ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಲೆಬನಾನ್ ಮುಖ್ಯಸ್ಥ ತಬ್ತಬಾಯಿ ಹತ್ಯೆ

Date:

ಕದನ ವಿರಾಮ ಘೋಷಿಸಿ ಹಲವು ತಿಂಗಳುಗಳಾದ ನಂತರ ಮೊದಲ ಬಾರಿಗೆ ಇಸ್ರೇಲ್ ಲೆಬನಾನ್ ರಾಜಧಾನಿ ಬೈರುತ್ ನಲ್ಲಿರುವ ಹೆಜ್ಬುಲ್ಲಾ ಸಂಘಟನೆಯ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿದೆ.

- Advertisement -

ಸೋಮವಾರ ನಡೆಸಿದ ದಾಳಿಯಲ್ಲಿ ಇಸ್ರೇಲ್ ಸೇನೆಯು ಹೆಜ್ಬುಲ್ಲಾ ಸಂಘಟನೆಯ ಮುಖ್ಯಸ್ಥ ಹೈತಮ್ ಅಲಿ ಅಲ್-ತಬ್ತಬಾಯಿ ಅವರನ್ನು ಕೊಂದಿದೆ. ಈ ವೈಮಾನಿಕ ದಾಳಿಯಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಕ್ಷಿಣ ಲೆಬನಾನ್ ನಲ್ಲಿರುವ ಪ್ಯಾಲೆಸ್ತೀನ್ ಸಂತ್ರಸ್ತರ ಶಿಬಿರದ ಮೆಲೆ ಇಸ್ರೇಲ್ ಕಳೆದ ಮಂಗಳವಾರ ವೈಮಾನಿಕ ದಾಳಿ ನಡೆಸಿತ್ತು. ವರ್ಷದ ಹಿಂದೆಯೇ ಅಮೆರಿಕ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ – ಹಿಜ್ಬುಲ್ಲಾ ಯುದ್ಧದಲ್ಲಿ ಕದನ ವಿರಾಮ ಘೋಷಣೆಯಾದ ಬಳಿಕ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಹಿಜ್ಬೊಲ್ಲಾ ತಬ್ತಬಾಯಿಯ ಸಾವನ್ನು ದೃಢಪಡಿಸಿದ್ದು, ಗಡಿಯಲ್ಲಿರುವ ಕೆಂಪು ರೇಖೆಯನ್ನು ದಾಟಿದೆ ಎಂದು ಆರೋಗ್ಯ ಸಚಿವಾಲಯ ಆರೋಪ ಮಾಡಿದೆ.

ದಾಳಿಯ ನಂತರ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು, “ಹೆಜ್ಬೊಲ್ಲಾ ತನ್ನ ಶಕ್ತಿಯನ್ನು ಪುನಃ ಸ್ಥಾಪಿಸಲು ಬಿಡುವುದಿಲ್ಲ ಮತ್ತು ಇಸ್ರೇಲ್ ಗೆ ಯಾವುದೇ ಬೆದರಿಕೆ ಹಾಕಲು ಬಂದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದ್ದಾರೆ.

ಈಗಾಗಲೇ ಇಸ್ರೇಲ್ ನಡೆಸಿದ ದಾಳಿಯಿಂದ ಪ್ಯಾಲೆಸ್ತೀನ್ ಮತ್ತು ಗಾಝಾದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದು, ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ. ಇದು ವಿಶ್ವದ ಅತ್ಯಂತ ಭೀಕರ ಮಾನವೀಯತೆಯ ವಿರುದ್ಧದ ಸಂಘರ್ಷವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...