ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

Date:

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ ಬಿಲಿಯನ್‌ ಡಾಲರ್‌ಗಟ್ಟಲೆ ಹೆಚ್ಚುವರಿ ಮಿಲಿಟರಿ ನೆರವು ನೀಡುವ ಅನುಮೋದನೆ ಅಂತಿಮ ಹಂತದಲ್ಲಿದೆ.

- Advertisement -

20 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿರುವ ಗಾಜಾ ಪಟ್ಟಣದಲ್ಲಿ ಅರ್ಧದಷ್ಟು ಮಂದಿ ನಿರಾಶ್ರಿತರು ಬೇರೆಡೆ ವಲಸೆಗೆ ಹೋರಾಟ ನಡುಸುತ್ತಿರುವ ನಡುವೆ ಇಸ್ರೇಲ್ ನಿತ್ಯ ರಾಫಾ ಪ್ರದೇಶದಲ್ಲಿ ವಾಯು ದಾಳಿ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ನಿರಾಶ್ರಿತ ಪ್ರದೇಶದಲ್ಲಿ ದಾಳಿಯನ್ನು ಸ್ಥಗಿತಗೊಳಿಸಿ ಸಂಯಮ ತೆಗೆದುಕೊಳ್ಳುವಂತೆ ಅಮೆರಿಕ ಸೇರಿದಂತೆ ವಿಶ್ವದ ಹಲವು ದೇಶಗಳು ಮನವಿ ಮಾಡುತ್ತಿದ್ದರೂ ಇಸ್ರೇಲ್‌ ದಾಳಿಯನ್ನು ಮುಂದುವರೆಸಿದೆ.

ಗಾಜಾದಲ್ಲಿ ಮಾನವೀಯ ನೆರವಿಗಾಗಿ 9 ಬಿಲಿಯನ್ ಡಾಲರ್‌ ಒಳಗೊಂಡು 26 ಬಿಲಿಯನ್‌ ಡಾಲರ್‌ ನೆರವಿನ ಪ್ಯಾಕೇಜ್‌ ನೀಡಲು ಅಮೆರಿಕದ ಹೌಸ್‌ ಆಫ್ ರೆಪ್ರಸೆಂಟಿವ್ಸ್‌ ಅನುಮೋದಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಇಸ್ರೇಲ್‌ ನಿನ್ನೆ ರಾತ್ರಿ ನಡೆಸಿದ ಮೊದಲ ದಾಳಿಯಲ್ಲಿ ದಂಪತಿ ಹಾಗೂ 3 ವರ್ಷದ ಮಗು ಮೃತಪಟ್ಟಿದ್ದರು ಎಂದು ಕುವೈತಿ ಆಸ್ಪತ್ರೆ ವರದಿ ನೀಡಿದೆ.

ಎರಡನೇ ದಾಳಿಯಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಹಾಗೂ ಎಂಟು ಮಕ್ಕಳು ಸಾವಿಗೀಡಾಗಿದ್ದಾರೆ.

ಸ್ಥಳೀಯ ಆರೋಗ್ಯ ಅಧಿಕಾರಿಗಳ ವರದಿಯ ಪ್ರಕಾರ ಗಾಜಾದ ಎರಡು ಪಟ್ಟಣಗಳ ಗಡಿಯಲ್ಲಿ ಇಲ್ಲಿಯವರೆಗೂ ನಡೆದ ಇಸ್ರೇಲ್ ಹಾಗೂ ಹಮಾಸ್ ಹೋರಾಟಗಾರರ ದಾಳಿಯಲ್ಲಿ 34 ಸಾವಿರ ಪ್ಯಾಲಿಸ್ತೀನಿಯರು ಮೃತಪಟ್ಟು, 75 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಸಂಘರ್ಷಣೆಯು 7ನೇ ತಿಂಗಳಿಗೆ ಕಾಲಿಟ್ಟಿದ್ದು, ದಾಳಿಯಿಂದ ಶೇ 80 ರಷ್ಟು ಜನರು ತಮ್ಮ ಮನೆಯನ್ನು ಕಳೆದುಕೊಂಡು ನಿರಾಶ್ರಿತರ ಶಿಬಿರದಲ್ಲಿ ವಾಸಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...