ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಪ್ರಾದೇಶಿಕ ಸಂಘರ್ಷದ ಆತಂಕ

Date:

ಲೆಬನಾನ್‌ ಮೇಲೆ ಇಸ್ರೇಲ್ ರಾತ್ರೋ ರಾತ್ರಿ ವೈಮಾನಿಕ ದಾಳಿ ನಡೆಸಿದ್ದು ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ. ಈ ನಡುವೆ ಪ್ರಾದೇಶಿಕ ಸಂಘರ್ಷದ ಆತಂಕವು ಅಧಿಕವಾಗಿದೆ.

- Advertisement -

ಈಗಾಗಲೇ ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದೆ. ಗಾಝಾ ನಡುವಿನ ಯುದ್ಧದ ಮಧ್ಯೆ ಇರಾನ್‌ ಮತ್ತು ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ದಕ್ಷಿಣ ಲೆಬನಾನ್‍ನ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ  ‘ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಇತರ ಮೂವರು ಹಿಜ್ಬುಲ್ಲಾ ಗುಂಪಿನ ಸದಸ್ಯರೂ ಮೃತರಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನು  ಇಸ್ರೇಲ್ ಆಕ್ರಮಿತ ಗೊಲಾನ್ ಹೈಟ್ಸ್‍ಗೆ 10ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಲೆಬನಾನ್‌ನ ದಕ್ಷಿಣ ಗಡಿಯಲ್ಲಿ ಗಾಝಾ ಯುದ್ಧ ನಡೆಯುತ್ತಿರುವ ಮಧ್ಯೆ ಹಿಜ್ಬುಲ್ಲಾ ಮತ್ತು ಇಸ್ರೇಲ್‌ ಮಿಲಿಟರಿಯು ಈ ದಾಳಿ ನಡೆಸಿರುವುದು ಪ್ರಾದೇಶಿಕ ಸಂಘರ್ಷದ ಭೀತಿ ಹೆಚ್ಚಿಸಿದೆ.

ಇದನ್ನು ಓದಿದ್ದೀರಾ? ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

ಆರು ತಿಂಗಳಲ್ಲಿ ಇಸ್ರೇಲ್‌ ದಾಳಿಗೆ ಸುಮಾರು 270 ಹೆಜ್ಬೊಲ್ಲಾ ಹೋರಾಟಗಾರರು ಬಲಿಯಾಗಿದ್ದಾರೆ. ಮಕ್ಕಳು, ವೈದ್ಯರು ಮತ್ತು ಪತ್ರಕರ್ತರು ಸೇರಿದಂತೆ ಸುಮಾರು 50 ನಾಗರಿಕರನ್ನು ಕೊಲೆ ಮಾಡಲಾಗಿದೆ.

ಇನ್ನು  ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಗೆ 12 ಮಂದಿ ಇಸ್ರೇಲ್‌ ಸೈನಿಕರು ಮತ್ತು 6 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಇಷ್ಟು ಮಾತ್ರವಲ್ಲದೆ ಈ ದಾಳಿಗಳಿಂದಾಗಿ ಗಡಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರ ಮಾಡುವಂತಾಗಿದೆ. ಹಾಗೆಯೇ ದಕ್ಷಿಣ ಲೆಬನಾನ್‌ನಲ್ಲಿ ಕೃಷಿ ಆರ್ಥಿಕತೆಯ ಮೇಲೆ ಹೆಚ್ಚಿನ ಪ್ರಭಾವ ಉಂಟಾಗಿದೆ.

ಈ ನಡುವೆ ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಇನ್ನು 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡ ಮಾಡುತ್ತಿರುವ ಇಸ್ರೇಲ್‌ 33,000ಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಿದೆ. ಈಗ ಇರಾನ್‌, ಲೆಬನಾನ್‌ ಮೇಲೆ ದಾಳಿಯನ್ನು ನಡೆಸುತ್ತಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ರಷ್ಯಾ ಮೇಲಿನ ನಿರ್ಬಂಧ ಮಸೂದೆಗೆ ಟ್ರಂಪ್ ಸಹಿ: ಭಾರತಕ್ಕೆ ಶೇ. 100ರಷ್ಟು ಸುಂಕದ ಭೀತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ...

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...