ಗಾಜಾ ಮಕ್ಕಳ ಮೇಲಿನ ಇಸ್ರೇಲ್ ದಾಳಿ ‘ನರಮೇಧ’ಕ್ಕೆ ಸಮ: ವಿಶ್ವಸಂಸ್ಥೆ ವರದಿ

Date:

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಇಸ್ರೇಲ್ ಪಡೆಗಳು ನಡೆಸುತ್ತಿರುವ ದಾಳಿಗಳು ‘ನರಮೇಧ’ಕ್ಕೆ (Genocide) ಸಮಾನವಾಗಿವೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ತನಿಖಾ ಆಯೋಗವು ತನ್ನ ಇತ್ತೀಚಿನ ವರದಿಯಲ್ಲಿ ಗಂಭೀರ ಆರೋಪ ಮಾಡಿದೆ. ಇಸ್ರೇಲ್‌ನ ನಿರಂತರ ಸೇನಾ ಕಾರ್ಯಾಚರಣೆಯು ಗಾಜಾದಾದ್ಯಂತ ಇರುವ ಪ್ಯಾಲೆಸ್ತೀನ್ ಮಕ್ಕಳಿಗೆ ಅಭೂತಪೂರ್ವ ಸಾವು, ಗಾಯ ಮತ್ತು ತೀವ್ರ ಮಾನಸಿಕ ಆಘಾತವನ್ನು ಉಂಟುಮಾಡಿದೆ ಎಂದು ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

- Advertisement -

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳನ್ನು ಉಲ್ಲೇಖಿಸಿರುವ ಈ ವರದಿಯು, ಕಳೆದ ಎಂಟು ತಿಂಗಳುಗಳಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 1,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಗಮನಾರ್ಹವಾಗಿ, ಇಸ್ರೇಲ್ ಪಡೆಗಳ ದಾಳಿಗೆ ಬಲಿಯಾದವರಲ್ಲಿ ಶೇಕಡಾ 30ರಷ್ಟು ಕೇವಲ ಮಕ್ಕಳೇ ಆಗಿದ್ದಾರೆ. ಮಕ್ಕಳನ್ನು ಈ ರೀತಿ ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿರುವುದು, ಪ್ಯಾಲೆಸ್ತೀನ್ ಜನರ ಮೇಲಿನ ಇಸ್ರೇಲ್‌ನ ನರಮೇಧದ ಉದ್ದೇಶವನ್ನು ಸ್ಪಷ್ಟವಾಗಿ ತೋರಿಸುವ ಪ್ರಮುಖ ಸೂಚಕವಾಗಿದೆ ಎಂದು ಆಯೋಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಅಕ್ಟೋಬರ್ 2025ರಲ್ಲಿ ಘೋಷಣೆಯಾದ ‘ಕದನ ವಿರಾಮ’ದ ಬಳಿಕವೂ ಈ ಹಿಂಸಾಚಾರ ಮುಂದುವರಿದಿದೆ. “ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ಹಾಗೂ ಕದನ ವಿರಾಮದ ನಿಯಮಗಳನ್ನು ಇಸ್ರೇಲ್ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಪರಿಣಾಮವಾಗಿ ಇಂದಿಗೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ” ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳೀಧರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗಾಜಾ ಶಾಂತಿ ಮಂಡಳಿ ಸೇರಲ್ಲ ಎಂದ ಫ್ರಾನ್ಸ್: ವೈನ್ ಮೇಲೆ ಶೇ.200 ತೆರಿಗೆ ಹಾಕುವುದಾಗಿ ಟ್ರಂಪ್ ಬೆದರಿಕೆ

ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ದಾಳಿಗಳು ಹಾಗೂ ಮಾನವೀಯ ನೆರವಿನ ಮೇಲಿನ ನಿರ್ಬಂಧಗಳು, ಮಕ್ಕಳ ಉಳಿವಿನ ಮೇಲೆ ಬಹುಮುಖಿ ದುಷ್ಪರಿಣಾಮ ಬೀರುತ್ತಿವೆ. ಯುದ್ಧಾಪರಾಧಗಳ ಆರೋಪದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಈಗಾಗಲೇ ಬಂಧನ ವಾರಂಟ್ ಹೊರಡಿಸಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವಸಂಸ್ಥೆ ಆಯೋಗದ ಈ ವರದಿಯ ಆರೋಪಗಳನ್ನು ಇಸ್ರೇಲ್ ಸರ್ಕಾರ ಸಾರಾಸಗಟಾಗಿ ತಳ್ಳಿಹಾಕಿದ್ದು, ತಕ್ಷಣವೇ ಖಂಡಿಸಿದೆ. ಇಸ್ರೇಲ್‌ನ ವಿದೇಶಾಂಗ ಸಚಿವಾಲಯವು ಇದೊಂದು “ಹಿಂದಿನ ವರದಿಗಳಂತೆಯೇ ಇರುವ ಕೇವಲ ಅಪಪ್ರಚಾರದ ತುಣುಕು” ಎಂದು ಕಿಡಿಕಾರಿದರೆ, ವಿಶ್ವಸಂಸ್ಥೆಯ ಇಸ್ರೇಲ್ ರಾಯಭಾರಿ ಡ್ಯಾನಿ ಡಾನನ್ ಅವರು ಇದನ್ನು ‘ವಿಶ್ವಸಂಸ್ಥೆಯ ದಾಖಲೆಯ ಸೋಗಿನಲ್ಲಿರುವ ರಾಜಕೀಯ ಪ್ರೇರಿತ ಅಪಪ್ರಚಾರ’ ಎಂದು ಟೀಕಿಸಿದ್ದಾರೆ.

ಮತ್ತೊಂದೆಡೆ, ಕದನ ವಿರಾಮದ ಒಪ್ಪಂದವನ್ನು ಹಮಾಸ್ ಉಲ್ಲಂಘಿಸಿದೆ ಹಾಗೂ ಶಸ್ತ್ರಾಸ್ತ್ರ ತ್ಯಜಿಸಲು ನಿರಾಕರಿಸಿದೆ ಎಂದು ಇಸ್ರೇಲ್ ಆರೋಪಿಸಿದೆ. ಈ ನಡುವೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು, ಗಾಜಾದ ಶೇ. 70ರಷ್ಟು ಪ್ರದೇಶ ಈಗ ಇಸ್ರೇಲ್ ಸೇನೆಯ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದ್ದಾರೆ. ಬಹಳಷ್ಟು ಗಾಜಾ ನಿವಾಸಿಗಳು ಈಗಲೂ ಟೆಂಟ್‌ಗಳಲ್ಲಿ ಆಶ್ರಯ ಪಡೆದಿದ್ದು, ಹಮಾಸ್ ಶಸ್ತ್ರ ತ್ಯಜಿಸಿಲ್ಲ ಎಂಬ ಕಾರಣ ನೀಡಿ ಇಸ್ರೇಲ್ ಗಾಜಾಗೆ ಪುನರ್ನಿರ್ಮಾಣ ಸಾಮಗ್ರಿಗಳ ಪ್ರವೇಶವನ್ನು ನಿರ್ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...