ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ್ದ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ.
ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ್ದ ನಂತರ ಹಲವು ಭಾರತೀಯರು ದ್ವೀಪ ರಾಷ್ಟ್ರಕ್ಕೆ ನಿಗದಿಪಡಿಸಿದ್ದ ಪ್ರಯಾಣವನ್ನು ರದ್ದುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
“ನೆರೆಯ ರಾಷ್ಟ್ರ ಭಾರತವನ್ನು ಅವಮಾನಿಸಿದ ಸಾಮಾಜಿಕ ಮಾಧ್ಯಮಗಳ ಪೋಸ್ಟ್ ಪ್ರಕಟಿಸಿದ ನಂತರ ಭಾರತ ಸರ್ಕಾರದ ಸಂಬಂಧದ ಬಗ್ಗೆ ವಿದೇಶಾಂಗ ಇಲಾಖೆ ಇಂದು ನಿಲುವು ಪ್ರಕಟಿಸಿದೆ” ಎಂದು ಮಾಲ್ಟೀವ್ಸ್ ಸರ್ಕಾರ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್ʼ ಮಕ್ಕಳೇ ಕೊಡುವಂತಾಗಬೇಕು
“ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಪ್ರಕಟಿಸಿದ ಸರ್ಕಾರಿ ಸ್ಥಾನದಲ್ಲಿದ್ದವರನ್ನು ಅವರ ಸ್ಥಾನದಿಂದ ಅಮಾನತುಗೊಳಿಸಲಾಗಿದೆ” ಎಂದು ಹೆಸರನ್ನು ಉಲ್ಲೇಖಿಸದೆ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಪ್ರಧಾನಿಯ ವಿರುದ್ಧ ಈ ಮೂವರು ಸಚಿವರು ಹಲವು ಭಾವಚಿತ್ರ ಹಾಗೂ ವಿಡಿಯೋಗಳನ್ನು ಪ್ರಕಟಿಸಿದ್ದರು. ಈ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾಗಿತ್ತು.