ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಸೇನಾ ಮುಖ್ಯಸ್ಥ, ರಕ್ಷಣಾ ಸಚಿವ ಹತ

Date:

ಇರಾನ್‌ನ ರಕ್ಷಣಾ ಮಂಡಳಿಯ ಸಭೆಯನ್ನು ಗುರಿಯಾಗಿಸಿಕೊಂಡು ನಡೆದ ವಾಯುದಾಳಿಯಲ್ಲಿ ಇರಾನ್‌ನ ಸೇನಾ ಮುಖ್ಯಸ್ಥ ಮತ್ತು ರಕ್ಷಣಾ ಸಚಿವರು ಸಾವನ್ನಪ್ಪಿದ್ದಾರೆ ಎಂದು ಇರಾನ್ ರಾಜ್ಯ ಟಿವಿ ಭಾನುವಾರ ವರದಿ ಮಾಡಿದೆ.

- Advertisement -

ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥ ಮತ್ತು ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಅವರೊಂದಿಗೆ ಸಭೆ ನಡೆಸುತ್ತಿದ್ದ ಜನರಲ್ ಅಬ್ದುಲ್ ರಹೀಮ್ ಮೌಸವಿ ಮತ್ತು ರಕ್ಷಣಾ ಸಚಿವ ಜನರಲ್ ಅಜೀಜ್ ನಾಸಿರ್ಜಾದೆ ಹತರಾಗಿದ್ದಾರೆ ಎಂದು ಇರಾನ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ನಾಚಿಕೆಗೇಡು: ಇಸ್ರೇಲ್‌ಗೆ ಮೋದಿ ಭೇಟಿ ನೀಡಿದ ಎರಡು ದಿನದಲ್ಲೇ ಇರಾನ್ ಮೇಲೆ ದಾಳಿ; ಕಾಂಗ್ರೆಸ್ ಟೀಕೆ

ಇನ್ನು ಈಗಾಗಲೇ ದಾಳಿಯಲ್ಲಿ ಇರಾನ್‌ನ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಖಮೇನಿಯವರ ಉನ್ನತ ಸಲಹೆಗಾರ ಅಲಿ ಶಮ್ಖಾನಿಯೂ ಹತರಾಗಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ.

ಇದಾಗುತ್ತಿದ್ದಂತೆ ಇರಾನ್‌ನ ಸೇನೆ ‘ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್’ ಅತ್ಯಂತ ಕಠಿಣ ಪ್ರತಿಜ್ಞೆ ಮಾಡಿದೆ. ‘ಖಮೇನಿ ಹಂತಕರನ್ನು ಶಿಕ್ಷಿಸುತ್ತೇವೆ’ ಎಂದು ಘೋಷಿಸಿದೆ.

ಈ ನಡುವೆ ಇರಾನ್ ಸತತವಾಗಿ ದಾಳಿಗಳನ್ನು ಮುಂದುವರಿಸಿದರೆ, ಟೆಹ್ರಾನ್ ಮೇಲೆ ‘ಇದುವರೆಗೆ ಎಂದೂ ಕಾಣದಂತಹ’ ಭೀಕರ ಶಕ್ತಿಯೊಂದಿಗೆ ದಾಳಿ ಮಾಡುತ್ತೇವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...