ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ: ಒಂದೇ ದಿನ 1,200 ಬಾಂಬ್ ಸುರಿಮಳೆ

Date:

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಭಾರಿ ಪ್ರಮಾಣದ ವಾಯು ದಾಳಿ ನಡೆಸಿದ್ದು, ಒಂದೇ ದಿನ ಬರೋಬ್ಬರಿ 1,200 ಬಾಂಬ್‌ಗಳನ್ನು ಸುರಿಸಲಾಗಿದೆ. ಶನಿವಾರ ಮುಂಜಾನೆಯಿಂದಲೇ ಆರಂಭವಾದ ಈ ಕಾರ್ಯಾಚರಣೆಯಲ್ಲಿ, ರಾಜಧಾನಿ ಟೆಹ್ರಾನ್ ಸೇರಿದಂತೆ ಇರಾನ್‌ನ ಪ್ರಮುಖ ನಗರಗಳ ಮೇಲೆ ನೂರಾರು ಯುದ್ಧವಿಮಾನಗಳ ಮೂಲಕ ನಿರಂತರವಾಗಿ ಬಾಂಬ್ ದಾಳಿ ನಡೆಸಲಾಗಿದ್ದು, ಸೇನಾ ಹಾಗೂ ಸರ್ಕಾರಿ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ.

- Advertisement -

​ಈ ಭೀಕರ ಕಾರ್ಯಾಚರಣೆಯ ನಡುವೆ ಅತ್ಯಂತ ಕರುಣಾಜನಕ ಹಾಗೂ ಆತಂಕಕಾರಿ ಘಟನೆಯೊಂದು ವರದಿಯಾಗಿದ್ದು, ಶಾಲೆಯೊಂದರ ಮೇಲೆ ನಡೆದ ಬಾಂಬ್ ದಾಳಿಯಲ್ಲಿ 148 ಮುಗ್ಧ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ದಿಗ್ಭ್ರಮೆ ಮೂಡಿಸಿದ್ದು, ಜಾಗತಿಕ ಮಟ್ಟದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ಈ ವ್ಯಾಪಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಹತರಾಗಿದ್ದಾರೆ. ಅಮೆರಿಕ ಈ ಕಾರ್ಯಾಚರಣೆಯನ್ನು ‘ಆಪರೇಷನ್ ಎಪಿಕ್ ಫ್ಯೂರಿ’ ಎಂದು ಕರೆದರೆ, ಇಸ್ರೇಲ್ ಇದನ್ನು ‘ಆಪರೇಷನ್ ರೋರಿಂಗ್ ಲಯನ್’ ಎಂದು ಹೆಸರಿಸಿದೆ.

ಇದನ್ನು ಓದಿದ್ದೀರಾ? ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಇರಾನ್‌ನ ಪರಮಾಣು ನೆಲೆಗಳು, ಕ್ಷಿಪಣಿ ಉಡಾವಣಾ ವ್ಯವಸ್ಥೆಗಳು, ವಾಯುರಕ್ಷಣಾ ವ್ಯವಸ್ಥೆಗಳು ಹಾಗೂ ‘ರೆವಲ್ಯೂಷನರಿ ಗಾರ್ಡ್ಸ್’ ಕಚೇರಿಗಳನ್ನು ಮತ್ತು ಖಮೇನಿಯವರ ನಿವಾಸವನ್ನು ಮುಖ್ಯ ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗಿದೆ. ಇದು ಇರಾನ್ ಆಡಳಿತ ಬದಲಾವಣೆಯ ನಿಟ್ಟಿನಲ್ಲಿ ಒಂದು ನಿರ್ಣಾಯಕ ಹೆಜ್ಜೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

​ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಇರಾನ್, ತಕ್ಷಣವೇ ಪ್ರತಿಕಾರಕ್ಕೆ ಮುಂದಾಗಿದೆ. ಇಸ್ರೇಲ್‌ನ ಹಲವು ನಗರಗಳು ಮತ್ತು ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ಆರಂಭಿಸಿದೆ. ಕತಾರ್, ಬಹ್ರೇನ್, ಕುವೈತ್, ಮತ್ತು ಯುಎಇ ಗಳಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿ ಪ್ರತಿದಾಳಿ ನಡೆಸಲಾಗುತ್ತಿದ್ದು, ಈ ಬೆಳವಣಿಗೆಯು ಇಡೀ ಮಧ್ಯಪ್ರಾಚ್ಯವನ್ನು ಮತ್ತೊಂದು ಬೃಹತ್ ಯುದ್ಧದ ಅಂಚಿಗೆ ತಳ್ಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...