ಲಷ್ಕರ್ ಸಹ-ಸಂಸ್ಥಾಪಕ, ಹಫೀಜ್ ಸಯೀದ್ ಆಪ್ತ ಅಮೀರ್ ಹಂಝಾ ಮೇಲೆ ಪಾಕ್‌ನಲ್ಲಿ ಗುಂಡಿನ ದಾಳಿ

Date:

ನಿಷೇಧಿತ ಉಗ್ರಗಾಮಿ ಸಂಘಟನೆ ಲಷ್ಕರ್-ಎ-ತಯಬಾದ (ಎಲ್‌ಇಟಿ) ಸಹ-ಸಂಸ್ಥಾಪಕ ಹಾಗೂ ಪ್ರಮುಖ ಉಗ್ರ ಹಫೀಜ್ ಸಯೀದ್‌ನ ಪರಮಾಪ್ತ ಅಮೀರ್ ಹಂಝಾ ಮೇಲೆ ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅಂತರದಲ್ಲಿ ಆತನ ಹತ್ಯೆಗೆ ನಡೆದ ಎರಡನೇ ಯತ್ನ ಇದಾಗಿದೆ.

- Advertisement -

ಲಾಹೋರ್‌ನ ಪಿಂಡಿ ಸ್ಟಾಪ್ ಬಳಿ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಗಾಯಗೊಂಡಿರುವ ಹಂಝಾನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಒಡೆತನದ ’24NewsHD’ ಖಾಸಗಿ ವಾಹಿನಿಗೆ ಸೇರಿದ ವಾಹನದಲ್ಲಿ ಈ ಘಟನೆ ನಡೆದಿದೆ. ವಾಹನದಲ್ಲಿದ್ದ ಧಾರ್ಮಿಕ ಕಾರ್ಯಕ್ರಮವೊಂದರ ನಿರೂಪಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ವರ್ಷ ಮೇ ತಿಂಗಳಿನಲ್ಲಿಯೂ ಹಂಝಾ ಮೇಲೆ ಇದೇ ಮಾದರಿಯ ದಾಳಿ ನಡೆದಿತ್ತು. ಆಗಲೂ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು. ಆದರೆ, ಸೊಂಟದ ಭಾಗಕ್ಕೆ ಗುಂಡು ತಗುಲಿದ್ದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದ. ಲಷ್ಕರ್-ಎ-ತಯಬಾ ಸಂಘಟನೆಯೊಳಗಿನ ಆಂತರಿಕ ಬಣಗಳ ಕಚ್ಚಾಟವೇ ಈ ಸರಣಿ ಗುಂಡಿನ ದಾಳಿಗಳಿಗೆ ಪ್ರಮುಖ ಕಾರಣ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಇರಾನ್‌: ಬಿತ್ತಿದ್ದನ್ನು ಬೆಳೆದ ಅಮೆರಿಕ, ಆಡಳಿತ ಬದಲಿಸುವ ಕೊಲೆಗಡುಕತನ ಕಡುಕಟ್ಟರ್ ವಾದವನ್ನು ಭುಗಿಲೆಬ್ಬಿಸಿತು!

ಅಮೆರಿಕದ ಖಜಾನೆ ಇಲಾಖೆಯ ವರದಿಗಳ ಪ್ರಕಾರ, ಹಂಝಾ ಲಷ್ಕರ್ ಸಂಘಟನೆಯ ಪ್ರಮುಖ ರೂವಾರಿಗಳಲ್ಲಿ ಒಬ್ಬ. 1985ರಲ್ಲಿ ಲಷ್ಕರ್ ಕಮಾಂಡರ್ ಝಾಕಿ-ಉರ್-ರೆಹಮಾನ್ ಲಖ್ವಿ ಮೂಲಕ ಉಗ್ರಗಾಮಿ ಜಾಲಕ್ಕೆ ಸೇರ್ಪಡೆಗೊಂಡಿದ್ದ ಈತ, ನಂತರ ಹಫೀಜ್ ಸಯೀದ್‌ನ ಅಣತಿಯಂತೆ ಕೆಲಸ ಮಾಡಲು ಆರಂಭಿಸಿದ್ದ. ಲಷ್ಕರ್-ಎ-ತಯಬಾ ಹಾಗೂ ಜಮಾತ್-ಉದ್-ದಾವಾ ಸಂಘಟನೆಗಳ ಮೇಲೆ ನಿಷೇಧ ಹೇರಲಾದ ಬಳಿಕ, 2018ರಲ್ಲಿ ಸಯೀದ್‌ನ ಸೂಚನೆಯ ಮೇರೆಗೆ ‘ಜೈಶ್-ಎ-ಮನ್ಕಫಾ’ ಎಂಬ ಹೊಸ ಉಗ್ರ ಸಂಘಟನೆಯನ್ನು ಕಟ್ಟುವಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ.

ಉಗ್ರ ಸಂಘಟನೆಯ ಮುಖವಾಣಿಯಾದ ವಾರಪತ್ರಿಕೆಯೊಂದರ ಸಂಪಾದಕನಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಹಂಝಾ, ಲಷ್ಕರ್-ಎ-ತಯಬಾದ ‘ವಿಶೇಷ ಕಾರ್ಯಾಚರಣೆ’ ವಿಭಾಗದ ಮುಖ್ಯಸ್ಥನಾಗಿದ್ದ. ಅಷ್ಟೇ ಅಲ್ಲದೆ, ಜೈಲಿನಲ್ಲಿರುವ ಬಂಧಿತ ಲಷ್ಕರ್ ಉಗ್ರರ ಬಿಡುಗಡೆಗೆ ಮಾತುಕತೆ ನಡೆಸಲು ಸಂಘಟನೆ ನಿಯೋಜಿಸಿದ್ದ ಪ್ರಮುಖ ಮೂವರು ಉಗ್ರರಲ್ಲಿ ಈತನು ಕೂಡ ಒಬ್ಬನಾಗಿದ್ದ. ಆತನ ಮೇಲೆ ನಡೆದಿರುವ ಈ ಸರಣಿ ದಾಳಿಗಳು ಪಾಕಿಸ್ತಾನದಲ್ಲಿರುವ ಉಗ್ರ ಸಂಘಟನೆಗಳ ಆಂತರಿಕ ಭಿನ್ನಮತವನ್ನು ರಟ್ಟು ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...