Israel – Iran conflict | ಅಮೆರಿಕ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಶಪಥ

Date:

Advertisements

ತನ್ನ ಮೂರು ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.

ಇರಾನ್‌ನ ಮೂರು ಪ್ರಮುಖ ಪರಮಾಣು ನೆಲೆಗಳ ಮೇಲೆ ಅಮೆರಿಕ ವಾಯುದಾಳಿ ನಡೆಸಿದ ನಂತರ ಅಮೆರಿಕಕ್ಕೆ ಭಯ ಶುರುವಾಗಿದೆ. ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರವಹಿಸಲು ಸೂಚನೆ ನೀಡಲಾಗಿದೆ. ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಸೇರಿದಂತೆ ಪ್ರಮುಖ ಅಮೇರಿಕನ್ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡುವುದಾಗಿ ಇರಾನ್ ಹೇಳಿಕೊಂಡಿದೆ. ದಾಳಿಯ ‘ಸಮಯ, ಸ್ವರೂಪ, ಪ್ರಮಾಣ’ ನಾವು ನಿರ್ಧರಿಸುತ್ತೇವೆ ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ರಾಯಭಾರಿ ಅಮೀರ್ ಸಯೀದ್ ಇರಾವಿನಿ ಹೇಳಿದ್ದಾರೆ.

Advertisements

ಅಮೆರಿಕ ದಾಳಿ ಬೆನ್ನಲ್ಲೇ ಕೆರಳಿರುವ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಇರಾನ್ ಸಂಸತ್ತು ಈ ಕ್ರಮವನ್ನು ಅನುಮೋದಿಸಿದ್ದು ಹಾರ್ಮುಜ್ ಜಲಸಂಧಿಯನ್ನು ಮುಚ್ಚಬೇಕೆ ಅಥವಾ ಬೇಡವೇ ಎಂಬುದನ್ನು ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯು ನಿರ್ಧರಿಸುತ್ತದೆ ಎಂದು ಇರಾನ್‌ನ ರಾಜ್ಯ ಮಾಧ್ಯಮ ಪ್ರೆಸ್ ಟಿವಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಇರಾನಿನ ಸರ್ವೋಚ್ಚ ನಾಯಕ ಅಲಿ ಖಮೇನಿಯವರ ಪ್ರತಿನಿಧಿಯಾದ ಹೊಸೈನ್ ಶರಿಯತ್‌ಮದಾರಿ ಅವರು, ಅಮೆರಿಕನ್, ಬ್ರಿಟಿಷ್, ಜರ್ಮನ್ ಮತ್ತು ಫ್ರೆಂಚ್ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದು ಸೇರಿದಂತೆ ತಕ್ಷಣದ ಪ್ರತೀಕಾರಕ್ಕೆ ಕರೆ ನೀಡಿದ್ದಾಗಿ ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ ಅಮೆರಿಕ: ಐದು ಎಡಪಕ್ಷಗಳಿಂದ ಖಂಡನೆ

ಜಾಗತಿಕ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖ ಜಲಮಾರ್ಗವನ್ನು ಮುಚ್ಚುವುದು ಇನ್ನೂ ಅಂತಿಮವಾಗಿಲ್ಲ. ವಿಶ್ವದ ತೈಲ ಮತ್ತು ಅನಿಲದ ಸುಮಾರು 20 ಪ್ರತಿಶತವು ಹಾರ್ಮುಜ್ ಜಲಸಂಧಿಯ ಮೂಲಕ ಚಲಿಸುತ್ತದೆ. ಇರಾನಿನ ಶಾಸಕರು ಮತ್ತು ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕಮಾಂಡರ್ ಎಸ್ಮಾಯಿಲ್ ಕೊಸಾರಿ, ಯಂಗ್ ಜರ್ನಲಿಸ್ಟ್ ಕ್ಲಬ್‌ಗೆ ಜಲಸಂಧಿಯನ್ನು ಮುಚ್ಚುವುದು ‘ಕಾರ್ಯಸೂಚಿಯಲ್ಲಿದೆ’ ಮತ್ತು ‘ಅಗತ್ಯವಿದ್ದಾಗಲೆಲ್ಲಾ ಹಾಗೆ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

‘ರಾಜತಾಂತ್ರಿಕತೆ ನಾಶಮಾಡಲು ಅಮೆರಿಕ ನಿರ್ಧಾರ’

“ರಾಜತಾಂತ್ರಿಕತೆಯನ್ನು ನಾಶಮಾಡಲು ಅಮೆರಿಕ ನಿರ್ಧರಿಸಿದೆ. ಈಗ ರಾಜತಾಂತ್ರಿಕತೆಯ ಸಮಯ ಮೀರಿದೆ. ಇರಾನ್‌ಗೆ ತನ್ನನ್ನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕಿದೆ. ಇರಾನ್‌ ಫೋರ್ಡೊ, ನಟಾನ್ಸ್ ಹಾಗೂ ಎಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು. ಆ ಮೂಲಕ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ನೇರ ಮಧ್ಯಪ್ರವೇಶ ಮಾಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ನಿ, ಮಾಸ್ಕೊಗೆ ತೆರಳಲಿದ್ದು, ರಷ್ಯಾ ಜೊತೆ ಸಮನ್ವಯ ಸಾಧಿಸಲಿದ್ದಾರೆ” ಇರಾನ್‌ನ ರಾಯಭಾರಿ ಅಮೀರ್ ಸಯೀದ್ ಇರಾವಿನಿ ತಿಳಿಸಿದ್ದಾರೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್‌ಕಿಯಾನ್ ಸಹ ಪ್ರತೀಕಾರ ತೀರಿಸುವುದಾಗಿ ಹೇಳಿದ್ದಾರೆ. “ಅಮೆರಿಕ ‘ನಮ್ಮ ಮೇಲೆ ದಾಳಿ ನಡೆಸಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಏನು ಮಾಡುತ್ತೀರಿ? ಸಹಜವಾಗಿಯೇ ದಾಳಿಯಿಂದಲೇ ಉತ್ತರ ನೀಡಬೇಕು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X