BREAKING NEWS | ಇಸ್ರೇಲ್‌ನ 10 ನಗರಗಳ ಮೇಲೆ ಇರಾನ್‌ನಿಂದ ಕ್ಷಿಪಣಿಗಳ ದಾಳಿ

Date:

ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್‌ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

- Advertisement -

ಇಸ್ರೇಲ್‌ನ ಹೈಫಾ, ನೆಸ್‌ ಜಿಯೋನಾ, ರಿಶೋನ್‌ ಲೆಜಿಯೋನ್‌ ಹಾಗೂ ಟೆಲ್‌ ಅವೀವ್‌ ನಗರಗಳ ಮೇಲೆ ಕ್ಷಿಪಣಿಗಳಿಂದ ದಾಳಿ ನಡೆಸಲಾಗಿದೆ. ಇಸ್ರೇಲ್‌ನಲ್ಲಿ ಸ್ಫೋಟಗಳ ಶಬ್ದಗಳು ಕೇಳಿಬಂದವು. ಅನೇಕ ಸ್ಥಳಗಳಲ್ಲಿ ಸೈರನ್‌ಗಳು ಮೊಳಗುತ್ತಿವೆ. ಇರಾನ್‌ನಿಂದ ಉಡಾಯಿಸಲಾದ ಬ್ಯಾಲಿಸ್ಟಿಕ್ ಕ್ಷಿಪಣಿ ಹೈಫಾ ನಗರದ ಮೇಲೆ ದಾಳಿ ಮಾಡಿತು. ಇರಾನ್‌ನಿಂದ ಸುಮಾರು 20-30 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇರಾನ್‌ನಿಂದ ಉಡಾಯಿಸಲಾದ ಕ್ಷಿಪಣಿಗಳನ್ನು ಗುರುತಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಬೆದರಿಕೆಯನ್ನು ತಡೆಯಲು ನಮ್ಮ ರಕ್ಷಣಾ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಸಂರಕ್ಷಿತ ಪ್ರದೇಶಗಳಿಗೆ ತೆರಳಿ ಮುಂದಿನ ಆದೇಶದವರೆಗೆ ಅಲ್ಲಿಯೇ ಇರಬೇಕೆಂದು ಸೇನೆ ಎಚ್ಚರಿಕೆ ನೀಡಿದೆ.

ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ

ತಮ್ಮ ದೇಶದ ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯನ್ನು ಇರಾನ್ ಖಂಡಿಸಿದ್ದು, ಈ ಕ್ರಿಮಿನಲ್‌ ವರ್ತನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇರಾನ್‌ನ ವಿದೇಶಾಂಗ ಸಚಿವ ಸಯೀದ್ ಅಬ್ಬಾಸ್ ಅರಘ್ಚಿ, ಇದು ಅಂತಾರಾಷ್ಟ್ರೀಯ ಕಾನೂನು, ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಪರಮಾಣು ಪ್ರಸರಣ ನಿಷೇಧ ಒಪ್ಪಂದದ (ಎನ್‌ಪಿಟಿ) ಗಂಭೀರ ಉಲ್ಲಂಘನೆಯಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರವಾದ ಅಮೆರಿಕವು ಶಾಂತಿಯುತ ಪರಮಾಣು ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಕ್ರಿಮಿನಲ್ ನಡವಳಿಕೆಯನ್ನು ಎಸಗಿದೆ ಎಂದು ಅರಘ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಂದು ಮುಂಜಾನೆಯ ಘಟನೆಗಳು ಅತಿರೇಕವಾದವು. ಇದು ಗಂಭೀರ ಪರಿಣಾಮಗಳನ್ನು ಬೀರುತ್ತದೆ. ವಿಶ್ವಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ಈ ಅತ್ಯಂತ ಅಪಾಯಕಾರಿ, ಕಾನೂನುಬಾಹಿರ ಮತ್ತು ಕ್ರಿಮಿನಲ್ ನಡವಳಿಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಅರಘ್ಚಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ಜಾಗತಿಕ ಸಮುದಾಯವು ಇದರ ಬಗ್ಗೆ ಗಮನಹರಿಸಬೇಕೆಂದು ಎಂದು ಕರೆ ನೀಡಿರುವ ಅವರು, ವಿಶ್ವಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ವಾಷಿಂಗ್ಟನ್ ತೆಗೆದುಕೊಂಡ ಅಪಾಯಕಾರಿ ಮತ್ತು ಕಾನೂನುಬಾಹಿರ ಕ್ರಮಗಳನ್ನು ಖಂಡಿಸಬೇಕು ಎಂದು ಹೇಳಿದರು.

ವಿಶ್ವಸಂಸ್ಥೆಯ ಚಾರ್ಟರ್ ಅಡಿಯಲ್ಲಿರುವ ನಿಬಂಧನೆಗಳನ್ನು ಉಲ್ಲೇಖಿಸಿದ ಅರಾಘ್ಚಿ, ಇರಾನ್‌ಗೆ ಆತ್ಮರಕ್ಷಣೆಯ ಹಕ್ಕಿದೆ. ಅದನ್ನು ಚಲಾಯಿಸಲು ಅದು ಸ್ವತಂತ್ರವಾಗಿದೆ. ಇರಾನ್ ಅಂತಹ ಎಲ್ಲ ಆಯ್ಕೆಗಳನ್ನು ಕಾಯ್ದಿರಿಸಿದೆ. ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಸ್ವರಕ್ಷಣೆಯಲ್ಲಿ ಕಾನೂನುಬದ್ಧ ಪ್ರತಿಕ್ರಿಯೆಯನ್ನು ಅನುಮತಿಸುವ ಅದರ ನಿಬಂಧನೆಗಳಿಗೆ ಅನುಗುಣವಾಗಿ, ಇರಾನ್ ತನ್ನ ಸಾರ್ವಭೌಮತ್ವ ಮತ್ತು ಜನರನ್ನು ರಕ್ಷಿಸಲು ಎಲ್ಲ ಆಯ್ಕೆಗಳನ್ನು ಕಾಯ್ದಿರಿಸಿದೆ ಎಂದು ಹೇಳಿದ್ದಾರೆ.

ಕಳೆದ ರಾತ್ರಿ ಮೂರು ಪ್ರಮುಖ ಇರಾನಿನ ಪರಮಾಣು ತಾಣಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಅನ್ನು ಗುರಿಯಾಗಿಸಿಕೊಂಡ ಅಮೆರಿಕ ಮಿಲಿಟರಿ ಕಾರ್ಯಾಚರಣೆಯ ನಂತರ ಈ ಹೇಳಿಕೆ ನೀಡಲಾಗಿದೆ.

ಇರಾನ್‌ನ ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ.

“ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ”, ಎಂದು ಡೊನಾಲ್ಡ್‌ ಟ್ರಂಪ್ ಅವರು ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ...

ಗುಜರಾತ್ ಗಲಭೆಯಲ್ಲಿ ಮೋದಿ ದೋಷಮುಕ್ತರಾದ ಬಗ್ಗೆ ರಶ್ದಿ ಪ್ರಶ್ನೆ; ಅಮೆರಿಕದಲ್ಲಿ ಆರ್.ಎಸ್.ಎಸ್ ಪ್ರಭಾವಕ್ಕೆ ಕಳವಳ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...