ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 300ಕ್ಕೂ ಹೆಚ್ಚು ಜನರು ಸಾವು

Date:

Advertisements

ಉತ್ತರ ಆಫ್ರಿಕಾದ ಮೊರಾಕೊದಲ್ಲಿ ಸೆ. 8ರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾತ್ರಿ 11:11ಕ್ಕೆ 18.5 ಕಿಲೋಮೀಟರ್ ಆಳದಲ್ಲಿ ಮರ್ರಾಕೇಶ್‌ನ ನೈಋತ್ಯಕ್ಕೆ 71 ಕಿಲೋಮೀಟರ್‌ಗಳಷ್ಟು ಭೂಕಂಪ ಸಂಭವಿಸಿದೆ. ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾಗಳಲ್ಲೂ ಭೂಕಂಪನದ ಅನುಭವವಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ವರದಿಗಳ ಪ್ರಕಾರ, ಭೂಕಂಪದಿಂದ ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳು ಮತ್ತು ಪುರಸಭೆ ಪ್ರದೇಶಗಳಲ್ಲಿ 296 ಜನರು ಸಾವನ್ನಪ್ಪಿದ್ದಾರೆ. 153 ಜನರು ಗಾಯಗೊಂಡಿದ್ದಾರೆ ಎಂದು ಮೊರಾಕೊದ ಆಂತರಿಕ ಸಚಿವಾಲಯ ತಿಳಿಸಿದೆ.

Advertisements

ಭೂಕಂಪದ ವೇಳೆ ಒಂದು ಕಡೆಯಲ್ಲಿ ಕಟ್ಟಡಗಳು ನೆಲಸಮವಾಗುತ್ತಿದ್ದರೆ, ಇನ್ನೊಂದು ಕಡೆ ಜನರೆಲ್ಲ ಮನೆಯ ಹೊರಗಡೆ ಬಂದು ಚೀರಾಡುತ್ತಿದ್ದರು. ಮಕ್ಕಳು ಅಳುತ್ತಿದ್ದರು. ಭೂಕಂಪದಿಂದ 10 ನಿಮಿಷಗಳ ಕಾಲ ವಿದ್ಯುತ್​​ ಮತ್ತು ನೆಟ್‌ವರ್ಕ್ ಸ್ಥಗಿತಗೊಂಡಿತ್ತು. ಈಗ ತಾತ್ಕಾಲಿಕ ನೆಟ್‍ವರ್ಕ್ ವ್ಯವಸ್ಥೆ ಮಾಡಲಾಗಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದಲ್ಲಿ ಗಾಯಗೊಂಡವರನ್ನು ಮರಕೇಶ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭೂಕಂಪದ ಕೇಂದ್ರಬಿಂದು ಅಲ್-ಹೌಜ್ ಪಟ್ಟಣದಲ್ಲಿರುವ ಮನೆಗಳು ಕುಸಿದು, ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯಾಚರಣೆ ನಡೆದಿದೆ. ಭೂಕಂಪನದ ತೀವ್ರತೆ ಹೆಚ್ಚಾದ ಕಾರಣ ಆ ಪ್ರದೇಶದಲ್ಲಿರುವ ಕಟ್ಟಡಗಳು ಸೇರಿದಂತೆ ಪುರಾತನ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಪೊಲೀಸ್​​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಕೋರಿದ್ದ ಪಿಐಎಲ್‌ ವಜಾ

ನೆರೆಯ ಅಲ್ಜೀರಿಯಾದಲ್ಲಿಯೂ ಭೂಕಂಪದ ಅನುಭವವಾಗಿದೆ. ಯಾವುದೇ ಹಾನಿ ಅಥವಾ ಸಾವುನೋವುಗಳನ್ನು ಉಂಟುಮಾಡಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ಭೂಕಂಪನ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ. ಹಲವಾರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾಗಳಲ್ಲೂ ಭೂಕಂಪನದ ಅನುಭವವಾಗಿದೆ. ಆದರೆ, ಯಾವುದೇ ಹೆಚ್ಚಿನ ಹಾನಿ ಉಂಟಾಗಿಲ್ಲ. ಆದರೆ ಇದರಿಂದ ಅಲ್ಲಿನ ಜನ ತುಂಬಾ ಭಯಭೀತರಾಗಿದ್ದಾರೆ ಎಂದು ಹೇಳಲಾಗಿದೆ.

2004ರಲ್ಲಿ ಭೂಕಂಪ 628 ಮಂದಿ ಸಾವು

ಮರ್ರಾಕೆಚ್‌ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕ್ಕೋದ ಅಲ್ ಹೋಸಿಮಾದಲ್ಲಿ ಭೂಕಂಪ ಸಂಭವಿಸಿದಾಗ ಕನಿಷ್ಠ 628 ಜನರು ಸಾವನ್ನಪ್ಪಿದ್ದರು. 926 ಜನರು ಗಾಯಗೊಂಡಿದ್ದರು. 1980ರಲ್ಲಿ ನೆರೆಯ ಅಲ್ಜೀರಿಯಾದಲ್ಲಿ 7.3 ತೀವ್ರತೆಯ ಭೂಕಂಪ ಉಂಟಾಗಿತ್ತು. ಈ ವೇಳೆ, 2,500 ಜನರ ಸಾವನ್ನಪ್ಪಿದ್ದರು. ಇದರಿಂದ ಕನಿಷ್ಠ 3,00,000 ಜನರು ನಿರಾಶ್ರಿತರಾಗಿದ್ದರು.

ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

“ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಉಂಟಾಗಿದೆ. ಇದರಿಂದ ತೀವ್ರ ನೋವಾಗಿದೆ. ಮೊರಾಕೊದ ಜನರೊಂದಿಗೆ ಭಾರತ ಇದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಸಂಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ” ಎಂದು ಪ್ರಧಾನಿ ಮೋದಿ ಅವರು ಟ್ವೀಟ್​​​ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X