ಟ್ರಂಪ್‌ ಆಡಳಿತದಲ್ಲಿ ಮತ್ತೊಂದು ಸಂಚಲನ: ಎಫ್‌ಬಿಐ ಮುಖ್ಯಸ್ಥ ಕಾಶ್ ಪಟೇಲ್‌ ವಜಾಗೆ ಚಿಂತನೆ?

Date:

ಅಮೆರಿಕದ ಅಟಾರ್ನಿ ಜನರಲ್ ಪಾಮ್ ಬಾಂಡಿ ಅವರನ್ನು ದಿಢೀರನೆ ವಜಾಗೊಳಿಸಿದ ಬೆನ್ನಲ್ಲೇ, ಇದೀಗ ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ವಜಾಗೊಳಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದಾರೆ. ಟ್ರಂಪ್ ಆಡಳಿತದ ಮುಂದಿನ ವಜಾ ಪಟ್ಟಿಯಲ್ಲಿ ಭಾರತೀಯ ಮೂಲದ ಕಾಶ್ ಪಟೇಲ್ ಹೆಸರೇ ಮುಂಚೂಣಿಯಲ್ಲಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

- Advertisement -

ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳನ್ನು ಹುದ್ದೆಯಿಂದ ಕೆಳಗಿಳಿಸುವ ಬಗ್ಗೆ ಶ್ವೇತಭವನದ ಆಂತರಿಕ ವಲಯದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಇರಾನ್ ಜೊತೆಗಿನ ಯುದ್ಧದ ಹಿನ್ನೆಲೆಯಲ್ಲಿ ಟ್ರಂಪ್ ಆಡಳಿತಕ್ಕೆ ಜನಬೆಂಬಲ ಕುಸಿಯುತ್ತಿದ್ದು, ಈ ಹಿಂದೆ ಹಿರಿಯ ಅಧಿಕಾರಿಗಳನ್ನು ವಜಾಗೊಳಿಸಲು ಹಿಂದೇಟು ಹಾಕುತ್ತಿದ್ದ ಟ್ರಂಪ್, ಇದೀಗ ಕ್ರಿಸ್ಟಿ ನೊಯೆಮ್ ವಜಾದ ಬಳಿಕ ವ್ಯಕ್ತವಾದ ಪ್ರತಿಕ್ರಿಯೆಗಳಿಂದ ಉತ್ತೇಜಿತರಾಗಿ ಇಂತಹ ಕಠಿಣ ನಿರ್ಧಾರಗಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ವಿಚಾರವಾಗಿ ಅತಿ-ಬಲಪಂಥೀಯ ರೇಡಿಯೋ ನಿರೂಪಕ ಅಲೆಕ್ಸ್ ಜೋನ್ಸ್ ಅವರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಎಫ್‌ಬಿಐ ಏಜೆಂಟ್ ಕೈಲ್ ಸೆರಾಫಿನ್, ಕಾಶ್ ಪಟೇಲ್ ಶೀಘ್ರದಲ್ಲೇ ವಜಾಗೊಳ್ಳುವ ಬಲವಾದ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಅಲ್ಲದೆ, ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ, ಬದಲಾಗಿ ಇದು ತಮ್ಮದೇ ನಿರ್ಧಾರ ಎಂದು ಬಿಂಬಿಸಲು ಟ್ರಂಪ್ ಬಯಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಸ್ತುತ ಕಾಶ್ ಪಟೇಲ್ ಅವರು ಕಾನೂನು ಹಾಗೂ ಆಡಳಿತಾತ್ಮಕವಾಗಿ ತೀವ್ರ ಸ್ವರೂಪದ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಟ್ರಂಪ್ ಅವರ 2020ರ ಚುನಾವಣಾ ಸೋಲಿನ ಕುರಿತ ತನಿಖೆಯಲ್ಲಿ ಭಾಗಿಯಾಗಿದ್ದ ಎಂಬ ಕಾರಣಕ್ಕೆ ಮೂವರು ಎಫ್‌ಬಿಐ ಏಜೆಂಟ್‌ಗಳನ್ನು ಅಕ್ರಮವಾಗಿ ವಜಾಗೊಳಿಸಿದ ಆರೋಪ ಪಟೇಲ್ ಮೇಲಿದ್ದು, ವಜಾಗೊಂಡ ಈ ಅಧಿಕಾರಿಗಳು ಮರಳಿ ಹುದ್ದೆ ನೀಡುವಂತೆ ಕೋರಿ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದರ ಜೊತೆಗೆ, ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಭರವಸೆಯೊಂದಿಗೆ ಅಧಿಕಾರ ವಹಿಸಿಕೊಂಡಿದ್ದ ಪಟೇಲ್, ಎಫ್‌ಬಿಐ ಒಳಗೆ ಭಯದ ವಾತಾವರಣ ನಿರ್ಮಿಸಿದ್ದಾರೆ ಎಂಬ ಅಸಮಾಧಾನವೂ ಭುಗಿಲೆದ್ದಿದೆ.

ಇದನ್ನು ಓದಿದ್ದೀರಾ? ಅಧಿಕಾರಕ್ಕಾಗಿ ಹಲವು ಅವತಾರಗಳು: ವೋಟಿಗಾಗಿ ನಾಯಕರು ಹಾಕುವ ‘ಹಗಲುವೇಷ’ಗಳೆಷ್ಟು?

ಹಿರಿಯ ಅಧಿಕಾರಿಗಳ ವರದಿಯೊಂದರ ಪ್ರಕಾರ ಪ್ರಸ್ತುತ ಎಫ್‌ಬಿಐ ಚುಕ್ಕಾಣಿ ಇಲ್ಲದ ಹಡಗಿನಂತಾಗಿದೆ. ಇಷ್ಟೇ ಅಲ್ಲದೆ, ತಮ್ಮ ಗೆಳತಿ ಅಲೆಕ್ಸಿಸ್ ವಿಲ್ಕಿನ್ಸ್ ಅವರ ಕುಸ್ತಿ ಕಾರ್ಯಕ್ರಮಗಳನ್ನು ವೀಕ್ಷಿಸಲು ತೆರಳಲು, ತೆರಿಗೆದಾರರ ಹಣದಿಂದ ನಿರ್ವಹಿಸಲ್ಪಡುವ ಸರ್ಕಾರಿ ವಿಮಾನವನ್ನು ವೈಯಕ್ತಿಕ ಪ್ರವಾಸಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪವೂ ಅವರ ಮೇಲಿದೆ.

ಆದಾಗ್ಯೂ, ಈ ವಜಾ ಪ್ರಕ್ರಿಯೆಯ ಕುರಿತು ಶ್ವೇತಭವನದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಹಾಗೂ ಅಧ್ಯಕ್ಷ ಟ್ರಂಪ್ ಅವರು ಅಂತಿಮ ನಿರ್ಧಾರವನ್ನು ಇನ್ನೂ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ವಾಷಿಂಗ್ಟನ್‌ನ ರಾಜಕೀಯ ವಲಯದಲ್ಲಿ ಟ್ರಂಪ್ ಆಡಳಿತದ ಮುಂದಿನ ಅನಿರೀಕ್ಷಿತ ಬೆಳವಣಿಗೆಗಳ ಬಗ್ಗೆ ತೀವ್ರ ಕುತೂಹಲ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...