ಇರಾನ್‌ನ ಬೃಹತ್ ಸೇತುವೆ ಧ್ವಂಸ : 8 ಸೇತುವೆಗಳ ಮೇಲೆ ಪ್ರತಿದಾಳಿಗೆ ಇರಾನ್ ಶಪಥ!

Date:

ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿಯಾಗಿ ನಡೆಸಿದ ವಾಯುದಾಳಿಯಲ್ಲಿ ಇರಾನ್‌ನ ಬೃಹತ್ ಸೇತುವೆಯೊಂದು ಭಾಗಶಃ ಧ್ವಂಸಗೊಂಡಿದೆ. ಈ ಘಟನೆಯಿಂದ ಕೆರಳಿರುವ ಇರಾನ್, ಅಮೆರಿಕದ ಮಿತ್ರರಾಷ್ಟ್ರಗಳಾದ ಕೊಲ್ಲಿ ರಾಷ್ಟ್ರಗಳ ಎಂಟು ಪ್ರಮುಖ ಸೇತುವೆಗಳನ್ನು‌ ಪ್ರತಿದಾಳಿ ಮಾಡುವುದಕ್ಕೆ ಗುರಿಯಾಗಿಸಿಕೊಂಡು ‘ಹಿಟ್-ಲಿಸ್ಟ್’ ಬಿಡುಗಡೆ ಮಾಡುವ ಮೂಲಕ ತೀವ್ರ ಪ್ರತಿಕಾರ ತೀರಿಸಿಕೊಳ್ಳುವ ಎಚ್ಚರಿಕೆ ಕೊಟ್ಟಿದೆ.

- Advertisement -

ಇರಾನ್‌ನ ಅತೀ ಎತ್ತರದ ಸೇತುವೆ ನೆಲಸಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇರಾನ್‌ನ ರಾಜಧಾನಿ ಟೆಹ್ರಾನ್ ಹಾಗೂ ಕರಾಜ್ ನಗರವನ್ನು ಸಂಪರ್ಕಿಸುವ, ಸುಮಾರು 136 ಮೀಟರ್ ಎತ್ತರದ ‘ಬಿ1’ (B1) ಸೇತುವೆಯ ಮೇಲೆ ಗುರುವಾರ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿವೆ. ಈ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, 95ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಲ್ಬೋರ್ಜ್ ಪ್ರಾಂತ್ಯದ ಉಪ ರಾಜ್ಯಪಾಲ ಗೋದ್ರತೊಲ್ಲಾ ಸೈಫ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ : ನಾಯಕರು ಐಷಾರಾಮಿ ಬಂಗಲೆಗೆ ಜೋತು ಬಿದ್ದರೆ ರಾಜಕಾರಣ ಸರಳವಾಗುವುದು ಯಾವಾಗ?

ನಿರ್ಮಾಣ ಹಂತದಲ್ಲಿದ್ದ ಈ ಬೃಹತ್ ಸೇತುವೆ ಕುಸಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಇರಾನ್‌ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ. “ಇರಾನ್ ಸಂಧಾನಕ್ಕೆ ಬರದಿದ್ದರೆ ಆ ದೇಶವನ್ನು ಶಿಲಾಯುಗಕ್ಕೆ ತಳ್ಳಲಾಗುವುದು” ಎಂದು ಟ್ರಂಪ್ ಆಕ್ರೋಶ ಹೊರಹಾಕಿದ್ದಾರೆ.

WhatsApp Image 2026 04 03 at 11.28.44

ಇರಾನ್‌ನಿಂದ 8 ಸೇತುವೆಗಳ ‘ಹಿಟ್-ಲಿಸ್ಟ್’

ದಾಳಿಗೆ ಸೇಡು ತೀರಿಸಿಕೊಳ್ಳಲು ಇರಾನ್ ಸಜ್ಜಾಗಿದೆ. ಇರಾನ್‌ನ ಅರೆ-ಅಧಿಕೃತ ಸುದ್ದಿಸಂಸ್ಥೆ ‘ಫಾರ್ಸ್’, ಕೊಲ್ಲಿ ರಾಷ್ಟ್ರಗಳಲ್ಲಿರುವ 8 ಆಯಕಟ್ಟಿನ ಸೇತುವೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕುವೈತ್‌ನ ಶೇಖ್ ಜಾಬರ್ ಅಲ್-ಅಹ್ಮದ್ ಅಲ್-ಸಬಾ ಸಮುದ್ರ ಸೇತುವೆ, ಯುಎಇಯ ಶೇಖ್ ಜಾಯೆದ್ ಮತ್ತು ಅಲ್ ಮಕ್ತಾದಂತಹ ಪ್ರಮುಖ ಸೇತುವೆಗಳು, ಸೌದಿ ಅರೇಬಿಯಾ ಮತ್ತು ಬಹ್ರೇನ್ ಅನ್ನು ಸಂಪರ್ಕಿಸುವ ಕಿಂಗ್ ಫಹದ್ ಕಾಸ್‌ವೇ ಹಾಗೂ ಜೋರ್ಡಾನ್‌ನ ಮೂರು ಪ್ರಮುಖ ಸೇತುವೆಗಳು ಸೇರಿವೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಸೇತುವೆಗಳನ್ನು ಗುರಿಯಾಗಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಅಮೆರಿಕದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ, “ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವ ಮೂಲಕ ಇರಾನಿಯನ್ನರನ್ನು ಶರಣಾಗುವಂತೆ ಮಾಡಲು ಸಾಧ್ಯವಿಲ್ಲ. ಇದು ಶತ್ರುವಿನ ನೈತಿಕ ಪತನವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ. ಫೆಬ್ರವರಿ 28 ರಿಂದ ಆರಂಭವಾದ ಈ ಸಂಘರ್ಷದಲ್ಲಿ ಈವರೆಗೆ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸೇರಿದಂತೆ 1,340ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...