ಆಸ್ಟ್ರೇಲಿಯ | ಸಿಡ್ನಿ ಹಿಂದೂ ದೇವಾಲಯ ವಿರೂಪಗೊಳಿಸಿದ ಖಲಿಸ್ತಾನಿ ಉಗ್ರರು

Date:

  • ಖಲಿಸ್ತಾನಿ ಉಗ್ರರಿಂದ ದೇವಾಲಯದ ಮೇಲೆ ಭಾರತ ವಿರೋಧಿ ಬರಹ
  • ಆಸ್ಟ್ರೇಲಿಯದ ರೋಸ್‌ಹಿಲ್ ಪ್ರದೇಶದ ಶ್ರೀ ಸ್ವಾಮಿ ನಾರಾಯಣ ದೇಗುಲ

ಖಲಿಸ್ತಾನಿ ಉಗ್ರರು ಆಸ್ಟ್ರೇಲಿಯದ ಸಿಡ್ನಿಯಲ್ಲಿ ಹಿಂದೂ ದೇವಾಲಯವನ್ನು ಶುಕ್ರವಾರ (ಮೇ 5) ವಿರೂಪಗೊಳಿಸಿದ್ದಾರೆ.

- Advertisement -

ಸಿಡ್ನಿಯ ರೋಸ್‌ಹಿಲ್‌ ಪ್ರದೇಶದಲ್ಲಿರುವ ಶ್ರೀ ಸ್ವಾಮಿ ನಾರಾಯಣ ದೇವಾಲಯದ ದ್ವಾರದ ಮೇಲೆ ಖಲಿಸ್ತಾನಿ ಉಗ್ರರು ತಮ್ಮ ಧ್ವಜ ಕಟ್ಟಿದ್ದಾರೆ. ದೇಗುಲದ ಗೋಡೆ ಮೇಲೆ ಭಾರತ ವಿರೋಧಿ ಬರಹಗಳನ್ನು ಗೀಚಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಖಲಿಸ್ತಾನಿ ಉಗ್ರರು ಭಾರತೀಯರ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಎಂದು ಪ್ರದೇಶದಲ್ಲಿರುವ ಭಾರತೀಯರು ಆತಂಕಕ್ಕೊಳಗಾಗಿದ್ದಾರೆ.

ಮೇ 24ರಂದು ಆಸ್ಟ್ರೇಲಿಯದ ಮೆಲ್ಬರ್ನ್‌ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ಈ ಘಟನೆ ನಡೆದಿದೆ.

ಇಂತಹ ಕೃತ್ಯದಿಂದ ಇಲ್ಲಿ ನೆಲೆಸಿರುವ ಭಾರತೀಯರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಈ ಕುರಿತು ನ್ಯೂ ಸೌಥ್ ವೇಲ್ಸ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

23 ವರ್ಷಗಳ ಹಿಂದೆ ಈ ಶ್ರೀ ಸ್ವಾಮಿ ನಾರಾಯಣ ದೇವಾಲಯ ನಿರ್ಮಿಸಲಾಗಿದೆ. ಆಸ್ಟ್ರೇಲಿಯದ ಭಾರತೀಯರಲ್ಲಿ ಶಾಂತಿ, ಸಾಮರಸ್ಯ ಬೆಳೆಸಿ, ಹಿಂದೂ ಧರ್ಮದ ಮೌಲ್ಯಗಳನ್ನು ಬಿತ್ತಲು ದೇವಾಲಯ ಆದ್ಯತೆ ನೀಡುತ್ತಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ದೇವಾಲಯದ ಮೇಲೆ ಖಲಿಸ್ತಾನಿ ಉಗ್ರರ ದಾಳಿಯ ನಂತರ ದೇಶದ ನಾನಾ ಕಡೆ ಇರುವ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುವ ಅಪಾಯ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತವಾಗಿದೆ.

ಸಂಸದ ಆಂಡ್ರ್ಯೂ ಚಾರ್ಲ್ಟನ್ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿರೂಪಗೊಂಡಿರುವ ದೇವಾಲಯದ ಗೋಡೆಗಳಿಗೆ ಬಣ್ಣ ಬಳಿಯುವಂತೆ ದೇವಾಲಯ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.

“ಈ ಘಟನೆ ಆಘಾತ ಉಂಟು ಮಾಡಿದೆ. ಇಂತಹ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು. ಆಸ್ಟ್ರೇಲಿಯದಲ್ಲಿ ನೆಲೆಸಿರುವ ಎಲ್ಲ ಸಮುದಾಯ ಶಾಂತಿಯಿಂದ ತಮ್ಮ ಧಾರ್ಮಿಕ ಕಾರ್ಯ ನಡೆಸುವ ಹಕ್ಕು ಹೊಂದಿದ್ದಾರೆ” ಎಂದು ಆಂಡ್ರ್ಯೂ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನನ್ನ ಮೇಲೆ ಅತ್ಯಾಚಾರವೆಸಗಿದ್ದ ಡೊನಾಲ್ಡ್ ಟ್ರಂಪ್; ಪತ್ರಕರ್ತೆ ಇ ಜೀನ್‌ ಕ್ಯಾರೊಲ್ ಗಂಭೀರ ಆರೋಪ

ಖಲಿಸ್ತಾನಿ ಉಗ್ರರು ಈ ವರ್ಷದ ಆರಂಭದಲ್ಲಿ ಮೆಲ್ಬರ್ನ್‌ನ ಮೂರು ಮತ್ತು ಬ್ರಿಸ್ಟೇನ್‌ನ ಎರಡು ಹಿಂದೂ ದೇಗುಲಗಳನ್ನು ವಿರೂಪಗೊಳಿಸಿದ್ದರು.

ಕಳೆದ ಮಾರ್ಚ್‌ನಲ್ಲಿ ಆಸ್ಟ್ರೇಲಿಯ ಪ್ರಧಾನಿ ಆ್ಯಂಟನಿ ಅಲ್ಬನೆಸ್ ಭಾರತಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ವಿಷಯದ ಕುರಿತು ಅವರೊಂದಿಗೆ ಚರ್ಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...