ಕುವೈತ್‌ನ ತೈಲ ಘಟಕದ ಮೇಲೆ ಮತ್ತೆ ಇರಾನ್ ಡ್ರೋನ್ ದಾಳಿ: ಹೊತ್ತಿ ಉರಿದ ಮಿನಾ ಅಲ್-ಅಹ್ಮದಿ

Date:

ಕುವೈತ್‌ನ ಮಿನಾ ಅಲ್-ಅಹ್ಮದಿ ತೈಲ ಘಟಕದ ಮೇಲೆ ಮತ್ತೊಮ್ಮೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಘಟಕದ ಕೆಲವು ಭಾಗಗಳು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

- Advertisement -

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಹಲವು ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಇದನ್ನು ಓದಿದ್ದೀರಾ? ಮೋದಿ ಇಸ್ರೇಲ್ ದೋಸ್ತಿ; ಎಫೆಕ್ಟ್‌ ಮಾತ್ರ ಭಾರತಕ್ಕೆ!

ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ಸದ್ಯ ದಾಳಿ ಪ್ರತಿದಾಳಿಗಳು ಮುಂದುವರೆದಿದೆ.

ಇಸ್ರೇಲ್ ಟೆಹ್ರಾನ್ ಮೇಲೆ ಮತ್ತೆ ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದೆ. ಇದಾಗುತ್ತಿದ್ದಂತೆ ಇರಾನ್ ಕುವೈತ್‌ನ ತೈಲ ಘಟಕದ ಮೇಲೆ ಮತ್ತೆ ದಾಳಿ ನಡೆಸಿದೆ. ಇರಾನ್ ಕೊಲ್ಲಿಯಾದ್ಯಂತ ತೈಲ ಮತ್ತು ನೈಸರ್ಗಿಕ ಅನಿಲ ಸೌಲಭ್ಯಗಳ ಮೇಲೆ ಕೇಂದ್ರೀಕರಿಸಿದೆ. ಶುಕ್ರವಾರ ಮುಂಜಾನೆ ದುಬೈನಲ್ಲಿಯೂ ಈದ್ ಅಲ್-ಫಿತರ್ ಆಚರಣೆಯ ನಡುವೆ ಸ್ಫೋಟ ಸಂಭವಿಸಿದೆ. ಮಸೀದಿಗಳು ಪ್ರಾರ್ಥನೆಗೆ ಮೊದಲ ಕರೆ ನೀಡುತ್ತಿದ್ದಂತೆ ಸ್ಫೋಟಗಳು ಕೇಳಿಬಂದಿದೆ ಎಂದು ವರದಿಯಾಗಿದೆ.

ಇಸ್ರೇಲ್, ಇರಾನ್‌ನ ಮುಂದುವರೆದ ದಾಳಿ-ಪ್ರತಿದಾಳಿಯಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯೇ ಅಲುಗಾಡಿದೆ. ಅಮೆರಿಕ- ಇಸ್ರೇಲ್ ತನ್ನ ತೈಲ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದೆ. ಇದು ತೈಲ ಸಾಗಾಟಕ್ಕೆ ತೊಂದರೆ ಉಂಟು ಮಾಡಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ $119 ಕ್ಕಿಂತ ಅಧಿಕ ಅಂದರೆ ಶೇಕಡ 60ಕ್ಕಿಂತ ಹೆಚ್ಚು ಏರಿಕೆ ಕಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ...

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...