‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಗಾಜಾ ಹಂತಕನ ಜೊತೆ ಟ್ರಂಪ್ ಹಳೆಯ ರಾಗ

Date:

ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಇಬ್ಬರು ವಿವಾದಾತ್ಮಕ ನಾಯಕರ ಈ ಸಮಾಗಮದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ಹಳೆಯ ರಾಗ ಹಾಡಿದ್ದಾರೆ.

- Advertisement -

“ನಾನಿಲ್ಲದಿದ್ದರೆ ಜಗತ್ತು ಸರ್ವನಾಶವಾಗುತ್ತಿತ್ತು,” ಎಂದು ಬಡಾಯಿ ಕೊಚ್ಚಿಕೊಂಡಿರುವ ಟ್ರಂಪ್, “ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಭೀಕರ ಅಣುಯುದ್ಧ ತಪ್ಪಿತು. ಇಲ್ಲದಿದ್ದರೆ ಲಕ್ಷಾಂತರ ಜನ ಸಾಯುತ್ತಿದ್ದರು,” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಭೇಟಿಯು ಕೇವಲ ಟ್ರಂಪ್ ಅವರ ಬಡಾಯಿಗೆ ಸೀಮಿತವಾಗಿರಲಿಲ್ಲ. ಗಾಜಾದಲ್ಲಿ ಸಾವಿರಾರು ಅಮಾಯಕ ಮಕ್ಕಳ ಸಾವಿಗೆ ಕಾರಣರಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಯುದ್ಧಾಪರಾಧಿ’ ಎಂಬ ಹಣೆಪಟ್ಟಿ ಹೊತ್ತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ರಂಪ್ ಕೆಂಪು ಹಾಸಿನ ಸ್ವಾಗತ ಕೋರಿದ್ದು ಪ್ರಜಾಪ್ರಭುತ್ವವಾದಿಗಳಿಗೆ ಆಘಾತ ತಂದಿದೆ. ಜಗತ್ತೇ ಛೀಮಾರಿ ಹಾಕುತ್ತಿರುವ ನಾಯಕನನ್ನು ಟ್ರಂಪ್ ಅಪ್ಪಿಕೊಂಡು, “ಇಸ್ರೇಲ್ ಉಳಿದಿದ್ದೇ ಇವರಿಂದ” ಎಂದು ಹೊಗಳಿದ್ದು ವಿಪರ್ಯಾಸವೇ ಸರಿ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

ಗಾಜಾದಲ್ಲಿ ರಕ್ತದೋಕುಳಿ ಹರಿಸುತ್ತಿರುವ ನೆತನ್ಯಾಹು, ತಮ್ಮ ಅಧಿಕಾರ ಉಳಿಸಿಕೊಳ್ಳಲು ಟ್ರಂಪ್ ಅವರಂತಹ ‘ಅಹಂಕಾರದ ಮೂರ್ತಿ’ಯ ಮೊರೆ ಹೋಗಿದ್ದಾರೆ. ಇತ್ತ ಟ್ರಂಪ್, ಇರಾನ್ ಮೇಲೆ ಯುದ್ಧದ ಭೀತಿ ಹುಟ್ಟುಹಾಕುವ ಮೂಲಕ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡಲು ಪ್ರಚೋದಿಸುತ್ತಿದ್ದಾರೆ. ಶಾಂತಿಯ ಬಗ್ಗೆ ಮಾತನಾಡಬೇಕಾದ ನಾಯಕರು, ಕೇವಲ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಅಧಿಕಾರದ ದಾಹಕ್ಕಾಗಿ ಜಾಗತಿಕ ಭದ್ರತೆಯನ್ನೇ ಪಣಕ್ಕಿಡುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ.

“ಭಾರತ-ಪಾಕ್ ಯುದ್ಧ ನಿಲ್ಲಿಸಿದೆ” ಎಂಬ ಟ್ರಂಪ್ ಅವರ ಬಾಲಿಶ ಹೇಳಿಕೆ ಮತ್ತು ನೆತನ್ಯಾಹು ಅವರೊಂದಿಗಿನ ಈ ಸ್ನೇಹ, ಜಗತ್ತನ್ನು ಶಾಂತಿಯ ಕಡೆಗಲ್ಲ, ಬದಲಿಗೆ ಮತ್ತಷ್ಟು ಅರಾಜಕತೆಯತ್ತ ತಳ್ಳುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...