ಖಮೇನಿ ಪುತ್ರನ ಪ್ರತೀಕಾರ ಶಪಥ, ಟ್ರಂಪ್‌ಗೆ ನೇರ ಎಚ್ಚರಿಕೆ

Date:

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಕಳೆದ ಫೆಬ್ರವರಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದ ಇರಾನ್‌ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಇತ್ತೀಚೆಗೆ ಮಶಾದ್‌ನಲ್ಲಿ ನೆರವೇರಿದೆ. ಇದರ ಬೆನ್ನಲ್ಲೇ ಅವರ ಪುತ್ರ ಮೊಜ್ತಾಬಾ ಖಮೇನಿ, ತಮ್ಮ ತಂದೆಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದು ‘ಖಚಿತ’ ಎಂದು ಗುಡುಗಿದ್ದಾರೆ. ಇದರಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ ಎದುರಾಗಿದೆ.

- Advertisement -

ಮತ್ತೊಂದೆಡೆ, ಇರಾನ್ ತನ್ನನ್ನು ಹತ್ಯೆ ಮಾಡಲು ಸಂಚು ರೂಪಿಸುತ್ತಿದೆ ಎಂಬ ಇಸ್ರೇಲ್‌ನ ಗುಪ್ತಚರ ಮಾಹಿತಿಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ತಮ್ಮ ಜೀವಕ್ಕೆ ಅಪಾಯವೊದಗಿದರೆ ಇರಾನ್ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದು, ಇರಾನ್‌ನತ್ತ ಅಮೆರಿಕವು ಭಾರಿ ಪ್ರಮಾಣದ ಸೇನಾ ತುಕಡಿಗಳನ್ನು ರವಾನಿಸುತ್ತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಜೂನ್ 17ರಂದು ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮಕ್ಕೆ ಸಂಬಂಧಿಸಿದ ಒಪ್ಪಂದ ಏರ್ಪಟ್ಟಿತ್ತಾದರೂ, ಎರಡೂ ಕಡೆಗಳಿಂದ ನಿರಂತರವಾಗಿ ಉಲ್ಲಂಘನೆಯಾಗಿದೆ. ಕಾರ್ಯತಂತ್ರದ ದೃಷ್ಟಿಯಿಂದ ಪ್ರಮುಖವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಹಡಗುಗಳ ಮೇಲೆ ದಾಳಿ ನಡೆಸಿದೆ ಎಂಬ ಆರೋಪಗಳಿವೆ.

ಇದೇ ವೇಳೆ, ಇರಾನ್‌ನ ಪರಮಾಣು ಮೂಲಸೌಕರ್ಯಗಳ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿರುವುದನ್ನು ಉಪಗ್ರಹ ಚಿತ್ರಗಳು ಬಹಿರಂಗಪಡಿಸಿವೆ. ಪಾರ್ಚಿನ್ ಸೇನಾ ನೆಲೆ ಸೇರಿದಂತೆ ಹಲವೆಡೆ ದುರಸ್ತಿ ಕಾರ್ಯಗಳು ನಡೆಯುತ್ತಿರುವುದು ಅಮೆರಿಕದ ಆತಂಕಕ್ಕೆ ಕಾರಣವಾಗಿದೆ. ದಾಳಿಯಿಂದಾಗಿ ಅವಶೇಷಗಳಡಿ ಸಿಲುಕಿರುವ ಸಂಸ್ಕರಿಸಿದ ಯುರೇನಿಯಂ ಅನ್ನು ತಮಗೆ ಒಪ್ಪಿಸದಿದ್ದರೆ ಇರಾನ್ ಜೊತೆ ಯಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸುರಕ್ಷತೆ ಕೇವಲ ರಾಜಕೀಯ ಭಾಷಣದ ಸರಕಾಗದಿರಲಿ

ಇರಾನ್‌ನ ಟೆಹರಾನ್ ಪ್ರಾಂತ್ಯದಲ್ಲಿ ಇತ್ತೀಚೆಗೆ ಸ್ಫೋಟಗಳ ಸದ್ದು ಕೇಳಿಬಂದಿದ್ದು, ಇದು ಹಳೆಯ ಮದ್ದುಗುಂಡುಗಳ ವಿಲೇವಾರಿ ಪ್ರಕ್ರಿಯೆ ಎಂದು ಇರಾನ್ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಲದೆ, ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಯು ‘ತಪ್ಪಿನಿಂದ’ ಸಂಭವಿಸಿದ್ದು, ಮಾತುಕತೆ ಮುರಿಯಲು ಯತ್ನಿಸುತ್ತಿರುವ ಕೆಲವು ತೀವ್ರವಾದಿಗಳ ಕೃತ್ಯ ಎಂದು ಇರಾನ್ ಅಧಿಕಾರಿಗಳು ಅಮೆರಿಕಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಬಿಕ್ಕಟ್ಟು ಶಮನಕ್ಕಾಗಿ ರಾಜತಾಂತ್ರಿಕ ಯತ್ನಗಳು ಮುಂದುವರಿದಿವೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಒಮಾನ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಅಮೆರಿಕ ತನ್ನ ಕಠಿಣ ನಿಲುವಿನಿಂದ ಹಿಂದೆ ಸರಿಯುವವರೆಗೆ ನೇರ ಮಾತುಕತೆಗೆ ಸಿದ್ಧವಿಲ್ಲ ಎಂದು ಇರಾನ್ ಕಡ್ಡಿಮುರಿದಂತೆ ಹೇಳಿದೆ. ಈ ನಡುವೆ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶಾಂತಿ ಕಾಪಾಡುವಂತೆ ಮತ್ತು ಒಪ್ಪಂದಕ್ಕೆ ಬದ್ಧರಾಗಿರುವಂತೆ ಉಭಯ ರಾಷ್ಟ್ರಗಳಿಗೆ ಒತ್ತಾಯಿಸಿದ್ದಾರೆ.

ಈ ಎಲ್ಲ ಬಿಕ್ಕಟ್ಟುಗಳ ನಡುವೆಯೇ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ವಿಶ್ವದ ವಿವಿಧ ದೇಶಗಳಿಂದ ಆಗಮಿಸಿದ್ದ ಸುಮಾರು 1.5 ಕೋಟಿಗೂ ಹೆಚ್ಚು ಜನರು* ಭಾಗವಹಿಸುವ ಮೂಲಕ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ಅಭೂತಪೂರ್ವ ಜನಸಾಗರವು ಖಮೇನಿ ಅವರ ಪ್ರಭಾವ ಹಾಗೂ ಜಾಗತಿಕ ಮಟ್ಟದಲ್ಲಿ ಅವರಿಗಿರುವ ಬೆಂಬಲವನ್ನು ಪ್ರದರ್ಶಿಸಿದ್ದು, ಪ್ರಸಕ್ತ ಸಂಘರ್ಷದ ಸಂದರ್ಭದಲ್ಲಿ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧದ ಜನಾಕ್ರೋಶವನ್ನು ಎತ್ತಿತೋರಿಸುವಂತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್: ವಿಶ್ವದಾಖಲೆಗಳ ಸುರಿಮಳೆಗೈದ 15ರ ಪೋರ ವೈಭವ್ ಸೂರ್ಯವಂಶಿ

ಭಾರತದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ರೈಸಿಂಗ್ ಸ್ಟಾರ್ಸ್...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...