ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು

Date:

ಗಾಜಾದ ಅಲ್‌-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. 60 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಡಬ್ಲ್ಯೂಎಎಫ್‌ಎ ಸುದ್ದಿ ಸಂಸ್ಥೆ ವರದಿ ಮಾಡಿದೆ.

- Advertisement -

ಇಸ್ರೇಲ್ ಮಿಲಿಟರಿಯು ಜನನಿಬಿಡ ಪ್ರದೇಶವೆಂದು ಗೊತ್ತುಪಡಿಸಿದ ಖಾನ್ ಯೂನಿಸ್‌ನ ಪಶ್ಚಿಮಕ್ಕೆ ಇರುವ ಮಾವಾಸಿ ಮೇಲೆ ದಾಳಿ ಮಾಡಲಾಗಿದೆ. ಈ ಪ್ರದೇಶವು ಇಸ್ರೇಲ್-ಹಮಾಸ್ ಯುದ್ಧದಿಂದ ಸ್ಥಳಾಂತರಗೊಂಡ ಅನೇಕ ಪ್ಯಾಲೆಸ್ತೇನಿಯರಿಗೆ ನೆಲೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ದಾಳಿ ನಡೆಸಲಾಗಿದೆ” ಎಂದು ಇಸ್ರೇಲ್ ಮಿಲಿಟರಿಯೂ ಹೇಳಿದ್ದು ಯಾವುದೇ ಹೆಚ್ಚುವರಿ ಪುರಾವೆಗಳನ್ನು ನೀಡಿಲ್ಲ.

ಇದನ್ನು ಓದಿದ್ದೀರಾ? ಪೋಲಿಯೊ ಲಸಿಕೆ ಅಭಿಯಾನದ ನಡುವೆ ಗಾಜಾದ ಮೇಲೆ ಇಸ್ರೇಲ್ ದಾಳಿ; 35 ಮಂದಿ ಸಾವು

ಹಮಾಸ್ ಮತ್ತು ಇತರ ಉಗ್ರಗಾಮಿಗಳು ನಾಗರಿಕರು ಇರುವ ಜಾಗದಲ್ಲಿ ಅಡಗಿಕೊಂಡಿದ್ದಾರೆ ಎಂದು ಇಸ್ರೇಲ್ ದೀರ್ಘಕಾಲದಿಂದ ಆರೋಪಿಸುತ್ತಾ ಬಂದಿದೆ. ಆದರೆ ಹಮಾಸ್ ಮಾತ್ರ ಇದನ್ನು ನಿರಾಕರಿಸಿದೆ.

“ನಿಖರ ಯುದ್ಧಸಾಮಗ್ರಿಗಳು, ವೈಮಾನಿಕ ಕಣ್ಗಾವಲು ಮತ್ತು ಹೆಚ್ಚುವರಿ ವಿಧಾನಗಳನ್ನು ಬಳಸಲಾಗಿದೆ” ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಈ ದಾಳಿಯಿಂದ ನಾಗರಿಕರೂ ಸಾವನ್ನಪ್ಪಿದ್ದಾರಾ ಎಂದು ಇಸ್ರೇಲ್ ತಿಳಿಸಿಲ್ಲ.

ಯುದ್ಧ ಪ್ರಾರಂಭವಾದಾಗಿನಿಂದ ಗಾಜಾದಲ್ಲಿ 40,000 ಪ್ಯಾಲೇಸ್ತೆನಿಯರು ಹತರಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ. ಗಾಜಾದ 2.3 ಮಿಲಿಯನ್ ಜನಸಂಖ್ಯೆಯ ಸುಮಾರು ಶೇಕಡ 90ರಷ್ಟು ಜನರನ್ನು ಆಗಾಗೆ ಸ್ಥಳಾಂತರ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...