ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ: ಡೊನಾಲ್ಡ್‌ ಟ್ರಂಪ್

Date:

ಗಾಜಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

- Advertisement -

ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ತಹಬದಿಗೆ ಬರುವುದಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಾಂತಿ ಸ್ಥಾಪಿಸಲು ಬಹಳ ಶ್ರಮಿಸಿರುವ ಕತಾರ್ ಮತ್ತು ಈಜಿಪ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ ಅವಧಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಮಾತುಕತೆಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.

‘ನನ್ನ ಪ್ರತಿನಿಧಿಗಳು ಗಾಜಾ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಇಸ್ರೇಲ್ ಜೊತೆ ದೀರ್ಘ ಮತ್ತು ಅಶಾದಾಯಕ ಮಾತುಕತೆ ನಡೆಸಿದರು. 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ. ಈ ಸಮಯದಲ್ಲಿ ನಾವು ಯುದ್ಧವನ್ನು ಕೊನೆಗೊಳಿಸಲು ಎಲ್ಲ ದೇಶಗಳೊಂದಿಗೆ ಪ್ರಯತ್ನ ಮಾಡುತ್ತೇವೆ. ಶಾಂತಿಯನ್ನು ತರಲು ಬಹಳ ಶ್ರಮಿಸಿದ ಕತಾರ್ ಮತ್ತು ಈಜಿಪ್ಟ್ ಅಂತಿಮ ಪ್ರಸ್ತಾಪವನ್ನು ನೀಡುತ್ತವೆ. ಪಶ್ಚಿಮ ಏಷ್ಯಾದ ಒಳಿತಿಗಾಗಿ, ಹಮಾಸ್ ಈ ಒಪ್ಪಂದವನ್ನು ಒಪ್ಪಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ, ಇದು ಹೀಗೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ’ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಈ ನಡುವೆ ಗಾಜಾ ಮೇಲೆ ಇಸ್ರೇಲ್‌ನ ವಾಯುದಾಳಿ ಮುಂದುವರಿದಿದ್ದು, ಸೋಮವಾರ ಸುಮಾರು 50 ವೈಮಾನಿಕ ದಾಳಿ ನಡೆಸಿದೆ. ಪೂರ್ವ ಗಾಜಾ ಗುರಿಯಾಗಿಸಿಕೊಂಡು ಈ ದಾಳಿಗಳನ್ನು ನಡೆಸಿದ್ದು, ನಿವಾಸಿಗಳು ನಗರ ತೊರೆಯುವಂತೆ ಎಚ್ಚರಿಕೆ ನೀಡಲಾಗಿತ್ತು.

ಇಸ್ರೇಲ್ ಪಡೆಗಳು ಭಾನುವಾರ ಗಾಜಾದಲ್ಲಿ ಕನಿಷ್ಠ 68 ಪ್ಯಾಲೆಸ್ಟೀನಿಯನ್ನರನ್ನು ಕೊಂದಿವೆ ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಆಲ್ ಜಜೀರಾ ವರದಿ ಮಾಡಿದೆ.

ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ. ಯುದ್ಧದಲ್ಲಿ ಈವರೆಗೆ ಕನಿಷ್ಠ 56,500 ಜನ ಮೃತಪಟ್ಟಿದ್ದು 33,419 ಮಂದಿ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...