ಲೆಬನಾನ್‌ನಲ್ಲಿ ವಶಪಡಿಸಿಕೊಂಡ ಪ್ರದೇಶಗಳಿಂದ ಹಿಂದೆ ಸರಿಯುವುದಿಲ್ಲ: ಇಸ್ರೇಲ್

Date:

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಚೌಕಟ್ಟು ಸಿದ್ಧವಾಗುತ್ತಿರುವಂತೆಯೇ, “ಲೆಬನಾನ್‌ನಲ್ಲಿ ತಾವು ವಶಪಡಿಸಿಕೊಂಡಿರುವ ಯಾವುದೇ ಭೂಪ್ರದೇಶಗಳಿಂದ ಇಸ್ರೇಲ್ ಸೇನೆ ಹಿಂದೆ ಸರಿಯುವುದಿಲ್ಲ” ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ.

- Advertisement -

ಅಮೆರಿಕ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಒಪ್ಪಂದ ಏರ್ಪಡುವ ಮೂಲಕ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಸರಿಯುವ ಆಶಾದಾಯಕ ಬೆಳವಣಿಗೆಗಳ ನಡುವೆಯೂ, ಇಸ್ರೇಲ್ ತನ್ನ ಕಠಿಣ ನಿಲುವನ್ನು ಮುಂದುವರಿಸಿದೆ. ಶಾಂತಿ ಒಪ್ಪಂದದ ಮಾತುಕತೆಗಳು ನಡೆಯುತ್ತಿದ್ದರೂ, ಲೆಬನಾನ್‌ನಲ್ಲಿ ತನ್ನ ಸೇನೆಯು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪ್ರದೇಶಗಳನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಭಾನುವಾರ ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಈ ಶಾಂತಿ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತವಾಗಿ ಸಹಿ ಹಾಕಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಈ ಒಪ್ಪಂದವು ತಕ್ಷಣದ ಹಾಗೂ ಶಾಶ್ವತ ಕದನ ವಿರಾಮಕ್ಕೆ ದಾರಿಮಾಡಿಕೊಡಲಿದೆ. ಅಲ್ಲದೆ, ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಬಿದ್ದಿದ್ದ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಮುಚ್ಚಲ್ಪಟ್ಟಿದ್ದ ‘ಹಾರ್ಮುಜ್ ಜಲಸಂಧಿ’ಯನ್ನು ಶುಕ್ರವಾರದ ಹೊತ್ತಿಗೆ ಮರುಮುಕ್ತಗೊಳಿಸಲು ನಿರ್ಧರಿಸಲಾಗಿದೆ. ಜಪಾನ್ ಹಾಗೂ ಐರೋಪ್ಯ ಒಕ್ಕೂಟ ಸೇರಿದಂತೆ ಜಾಗತಿಕ ಸಮುದಾಯ ಈ ಒಪ್ಪಂದವನ್ನು ಸ್ವಾಗತಿಸಿವೆ.

ಒಂದೆಡೆ ಶಾಂತಿ ಒಪ್ಪಂದದ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿದ್ದರೆ, ಮತ್ತೊಂದೆಡೆ ಇಸ್ರೇಲ್ ರಕ್ಷಣಾ ಸಚಿವರ ಈ ಹೇಳಿಕೆ ಹೊರಬಿದ್ದಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿನ ಶಾಂತಿ ಸ್ಥಾಪನೆಯ ಯತ್ನಗಳಿಗೆ ಇಸ್ರೇಲ್‌ನ ಈ ನಡೆಯು ಭವಿಷ್ಯದಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಯಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...