ಗಾಜಾ ಕದನ ವಿರಾಮಕ್ಕೆ ಇಸ್ರೇಲ್ – ಹಮಾಸ್ ಒಪ್ಪಿಗೆ

Date:

Advertisements

ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಮಧ್ಯವರ್ತಿಗಳು ಬುಧವಾರ ಘೋಷಿಸಿದ್ದಾರೆ.

ಆ ಮೂಲಕ ಗಾಜಾ ಪಟ್ಟಿಯಲ್ಲಿ 15 ತಿಂಗಳಿನಿಂದ ನಡೆಯುತ್ತಿರುವ ವಿನಾಶಕಾರಿ ಯುದ್ಧಕ್ಕೆ ವಿರಾಮ ಸಿಗಲಿದೆ. ಖತರ್‌ ರಾಜಧಾನಿಯಲ್ಲಿ ವಾರಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದಕ್ಕೆ ಬರಲಾಗಿದೆ.

ಒಪ್ಪಂದಂತೆ, ಹಮಾಸ್ – ಇಸ್ರೇಲ್ ಪರಸ್ಪರ ಒತ್ತೆಸೆರೆಯಲ್ಲಿಟ್ಟಿರುವ ಡಜನ್‌ಗಟ್ಟಲೆ ಒತ್ತೆಯಾಳುಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಿದೆ. ಈ ಕದನ ವಿರಾಮವು ಧ್ವಂಸಗೊಂಡು ನಲುಗುತ್ತಿರುವ ಯುದ್ಧಪೀಡಿತ ಪ್ರದೇಶಕ್ಕೆ ಅತ್ಯಂತ ಅಗತ್ಯವಿರುವ ಮಾನವೀಯ ಸಹಾಯವನ್ನು ಒದಗಿಸಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ಖತರ್‌ ಮತ್ತು ಹಮಾಸ್‌ನ ಅಧಿಕಾರಿಗಳು ಒಪ್ಪಂದಕ್ಕೆ ಬರಲಾಗಿದೆ ಎಂದು ದೃಢಪಡಿಸಿದ್ದಾರೆ. ಆದರೆ ಇಸ್ರೇಲ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಒಪ್ಪಂದವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಂಪುಟವು ಅನುಮೋದಿಸಬೇಕಾಗಿದೆ. ಆ ಬಳಿಕ ಮುಂಬರುವ ದಿನಗಳಲ್ಲಿ ಕದನವಿರಾಮ ಒಪ್ಪಂದ ಜಾರಿಗೆ ಬರುವ ನಿರೀಕ್ಷೆಯಿದೆ.

ಕದನ ವಿರಾಮ ಒಪ್ಪಂದದಂತೆ 6 ವಾರಗಳ ಕಾಲ ಯುದ್ಧವು ನಿಲ್ಲಲಿದೆ. ಅದರೊಂದಿಗೆ ಯುದ್ಧವನ್ನು ಸಂಪೂರ್ಣವಾಗಿ ಕೊನೆಗೊಳಿಸುವ ಮಾತುಕತೆಗಳು ಗರಿಗೆರದಲಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X