ಇರಾನ್ ಜೊತೆಗಿನ ಮಾತುಕತೆಗೆ ಅವಸರವಿಲ್ಲ: ಟ್ರಂಪ್

Date:

ಇರಾನ್ ಜೊತೆಗಿನ ಮಾತುಕತೆಗಳಿಗೆ ಮರಳಲು ತಮಗೆ ಯಾವುದೇ ನಿರ್ದಿಷ್ಟ ಕಾಲಮಿತಿ ಅಥವಾ ಅವಸರವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

- Advertisement -

ಅಲ್ ಜಜೀರಾ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಇರಾನ್‌ನಲ್ಲಿ ತೀವ್ರ ಹಣದುಬ್ಬರ ಉಂಟಾಗಿ ಆರ್ಥಿಕತೆ ಕುಸಿದಿದೆ. ಅಮೆರಿಕವು ಪ್ರಸ್ತುತ ಅತ್ಯಂತ ಬಲವಾದ ಸ್ಥಿತಿಯಲ್ಲಿದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಸಂಘರ್ಷದಲ್ಲಿ ತೀವ್ರವಾಗಿ ಗಾಯಗೊಂಡಿದ್ದರೂ ಇನ್ನೂ ಜೀವಂತವಾಗಿದ್ದಾರೆ” ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್-ಅಮೆರಿಕ ಸಂಘರ್ಷವು ಆರು ತಿಂಗಳುಗಳನ್ನು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕವು ಸದ್ಯಕ್ಕೆ ಹೊಸ ಮಿಲಿಟರಿ ದಾಳಿಗಳನ್ನು ನಡೆಸುವ ಯೋಜನೆಯನ್ನು ಹೊಂದಿಲ್ಲ; ಬದಲಿಗೆ ಆರ್ಥಿಕ ಕ್ರಮಗಳು ಮತ್ತು ನೌಕಾ ದಿಗ್ಬಂಧನದ ಮೂಲಕ ಇರಾನ್ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಇತ್ತೀಚೆಗೆ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ಅವರು ಇರಾನ್‌ನ ಆರ್ಥಿಕ ಮೂಲಗಳನ್ನು ಕಡಿತಗೊಳಿಸುವ ಉದ್ದೇಶದಿಂದ ‘ಆಪರೇಷನ್ ಎಕನಾಮಿಕ್ ಔಟ್ಕಾಸ್ಟ್’ ಅನ್ನು ಘೋಷಿಸಿದ್ದಾರೆ.

ಈ ನಡುವೆ, ಮಧ್ಯಪ್ರಾಚ್ಯದ ಬಿಕ್ಕಟ್ಟನ್ನು ಶಮನಗೊಳಿಸಲು ಕತಾರ್ ದೇಶವು ಇರಾನ್ ಮತ್ತು ಅಮೆರಿಕ ನಡುವೆ ರಾಜತಾಂತ್ರಿಕ ಪ್ರಯತ್ನಗಳನ್ನು ತೀವ್ರಗೊಳಿಸಿದೆ‌. ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಬಿನ್ ಜಾಸಿಮ್ ಅಲ್ ಥಾನಿ ಅವರು ಟೆಹ್ರಾನ್‌ಗೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ. ಹೋರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರವನ್ನು ಮರುಸ್ಥಾಪಿಸುವುದು ಮತ್ತು ಉದ್ವಿಗ್ನತೆಯನ್ನು ತಗ್ಗಿಸುವುದು ತಮ್ಮ ಮಾತುಕತೆಗಳ ಪ್ರಮುಖ ಉದ್ದೇಶವೆಂದು ಥಾನಿ‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...