ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

Date:

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ ನಾನಾ ದೇಶಗಳ ಗರಿಷ್ಠ 55,000 ಜನರಿಗೆ ಗ್ರೀನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ಅವುಗಳನ್ನು ಪರಿಶೀಲಿಸಿ ಅನುಮೋದಿಸುವಂತೆ ಅಮೆರಿಕ ಸರ್ಕಾರಕ್ಕೆ ಫೆಡರಲ್ ನ್ಯಾಯಾಲಯವು ಕಟ್ಟುನಿಟ್ಟಿನ ಆದೇಶಿಸಿದೆ. ಸ್ಯಾನ್ ಡಿಎಗೋ ಫೆಡರಲ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆಯಾದ ಜಿನ್ಸೂಕ್ ಒಹ್ತಾ ಅವರು ಈ ಪ್ರಾಥಮಿಕ ತೀರ್ಪು ನೀಡಿದ್ದಾರೆ.

- Advertisement -

ವೈವಿಧ್ಯತಾ ವೀಸಾ ಲಾಟರಿ (ಡೈವರ್ಸಿಟಿ ವೀಸಾ ಪ್ರೋಗ್ರಾಂ) ಕಾರ್ಯಕ್ರಮವನ್ನು ನಿಗದಿತ ಸಮಯಕ್ಕೆ ಆರಂಭಿಸಲು ಅಮೆರಿಕದ ವಿದೇಶಾಂಗ ಇಲಾಖೆ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲಾವಕಾಶ ಮೀರಿದೆ ಎಂದು ವಾದಿಸಿದ್ದ ಸರ್ಕಾರದ ನಿಲುವನ್ನು ತಳ್ಳಿಹಾಕಿರುವ ನ್ಯಾಯಾಲಯವು, 2027ನೇ ಸಾಲಿನ ಗ್ರೀನ್ ಕಾರ್ಡ್ ಲಾಟರಿ ನೋಂದಣಿ ಪ್ರಕ್ರಿಯೆಯನ್ನು ಮರುಪ್ರಾರಂಭಿಸುವಂತೆ ವಿದೇಶಾಂಗ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಕಳೆದ ಆಗಸ್ಟ್ ತಿಂಗಳಲ್ಲಿ ದಾಖಲಾದ ಮೊಕದ್ದಮೆಯನ್ನು ಪರಿಗಣಿಸಿ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಇದರನ್ವಯ, ಡೈವರ್ಸಿಟಿ ವೀಸಾ ಲಾಟರಿಯಲ್ಲಿ ಆಯ್ಕೆಯಾಗುವ ವ್ಯಕ್ತಿಗಳಿಗೆ ಇಲಾಖೆಯು ಕೂಡಲೇ ಮಾಹಿತಿ ನೀಡಬೇಕು ಹಾಗೂ ಎಂದಿನಂತೆ ತಮ್ಮ ವಾಡಿಕೆಯ ಪ್ರಕ್ರಿಯೆಗಳ ಮೂಲಕ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಲಾಟರಿ ಆಯ್ಕೆಯು ನೇರವಾಗಿ ಗ್ರೀನ್ ಕಾರ್ಡ್ ಖಾತರಿ ನೀಡುವುದಿಲ್ಲ ಎಂದು ಕಾನೂನು ತಜ್ಞರು ತಿಳಿಸಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಶಿಕ್ಷಣ, ಉದ್ಯೋಗದ ಅರ್ಹತೆ, ಹಿನ್ನೆಲೆ ಪರಿಶೀಲನೆ, ವೈದ್ಯಕೀಯ ತಪಾಸಣೆ ಸೇರಿದಂತೆ ಎಲ್ಲಾ ಅಮೆರಿಕನ್ ವಲಸೆ ಕಾನೂನುಗಳ ಕಠಿಣ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಬೇಕಾಗುತ್ತದೆ.
ವಲಸಿಗರ ಜನಸಂಖ್ಯೆಯಲ್ಲಿ ವೈವಿಧ್ಯತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ 1990ರ ವಲಸೆ ಕಾಯ್ದೆಯಡಿ ಈ ಕಾರ್ಯಕ್ರಮವನ್ನು ರೂಪಿಸಲಾಗಿತ್ತು. ಪ್ರಸ್ತುತ ನ್ಯಾಯಾಲಯದ ಈ ಮಧ್ಯಂತರ ಆದೇಶದಿಂದಾಗಿ ವಿಳಂಬವಾಗಿದ್ದ ಪ್ರಕ್ರಿಯೆಗೆ ಮರುಜೀವ ಸಿಕ್ಕಂತಾಗಿದ್ದು, ಸಾವಿರಾರು ಅರ್ಹ ಆಕಾಂಕ್ಷಿಗಳಿಗೆ ಅಮೆರಿಕದಲ್ಲಿ ಶಾಶ್ವತ ನಿವಾಸ ಪಡೆಯಲು ಹೊಸ ಭರವಸೆ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ ಮೋದಿ ಪ್ರಚಾರ ನಡೆಸಿದರೆ ಶಿಷ್ಟಾಚಾರವೇ?

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...