ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

Date:

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು ಕತಾರ್ ಮಧ್ಯಸ್ಥಿಕೆ ವಹಿಸುತ್ತಿದೆ. ಸಂಧಾನ ಮಾತುಕತೆಗೂ ಮುನ್ನ ಕತಾರ್ ಮೂಲಕ ಅಮೆರಿಕ ಎದುರು‌ ಇರಾನ್ 7 ಷರತ್ತುಗಳನ್ನು ಮುಂದಿಟ್ಟಿದೆ. ಒಂದು ವೇಳೆ, ತನ್ನ ಈ ಬೇಡಿಕೆಗಳನ್ನು ಅಮೆರಿಕ ತಿರಸ್ಕರಿಸಿದರೆ, ‘ನಿರ್ಣಾಯಕ ಯುದ್ಧ’ ಎದುರಿಸಲು ತಾವು ಸಂಪೂರ್ಣವಾಗಿ ಸಜ್ಜಾಗಿರುವುದಾಗಿ ಇರಾನ್ ಎಚ್ಚರಿಸಿದೆ.

- Advertisement -

ಇರಾನ್‌ನ ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್ ಕಾರ್ಯದರ್ಶಿ ಮೊಹ್ಸೆನ್ ರೆಜಾಯಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.‌ ಕತಾರ್ ಮೂಲಕ ರವಾನಿಸಲಾದ ಷರತ್ತುಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಇರಾನ್ ವಿಧಿಸಿರುವ ಪ್ರಮುಖ ಬೇಡಿಕೆಗಳಲ್ಲಿ ಎಲ್ಲ ರಂಗಗಳಲ್ಲೂ ತಕ್ಷಣವೇ ಯುದ್ಧ ನಿಲ್ಲಿಸುವುದು, ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಇರಾನ್‌ನ ಹಣಕಾಸು ನಿಧಿಯನ್ನು ಬಿಡುಗಡೆ ಮಾಡುವುದು ಹಾಗೂ ನೌಕಾ ದಿಗ್ಬಂಧನವನ್ನು ತೆರವುಗೊಳಿಸುವುದು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿಯೂ ಈ ಕುರಿತು ಸ್ಪಷ್ಟನೆ ನೀಡಿರುವ ರೆಜಾಯಿ, “ಅಮೆರಿಕ ತಾನು ಸೃಷ್ಟಿಸಿಕೊಂಡಿರುವ ಬಿಕ್ಕಟ್ಟಿನಿಂದ ಹೊರಬರಬೇಕಾದರೆ ಇರಾನ್‌ನ ಹಕ್ಕುಗಳು ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಟ್ರಂಪ್ ಬೆದರಿಕೆಗಳಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ತಮ್ಮ ದೇಶವು ಸಂಪೂರ್ಣ ಯುದ್ಧಕ್ಕೂ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಸೇನಾ ಸನ್ನದ್ಧತೆಯ ಬಗ್ಗೆ ಮಾತನಾಡಿದ ರೆಜಾಯಿ, ‘ಅಮೆರಿಕದಿಂದ ಮತ್ತೊಂದು ಸುತ್ತಿನ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ಇರಾನ್ ತನ್ನ ಮಿಲಿಟರಿ ತಂತ್ರಗಾರಿಕೆಯನ್ನು ಬದಲಾಯಿಸಿಕೊಂಡಿದ್ದು, ಪರ್ಷಿಯನ್ ಕೊಲ್ಲಿ, ಒಮಾನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿರುವ ಅಮೆರಿಕದ ನೌಕಾಪಡೆಗಳನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸಿದೆ. ಇತ್ತೀಚೆಗೆ ಅಮೆರಿಕದ ಯುದ್ಧನೌಕೆಯ ಸಮೀಪ ಮಲ್ಟಿ-ವಾರ್‌ಹೆಡ್ ಹೊಂದಿರುವ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ” ಎಂದು ಹೇಳಿದ್ದಾರೆ.

‘ಮುಂಬರುವ ದಿನಗಳಲ್ಲಿ ಸಂಘರ್ಷ ಹೆಚ್ಚಾದರೆ ಪ್ರಾದೇಶಿಕ ಅಮೆರಿಕನ್ ಸೇನಾ ನೆಲೆಗಳು ಮಾತ್ರವಲ್ಲದೆ ಅವರ ವಾಣಿಜ್ಯ ಸಂಸ್ಥೆಗಳ ಮೇಲೆಯೂ ದಾಳಿ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಇದೇ ವೇಳೆ, “ಇರಾನ್‌ನ ಪರಮಾಣು ಶಕ್ತಿ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಇರಾನ್ ಪರಮಾಣು ಅಸ್ತ್ರ ನಿಷೇಧ ಒಪ್ಪಂದದಿಂದ (NPT) ಹೊರಬರುವ ನಿರ್ಧಾರವನ್ನು ತಳೆದಿಲ್ಲವಾದರೂ, ಅಮೆರಿಕದ ನಡವಳಿಕೆ ಅಂತಹ ನಿರ್ಧಾರಕ್ಕೆ ತಳ್ಳಬಹುದು. ಪರಮಾಣು ಆಯುಧಗಳನ್ನು ನಿಷೇಧಿಸುವ ಫತ್ವಾಗೆ ಇರಾನ್ ಇಂದಿಗೂ ಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಶಾಂತಿ ಒಪ್ಪಂದದ ಅವಧಿ ಮುಗಿದ ನಂತರ ಕತಾರ್ ಮತ್ತು ಪಾಕಿಸ್ತಾನ ದೇಶಗಳು ಟೆಹ್ರಾನ್ ಹಾಗೂ ವಾಷಿಂಗ್ಟನ್ ನಡುವೆ ಮಧ್ಯಸ್ಥಿಕೆ ವಹಿಸಿ ಮಾತುಕತೆ ಮರುಸ್ಥಾಪಿಸಲು ಶ್ರಮಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...