ಮಾಲ್ಡೀವ್ಸ್ ಸಂಸತ್ ಚುನಾವಣೆ | ಚೀನಾ ಬೆಂಬಲಿತ ಅಧ್ಯಕ್ಷ ಮುಯಿಝ್ಜು ಮತ್ತೆ ಅಧಿಕಾರಕ್ಕೆ; ಭಾರತದ ಪರ MDPಗೆ ಹೀನಾಯ ಸೋಲು

Date:

Advertisements

ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆಡಳಿತಾರೂಢ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳಲ್ಲಿ 90ರಲ್ಲಿ ಸ್ಪರ್ಧಿಸಿತ್ತು.

ಮಾಲ್ಡೀವ್ಸ್ ಸಂಸತ್ತಿನಲ್ಲಿ ಪಿಎನ್‌ಸಿ ಬಹುಮತವನ್ನು ಪಡೆದುಕೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, 86 ಸ್ಥಾನಗಳ ಪೈಕಿ ಪಿಎನ್ ಸಿ 60 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟವಾದ ಬಹುಮತ ಗಳಿಸಿಕೊಂಡಿದೆ. ಅಲ್ಲದೇ, ಕೆಲವು ಪಿಎನ್‌ಸಿ ಬೆಂಬಲ ಹೊಂದಿದ್ದ ಕೆಲವು ಸ್ವತಂತ್ರ ಅಭ್ಯರ್ಥಿಗಳು ಕೂಡ ಗೆಲುವು ಸಾಧಿಸಿದ್ದಾರೆ.

Advertisements

ಇನ್ನು ಪ್ರಮುಖ ವಿರೋಧ ಪಕ್ಷ ಹಾಗೂ ಭಾರತದ ಪರ ನಿಲುುವು ಹೊಂದಿದ್ದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಕೇವಲ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಮಾಲ್ಡೀವ್ಸ್ ಡೆವಲಪ್‌ಮೆಂಟ್ ಅಲಯನ್ಸ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮೊಹಮ್ಮದ್ ಸೋಲಿಹ್ ಅವರನ್ನು ಸೋಲಿಸುವ ಮೂಲಕ ಮುಯಿಝ್ಝಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸೊಲಿಹ್ ಅವರ ಪಕ್ಷ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಬಹುಮತವನ್ನು ಹೊಂದಿತ್ತು. ಇದು ಮುಯಿಝ್ಝಿ ಅವರಿಗೆ ಹೊಸ ಬಿಲ್‌ಗಳನ್ನು ಅಂಗೀಕರಿಸಲು ಕಷ್ಟಕರವಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಹೊಸ ಕಾನೂನುಗಳನ್ನು ಮಾಡಲು, ಹಾಲಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷವು ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು.

ಸಂಸತ್ತಿನ 93 ಸ್ಥಾನಗಳಿಗೆ ಆರು ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಗುಂಪುಗಳು 368 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಜನಸಂಖ್ಯೆಯ ಹೆಚ್ಚಳದ ನಂತರ, ಹಿಂದಿನ ಸಂಸತ್ತಿಗಿಂತ ಆರು ಹೆಚ್ಚು ಸ್ಥಾನಗಳಿವೆ. ಚುನಾವಣೆಯಲ್ಲಿ ಸುಮಾರು 2,84,000 ಜನರು ಮತ ಚಲಾಯಿಸಿದ್ದಾರೆ.

ಮುಯಿಝ್ಜುವಿನ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಸ್ವತಂತ್ರರು ಕಣದಲ್ಲಿದ್ದರು.

ಕಳೆದ ಕೆಲವು ತಿಂಗಳಿನಿಂದ ಭಾರತ ಹಾಗೂ ಮಾಲ್ಡೀವ್ಸ್ ನಡುವಿನ ಸಂಬಂಧ ಹಳಸಿತ್ತು. ಇದರಿಂದಾಗಿ, ಮಾಲ್ಡೀವ್ಸ್ ನಲ್ಲಿದ್ದ ಭಾರತದ ಸೇನೆಯನ್ನು ಹಿಂದಕ್ಕೆ ಹೋಗುವಂತೆ ಅಧ್ಯಕ್ಷ ಮುಯಿಝ್ಝು ಆದೇಶ ನೀಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X