ಟೆಹ್ರಾನ್‌ನಲ್ಲಿರುವ ಮೂರು ಲಕ್ಷ ಜನ ಸ್ಥಳಾಂತರಗೊಳ್ಳಿ: ದಾಳಿ ಎಚ್ಚರಿಕೆ ನೀಡಿದ ಇಸ್ರೇಲ್

Date:

ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ದಾಳಿ ಪ್ರತಿದಾಳಿ ಮುಂದುವರೆಯುತ್ತಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಇಸ್ರೇಲ್‌ ವಾಯು ಕಾರ್ಯಾಚರಣೆ ವಿಸ್ತರಿಸುತ್ತಿದ್ದು, ಮಧ್ಯಭಾಗದಲ್ಲಿರುವ ಮೂರು ಲಕ್ಷ ಜನ ಸ್ಥಳಾಂತರಗೊಳ್ಳಿ ಎಂಬ ಎಚ್ಚರಿಕೆಯನ್ನು ಇಸ್ರೇಲ್ ನೀಡಿದೆ.

- Advertisement -

ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಟೆಹ್ರಾನ್ ಅನ್ನು ತಕ್ಷಣ ಸ್ಥಳಾಂತರಿಸುವಂತೆ ಕರೆ ನೀಡಿದ್ದಾರೆ. ಇಸ್ರೇಲ್ ಕೂಡಾ ಸ್ಥಳಾಂತರದ ಎಚ್ಚರಿಕೆ ನೀಡಿರುವುದು, ಇಸ್ರೇಲ್ ಟೆಹ್ರಾನ್ ಮೇಲೆ ಅತಿ ದೊಡ್ಡ ದಾಳಿ ನಡೆಸುವ ಸುಳಿವು ನೀಡಿದಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗಾಜಾ ಮೇಲೆ ಇಸ್ರೇಲ್ ದಾಳಿ; ಮಕ್ಕಳು ಸೇರಿ 90 ಮಂದಿ ಸಾವು

ಶುಕ್ರವಾರದಿಂದ ನಡೆಯುತ್ತಿರುವ ಈ ದಾಳಿಗಳಲ್ಲಿ ಈವರೆಗೆ 224ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಒಂದೆಡೆ ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುತ್ತಿದೆ, ಅದನ್ನು ತಡೆಯುವ ಅಗತ್ಯವಿದೆ ಎಂದು ಇಸ್ರೇಲ್ ಹೇಳುತ್ತಿದೆ. ಇನ್ನೊಂದೆಡೆ ಇರಾನ್ 2003ರಿಂದ ಟೆಹ್ರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಬಳಸಲು ಯಾವುದೇ ಸಂಘಟಿತ ಪ್ರಯತ್ನವನ್ನು ಮಾಡಿಲ್ಲ ಎಂದು ಹೇಳಿದೆ.

ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್ ಈಗಾಗಲೇ 370ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ನೂರಾರು ಡ್ರೋನ್‌ಗಳನ್ನು ಉಡಾಯಿಸಿದೆ. ಇಲ್ಲಿಯವರೆಗೆ, ಇಸ್ರೇಲ್‌ನಲ್ಲಿ 24 ಜನರು ಸಾವನ್ನಪ್ಪಿದ್ದಾರೆ ಮತ್ತು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉಭಯ ದೇಶಗಳಲ್ಲಿ ಸಂಘರ್ಷ ಯುದ್ಧವಾಗಿ ಮಾರ್ಪಾಡಾಗುವ ಕಳವಳ ಹೆಚ್ಚಾಗಿದೆ.

ಇಸ್ರೇಲ್ ಟೆಹ್ರಾನ್‌ನ ಮಧ್ಯಭಾಗದಲ್ಲಿರುವ 330,000 ಜನರಿಗೆ ಸ್ಥಳಾಂತರಗೊಳ್ಳುವಂತೆ ಎಚ್ಚರಿಕೆ ನೀಡಿದೆ. ಈ ಪ್ರದೇಶದಲ್ಲೇ ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಒಡೆತನದ ಒಂದು ಆಸ್ಪತ್ರೆ ಸೇರಿದಂತೆ ಮೂರು ದೊಡ್ಡ ಆಸ್ಪತ್ರೆಗಳಿವೆ. ಅತಿದೊಡ್ಡ ನಗರಗಳಲ್ಲಿ ಒಂದಾದ ಟೆಹ್ರಾನ್‌ನಲ್ಲಿ 9.5 ಮಿಲಿಯನ್ ಜನರು ನೆಲೆಸಿದ್ದಾರೆ. ಇನ್ನು ಈ ಹಿಂದೆಯೂ ಇಸ್ರೇಲ್ ತಾನು ದಾಳಿ ನಡೆಸುವುದಕ್ಕೂ ಮುನ್ನ ಗಾಜಾ ಮತ್ತು ಲೆಬನಾನ್‌ನ ಕೆಲವು ಭಾಗಗಳಲ್ಲಿ ನಾಗರಿಕರು ಸ್ಥಳಾಂತಗೊಳ್ಳುವಂತೆ ಎಚ್ಚರಿಕೆ ನೀಡಿತ್ತು. ಆದರೆ ದಾಳಿ ನಡೆಸಿ ಹಲವು ನಾಗರಿಕರ ಬಲಿ ಪಡೆದುಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...