯ ತೈಲ ಟ್ಯಾಂಕರ್ ಮೇಲೆ ಇರಾನ್ ಏಕಮುಖ ಡ್ರೋನ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ಈ ಕಠಿಣ ಕ್ರಮ ಕೈಗೊಂಡಿದೆ ಎಂದು ಅಮೆರಿಕ ಹೇಳಿಕೊಂಡಿದೆ.ಟ್ರಂಪ್ ಆದೇಶದಂತೆ ಅಮೆರಿಕ ಸೇನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅಮೆರಿಕ ದಾಳಿಯಿಂದ ಇರಾನ್ ವಾಯು ರಕ್ಷಣಾ ತಾಣಗಳು ಮತ್ತು ಕರಾವಳಿ ರಾಡಾರ್ ಕೇಂದ್ರಗಳು, ಡ್ರೋನ್ ಸಂಗ್ರಹಾಗಾರಗಳು ಹಾಗೂ ಕ್ಷಿಪಣಿ ಮೂಲಸೌಕರ್ಯ ನೆಲೆಗಳು, ಸಮುದ್ರದಲ್ಲಿ ಮೈನ್‌ಗಳನ್ನು (ಡೈನಮೈಟ್) ಅಳವಡಿಸುವ ಸಾಮರ್ಥ್ಯ ಹೊಂದಿದ್ದ ಸೇನಾ ತಾಣಗಳು ಧ್ವಂಸಗೊಂಡಿವೆ ಎಂದು ವರದಿಯಾಗಿದೆ.

“ಇರಾನ್ ಮತ್ತೊಮ್ಮೆ ಕದನ ವಿರಾಮ ಒಪ್ಪಂದವನ್ನು ಮುರಿದಿದೆ. ಅದಕ್ಕಾಗಿಯೇ ನಾವು ಅವರ ಕ್ಷಿಪಣಿ, ಡ್ರೋನ್ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದೇವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾವು ಸಂಪೂರ್ಣ ಸೇನಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ” ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿದೆ.

Advertisements

ಅಮರಿಕ ಬೆದರಿಕೆಗೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರತಿಕ್ರಿಯಿಸಿದ್ದು, ತಮ್ಮ ವಲಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.

ಕಳೆದ ನಾಲ್ಕು ತಿಂಗಳಿನಿಂದ ನಡೆಯಿತ್ತಿದ್ದ ಸಂಘರ್ಷಕ್ಕೆ ಅಂತ್ಯಹಾಡಲು ಉಭಯ ದೇಶಗಳ ನಡುವೆ ಎರಡು ವಾರಗಳ ಹಿಂದಷ್ಟೇ ಮಧ್ಯಂತರ ಶಾಂತಿ ಒಪ್ಪಂದ ಏರ್ಪಟ್ಟಿತ್ತು. ಆದರೆ ಈ ಹೊಸ ದಾಳಿಗಳಿಂದಾಗಿ ಶಾಂತಿ ಮಾತುಕತೆ ಸಂಪೂರ್ಣ ಹಳಿ ತಪ್ಪಿದೆ. ಜಾಗತಿಕ ತೈಲ ಮತ್ತು ಅನಿಲ ಪೂರೈಕೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಮತ್ತೆ ಜಾಗತಿಕ ಇಂಧನ ಮಾರುಕಟ್ಟೆ ಹಾಗೂ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ಸೃಷ್ಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...