ಖಮೇನಿ ಹತ್ಯೆ: ‘ದಿಟ್ಟ ಪ್ರತಿಜ್ಞೆ’ ಮಾಡಿದ ಇರಾನ್

Date:

ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದೆ. ಖಮೇಲಿ ಹತ್ಯೆಯ ಬೆನ್ನಲ್ಲೇ, ಇರಾನ್‌ನ ಸೇನೆ ‘ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್’ ಅತ್ಯಂತ ಕಠಿಣ ಪ್ರತಿಜ್ಞೆ ಮಾಡಿದೆ. ‘ಖಮೇನಿ ಹಂತಕರನ್ನು ಶಿಕ್ಷಿಸುತ್ತೇವೆ’ ಎಂದು ಘೋಷಿಸಿದೆ.

- Advertisement -

ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರತಿಜ್ಞೆಯನ್ನು ಹಂಚಿಕೊಂಡಿರುವ ರೆವಲ್ಯೂಷನರಿ ಗಾರ್ಡ್ಸ್, “ಇರಾನ್ ಇಸ್ಲಾಮಿಕ್ ಗಣರಾಜ್ಯದ ಸಶಸ್ತ್ರ ಪಡೆಗಳ ಇತಿಹಾಸದಲ್ಲೇ ಅತ್ಯಂತ ಭೀಕರವಾದ ಆಕ್ರಮಣಕಾರಿ ಕಾರ್ಯಾಚರಣೆಯು ಈಗ ಯಾವುದೇ ಕ್ಷಣದಲ್ಲಿ ಪ್ರಾರಂಭವಾಗಲಿದೆ” ಎಂದು ಹೇಳಿಕೊಂಡಿದೆ. ತಮ್ಮ ದಾಳಿಯು ಅಮೆರಿಕದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ವಿವರಿಸಿದೆ. ಇರಾನ್‌ ಪ್ರತಿದಾಳಿ ನಡೆಸುತ್ತಿರುವ ನೆಲೆಗಳು ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಉಮ್ಮಾದ ಇಮಾಮ್‌ನ ಹಂತಕರಿಗೆ ಕಠಿಣ ಮತ್ತು ನಿರ್ಣಾಯಕ ಶಿಕ್ಷೆ ನೀಡಲು ಇರಾನ್‌ನ ಸೇಡಿನ ಕೈಗಳು ಸಿದ್ದವಾಗಿವೆ. ಹಂತರನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಗಾರ್ಡ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

1989ರಿಂದ ಇರಾನ್‌ನ ಸರ್ವೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ದೇಶಗಳು ತಮ್ಮ ಕಡು ಶತ್ರುವೆಂದು ಪರಿಗಣಿಸಿದ್ದ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಬೃಹತ್ ದಾಳಿಯ ಆರಂಭಿಕ ಹಂತದಲ್ಲೇ ಹತರಾಗಿದ್ದಾರೆ. ಇಸ್ಲಾಮಿಕ್ ಗಣರಾಜ್ಯವನ್ನು ಉರುಳಿಸುವ ಗುರಿಯನ್ನು ಹೊಂದಿರುವ ಅಮೆರಿಕ-ಇಸ್ರೇಲ್‌ ದಾಳಿಯು ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಈ ದಾಳಿಯಲ್ಲಿ ಖಮೇನಿ ಮಾತ್ರವಲ್ಲದೆ, ಖಮೇನಿಯವರ ಉನ್ನತ ಸಲಹೆಗಾರ ಅಲಿ ಶಮ್ಖಾನಿ ಮತ್ತು ರೆವಲ್ಯೂಷನರಿ ಗಾರ್ಡ್ಸ್ ಮುಖ್ಯಸ್ಥ ಜನರಲ್ ಮೊಹಮ್ಮದ್ ಪಾಕ್‌ಪೋರ್ ಕೂಡ ಹತರಾಗಿದ್ದಾರೆ ಎಂದು ಇಸ್ರೇಲ್ ಸೈನ್ಯ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...