‘ಯೆಲ್ಲೋ ಲೈನ್‌’ ದಾಟಿದ ಗಾಜಾ ಬಸ್‌ ಮೇಲೆ ಇಸ್ರೇಲ್‌ ದಾಳಿ; ಒಂದೇ ಕುಟುಂಬದ 9 ಮಂದಿ ಹತ್ಯೆ

Date:

ಕಳೆದ ಎರಡು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ನಿರಂತರ ಕ್ರೌರ್ಯ ಎಸಗುತ್ತಿದೆ. ಇದೀಗ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ ಎಂದು ಟ್ರಂಪ್ ಬಹಿರಂಗವಾಗಿ ಹೇಳಿದ್ದರು. ಆದರೆ, ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಗುರುತಿಸಲಾಗದ ಗಡಿಯಲ್ಲಿ ಹಳದಿ ರೇಖೆ (ಯೆಲ್ಲೋ ಲೈನ್) ದಾಟಿದ ಬಸ್‌ ಮೇಲೆ ಇಸ್ರೇಲ್‌ ಅಕ್ರಮಣಕಾರಿ ಗುಂಡಿನ ದಾಳಿ ನಡೆಸಿದೆ. ಬಸ್‌ನಲ್ಲಿದ್ದ ಒಂದೇ ಕುಟುಂಬದ 9 ಮಂದಿಯನ್ನು ಹತ್ಯೆಗೈದಿದೆ.

- Advertisement -

ಘಟನೆ ಬಗ್ಗೆ ಗಾಜಾದ ನಾಗರಿಕ ರಕ್ಷಣಾ ಏಜೆನ್ಸಿ ವಕ್ತಾರ ಮಹ್ಮೂದ ಬಸ್ಸಾಲ್ ಮಾಹಿತಿ ನೀಡಿದ್ದಾರೆ. ಗಾಜಾದ ನಾಗರಿಕ ರಕ್ಷಣಾ ಪಡೆಯ ಸಿಬ್ಬಂದಿಗಳು ಮೃತದೇಹಗಳನ್ನು ಬಸ್‌ನಿಂದ ಹೊರತೆಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತರನ್ನು ಅಬು ಶಾಬಾನ್ ಮತ್ತು ಅವರ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಅವರು ಜೈತುನ್ ಪ್ರದೇಶದಲ್ಲಿ ತಮ್ಮ ಮನೆಯನ್ನು ಹುಡುಕಲು ಪ್ರಯತ್ನಿಸುತ್ತಿದ್ದಾಗ, ಅವರ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ಬಸ್ಸಾಲ್ ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕ್ರಿಯಿಸಿರುವ ಇಸ್ರೇಲ್ ಮಿಲಿಟರಿ, “ಕದನ ವಿರಾಮ ಘೋಷಣೆಯ ಬಳಿಕ ಗಡಿಪ್ರದೇಶದ ‘ಹಳದಿ ರೇಖೆ’ ಬಳಿ ಇಸ್ರೇಲಿ ಪಡೆಗಳು ಬೀಡುಬಿಟ್ಟಿದ್ದಾರೆ. ಆ ಪ್ರದೇಶದಲ್ಲಿ ಬಸ್‌ವೊಂದು ‘ಹಳದಿ ರೇಖೆ’ಯನ್ನು ದಾಟಿದೆ. ಅನುಮಾನಸ್ಪದವಾಗಿ ಬರುತ್ತಿದ್ದ ಬಸ್‌ಗೆ ಎಚ್ಚರಿಕೆ ನೀಡಲು ಸೇನೆಯು ಗುಂಡು ಹಾರಿಸಿದೆ. ಆದರೂ, ವಾಹನವು ಬೆದರಿಕೆಯೊಡ್ಡವ ರೀತಿಯಲ್ಲಿ ಸೈನಿಕರತ್ತ ಬರುತ್ತಲೇ ಇತ್ತು. ಹೀಗಾಗಿ, ಸೈನಿಕರು ತಮ್ಮ ರಕ್ಷಣೆಗಾಗಿ ಬಸ್‌ ಮೇಲೆ ದಾಳಿ ನಡೆಸಿದ್ದಾರೆ” ಎಂದು ಹೇಳಿಕೊಂಡಿದೆ.

ಕದನ ವಿರಾಮ ಘೋಷಣೆಯಾದ ಬಳಿಕ, ಲಕ್ಷಾಂತರ ಪ್ಯಾಲೆಸ್ತೀನಿಯರು ತಮ್ಮ ಪ್ರದೇಶಗಳಿಗೆ ಮರಳುತ್ತಿದ್ದಾರೆ. ಅಲ್ಲಿದ್ದ ತಮ್ಮ ಮನೆಗಳನ್ನು ಹುಡುಕುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...