ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

Date:

Advertisements

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ ಘೋಷಿಸಿದ್ದಾರೆ.

ಡೆಲವೇರ್‌ನಲ್ಲಿರುವ ತಮ್ಮ ಬೀಚ್ ಹೌಸ್‌ನಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ 81 ವರ್ಷದ ಡೆಮಾಕ್ರಟಿಕ್ ಪಕ್ಷದ ಬೈಡನ್, “ಅಧ್ಯಕ್ಷರಾಗಿ ನಿಮಗೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಗೌರವವಾಗಿದೆ” ಎಂದು ತಿಳಿಸಿದ್ದಾರೆ.

“ಮರು ಚುನಾವಣೆಯನ್ನು ಬಯಸುವುದು ನನ್ನ ಉದ್ದೇಶವಾಗಿದ್ದರೂ, ನನ್ನ ಪಕ್ಷ ಮತ್ತು ದೇಶದ ಹಿತದೃಷ್ಟಿಯಿಂದ ನನ್ನ ಉಳಿದ ಅವಧಿಗೆ ಅಧ್ಯಕ್ಷನಾಗಿ ನನ್ನ ಕರ್ತವ್ಯಗಳನ್ನು ಪೂರೈಸುವುದರ ಮೇಲೆ ಗಮನ ಹರಿಸುವುದು ಉತ್ತಮವಾಗಿದೆ ಎಂದು ಭಾವಿಸುತ್ತೇನೆ. ಒಂದು ವಾರದ ನಂತರ ನನ್ನ ನಿರ್ಧಾರದ ಬಗ್ಗೆ ರಾಷ್ಟ್ರದೊಂದಿಗೆ ಹೆಚ್ಚು ವಿವರವಾಗಿ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

Advertisements

ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯ ಮುಂಚೂಣಿಯಲ್ಲಿದ್ದಾರೆ. ಬೈಡನ್ ಆರೋಗ್ಯ ಕುರಿತು ವ್ಯಾಪಕವಾಗಿ ಚರ್ಚೆ ನಡೆಯುತಿತ್ತು. ಬೈಡನ್ ಚುನಾವಣೆ ಕಣದಿಂದ ಹಿಂದೆ ಸರಿಯುವಂತೆಯೂ ಒತ್ತಡ ಕೇಳಿಬರುತಿತ್ತು. ಈ ನಡುವೆ ಬೈಡನ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬೈಡನ್ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇತಿಹಾಸದಲ್ಲಿ ರೇಸ್‌ನಿಂದ ತಡವಾಗಿ ಹೊರಬಂದ ಮೊದಲ ಅಧ್ಯಕ್ಷರಾಗಿದ್ದಾರೆ. ಅಲ್ಲದೇ ಆರೋಗ್ಯ ಮತ್ತು ಮಾನಸಿಕ ತೀಕ್ಷ್ಣತೆ ಕಳವಳದಿಂದ ತಲೆಬಾಗಿದ ಮೊದಲಿಗ ಅಧ್ಯಕ್ಷರೂ ಆಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮೆರಿಕ | ಚುನಾವಣೆಯಿಂದ ಹಿಂದೆ ಸರಿಯಿರಿ; ಜೋ ಬೈಡನ್‌ಗೆ ಒಬಾಮಾ ಸೇರಿ ಪ್ರಮುಖ ನಾಯಕರ ಒತ್ತಾಯ

ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಜೂನ್ 27 ರಿಂದ ಚರ್ಚೆ ಆರಂಭವಾಗಿತ್ತು. ಆದರೆ, ಮೂರು ವಾರಗಳ ನಂತರ ತಡವಾಗಿ ಬೈಡನ್ ತಮ್ಮ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಅವರ ಪಕ್ಷದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಮಾಜಿ ಅಧ್ಯಕ್ಷ ಬರಾಕ್ ಒಮಾಮಾ, ನಟ ಜಾರ್ಜ್ ಕ್ಲೋನಿ ಸೇರಿ ಹಲವರು ಬೈಡನ್ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಹೇಳಿದ್ದರು.

ಅಂತಿಮವಾಗಿ ಕೋವಿಡ್  ಚಿಕಿತ್ಸೆಗೊಳಗಾಗಿ ಪ್ರಚಾರದಿಂದ ದೂರ ಸರಿದದ್ದು ಅವರು ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ.

ಜುಲೈ 13 ರಂದು ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹತ್ಯೆ ವಿಫಲ ಯತ್ನ ನಡೆದಿತ್ತು. ಇದರ ಬೆನ್ನಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿಯುವ ಬೈಡನ್ ನಿರ್ಧಾರ ಅಧ್ಯಕ್ಷೀಯ ಚುನಾವಣೆ ವೇಳೆಯಲ್ಲಿನ ಅಲ್ಲಿನ ರಾಜಕೀಯ ಪ್ರಕ್ಷುಬ್ಧತೆ ಪರಿಸ್ಥಿತಿಯ ಚರ್ಚೆಗೂ ಕಾರಣವಾಗಿದೆ. ಈ ಮೂಲಕ ಬೈಡನ್ ಕೇವಲ ಒಂದೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕ್ಲಬ್ ಸೇರಿದ್ದಾರೆ. ಕೊನೆಯದಾಗಿ 1968ರಲ್ಲಿ ಲಿಂಡನ್ ಜಾನ್ಸನ್ ಒಂದು ಅವಧಿ ಪೂರೈಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X